ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಬಾಲಕಿಯನ್ನು ಕತ್ತು ಸೀಳಿ ಕೊಂದಿದ್ದ ಆರೋಪಿ ಶಬೀಲ್‌ ಅಜ್ಮೀರ್‌ನಲ್ಲಿ ಅರೆಸ್ಟ್‌

Bengaluru Murder Case: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಶಬೀಲ್‌ನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿ ಬಂಧಿಸಲಾಗಿದೆ. ಮದುವೆಯಾಗಬೇಕಿದ್ದ ಹುಡುಗಿಯನ್ನೇ ಕೊಲೆ ಮಾಡಿ ಈತ ಪರಾರಿಯಾಗಿದ್ದ. ಇದೀಗ ಆರೋಪಿಯ ಬಂಧನವಾಗಿದೆ.

ಆರೋಪಿ ಶಬೀಲ್‌ ಮತ್ತು ಕೊಲೆಯಾದ ಬಾಲಕಿ.

ಬೆಂಗಳೂರು, ಮಾರ್ಚ್ 22: ಡಿಜೆ ಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣದ (Bengaluru Murder Case) ಹಂತಕನನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ತನ್ನನ್ನು ಮದುವೆಯಾಗಬೇಕಿದ್ದ ಭಾವಿ ಪತ್ನಿಯ ಮೇಲೆ ಅನುಮಾನಗೊಂಡು, ಕೊಲೆಗೈದು ಪರಾರಿಯಾಗಿದ್ದ ಆರೋಪಿ ಶಬೀಲ್‌ನನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿ ಬಂಧಿಸಲಾಗಿದೆ.

ಏನಿದು ಪ್ರಕರಣ?

ಕೋಲಾರ ಜಿಲ್ಲೆ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿ, ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳು. 2025ರ ಜೂನ್ ತಿಂಗಳಲ್ಲಿ ಈ ಬಾಲಕಿಯ ಜತೆ ಆರೋಪಿ ಶಬೀಲ್‌ನ ನಿಶ್ಚಿತಾರ್ಥ ನಡೆದಿತ್ತು. ಮನೆಯವರ ಸಮ್ಮತಿಯ ಮೇರೆಗೆ ಮದುವೆಯೂ ನಿಶ್ಚಯವಾಗಿತ್ತು.

ನಿಶ್ಚಿತಾರ್ಥದ ನಂತರ ಶಬೀಲ್‌ಗೆ ಬಾಲಕಿಯ ಮೇಲೆ ಅನುಮಾನ ಶುರುವಾಗಿತ್ತು. ಅವಳು ಬೇರೆಯವರ ಜತೆ ಸಂಪರ್ಕದಲ್ಲಿದ್ದಾಳೆ ಎಂದು ಶಂಕಿಸಿ, ಅವಳನ್ನು ಮುಗಿಸಲು ಪ್ಲ್ಯಾನ್‌ ಮಾಡಿದ್ದ. ಕಳೆದ ಗುರುವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಮನೆಯವರಿಗೆ ತಿಳಿಯದಂತೆ ಬಾಲಕಿಯನ್ನು ಡಿಜೆ ಹಳ್ಳಿಯ ಸಕ್ಕರೆ ಮಂಡಿ ಬಳಿಯ ಪಾಳುಬಿದ್ದ ಮನೆಗೆ ಕರೆಸಿಕೊಂಡಿದ್ದನು.

ಪಾಳುಬಿದ್ದ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಶಬೀಲ್ ತನ್ನ ಬಳಿಯಿದ್ದ ಚಾಕುವಿನಿಂದ ಬಾಲಕಿಯ ಎದೆಯ ಭಾಗ ಮತ್ತು ಗುಪ್ತಾಂಗಕ್ಕೆ ಮನಬಂದಂತೆ ಇರಿದು, ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ್ದ.

Belagavi News: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

ಪ್ರಕರಣ ದಾಖಲಿಸಿಕೊಂಡ ಡಿಜೆ ಹಳ್ಳಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಆರೋಪಿ ಶಬೀಲ್ ರಾಜಸ್ಥಾನಕ್ಕೆ ಓಡಿಹೋಗಿರುವ ಖಚಿತ ಮಾಹಿತಿ ಮೇರೆಗೆ ಅಲ್ಲಿಗೆ ತೆರಳಿದ ಪೊಲೀಸರು ಅಜ್ಮೀರ್‌ನಲ್ಲಿ ಆತನನ್ನು ಸೆರೆಹಿಡಿದಿದ್ದಾರೆ. ಸದ್ಯ ಆರೋಪಿಯನ್ನು ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.