ರಾಜ್ಯದಲ್ಲಿ ಮೊಬೈಲ್, ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ 150 ಬಿಲಿಯನ್ ಡಾಲರ್ ಹೂಡಿಕೆ ಆಕರ್ಷಿಸಲು ಕ್ರಮ: ಎಂ.ಬಿ.ಪಾಟೀಲ್
ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರ್ಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯ ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಐಸಿಇಎ ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ನಿಯೋಗದ ಜತೆ ಎಂ.ಬಿ.ಪಾಟೀಲ್ ಚರ್ಚೆ. -
ಬೆಂಗಳೂರು, ಡಿ.4: ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ ತಯಾರಿಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (MB Patil) ಸೂಚನೆ ನೀಡಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ವಿಸ್ತೃತ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.
ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರ್ಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯ ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದಿದ್ದಾರೆ.
ಮೊಬೈಲ್ ಫೋನ್ ಬಿಡಿಭಾಗಗಳು ಮಾತ್ರವಲ್ಲದೆ ಕೈಗಾರಿಕಾ ಎಲೆಕ್ಟ್ರಾನಿಕ್ಸ್, ಕಾರ್ಯತಂತ್ರ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಕೂಡ ಅಪಾರ ಅವಕಾಶಗಳಿವೆ. ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ಯೋಜನೆ ಮತ್ತು ಇತರ ರಾಜ್ಯಗಳಲ್ಲಿ ಇರುವ ಇಂತಹ ಯೋಜನೆಗಳ ಅಧ್ಯಯನ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಂಕಜ್ ಮಹೀಂದ್ರೂ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಸಬ್-ಅಸೆಂಬ್ಲಿ (ಡಿಸ್-ಪ್ಲೇ, ಕ್ಯಾಮೆರಾ ಮಾಡ್ಯೂಲ್ಸ್), ಬೇರ್ ಕಾಂಪೊನೆಂಟ್ಸ್ ಮತ್ತು ತಯಾರಿಕೆಗೆ ಬೇಕಾಗುವ ಸಾಧನಗಳಿಗೆ ಒತ್ತು ಕೊಡಲಾಗಿದೆ. ಇದಲ್ಲದೆ ವಹಿವಾಟನ್ನು ಆಧರಿಸಿ ಪ್ರೋತ್ಸಾಹನಾ ಭತ್ಯೆಗಳು, ಶೇಕಡ 25ರಷ್ಟು ಬಂಡವಾಳ ಸಬ್ಸಿಡಿ ಬೆಂಬಲ ಕೊಡಲಾಗುವುದು. ಈ ಯೋಜನೆಗೆ ಕೇಂದ್ರ ಸರ್ಕಾರವು 22,900 ಕೋಟಿ ರೂ. ವಿನಿಯೋಗಿಸುತ್ತಿದೆ ಎಂದು ಹೇಳಿದ್ದಾರೆ.
ಪ್ರಾಕ್ಸ್ಏರ್ ಇಂಡಿಯಾದಿಂದ ರಾಜ್ಯದಲ್ಲಿ 210 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ್
ಕೇಂದ್ರ ಸರ್ಕಾರವು ಈ ವರ್ಷದ ನವೆಂಬರ್ ತನಕ 7,172 ಕೋಟಿ ರೂ. ಮೊತ್ತದ 17 ಹೂಡಿಕೆ ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಇದರಿಂದ 11,800 ನೇರ ಉದ್ಯೋಗಗಳು ಸೃಷ್ಟಿಯಾಗಲಿದ್ದು, 65 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಉತ್ಪನ್ನಗಳು ತಯಾರಾಗಲಿವೆ ಎಂದು ಅವರು ತಿಳಿಸಿದ್ದಾರೆ. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.