ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Beary Koota 2026: ಬ್ಯಾರಿ ಸಮುದಾಯ ತಮ್ಮ ಅಸ್ಮಿತೆ, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು: ಸಿಎಂ ಸಲಹೆ

ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬ್ಯಾರಿ ಸಮುದಾಯ ಅಸ್ಮಿತೆ ಉಳಿಸಿಕೊಂಡು ಹೋಗಬೇಕು: ಸಿಎಂ

ಬೆಂಗಳೂರಿನಲ್ಲಿ ನಡೆದ ಬೃಹತ್ ಬ್ಯಾರಿ ಕೂಟ -2026ರಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ. -

Prabhakara R
Prabhakara R Feb 1, 2026 10:44 PM

ಬೆಂಗಳೂರು, ಫೆ.1: ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಂಗಳೂರಿನ ಬ್ಯಾರಿಸ್ ಸೆಂಟ್ರಲ್ ಕಮಿಟಿ ವತಿಯಿಂದ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಬೃಹತ್ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದ ಅವರು, ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಮುಖ್ಯ ಎಂದರು.

ಬ್ಯಾರಿಗಳು ಜಾತ್ಯತೀತರು

ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಅವರ ಸಂಸ್ಕೃತಿ, ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ ಎಂದು ಹೇಳಿದರು .

ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ

ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ಒಂದು ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ. ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ ಎಂದರು.

ಧರ್ಮವನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ

ಎಲ್ಲರೂ ಜಾತ್ಯತೀತರಾಗಿರುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸಬೇಕು, ಮನುಷ್ಯರಾಗಿ ಬಾಳಬೇಕು ಎಂದು ಎಲ್ಲಾ ಧರ್ಮಗಳೂ ಹೇಳುತ್ತವೆ. ಧರ್ಮವನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ ಎಂದರು.

ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ: ಸಿಎಂ ಭರವಸೆ

ಬ್ಯಾರಿ ಭವನ ನಿರ್ಮಾಣಕ್ಕೆ 5 ಕೋಟಿ ರೂ. ನೀಡಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ. ಮಂಗಳೂರು ಬ್ಯಾರಿ ಅಕಾಡೆಮಿಗೆ 3 ಕೋಟಿ, ಹಜ್ ಭವನಕ್ಕೆ 10 ಕೋಟಿ ಅನುದಾನ ನೀಡಲಾಗಿದೆ ಎಂದರು.

ಕೇಂದ್ರ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

ಬ್ಯಾರಿ ಸಮುದಾಯಕ್ಕೆ ಸೇರಿದ ಯು. ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.