ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste Census: ಯಾವುದೇ ಕಾರಣಕ್ಕೂ ʼಜಾತಿ ಸಮೀಕ್ಷೆʼ ಮುಂದೂಡಲ್ಲ ಎಂದ ಸಿಎಂ

CM Siddaramaiah: ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ವಾರ್ತಾಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಜಾತಿ ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯವರು ಈ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ʼಜಾತಿ ಸಮೀಕ್ಷೆʼ ಮುಂದೂಡಲ್ಲ ಎಂದ ಸಿಎಂ

-

Prabhakara R Prabhakara R Sep 19, 2025 6:09 PM

ಬೆಂಗಳೂರು, ಸೆಪ್ಟೆಂಬರ್ 19: ಹಿಂದುಳಿದ ವರ್ಗಗಳ ಆಯೋಗ (Caste Census) ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ವಾರ್ತಾಸೌಧದಲ್ಲಿ ಸಿಎಂ ಉತ್ತರಿಸಿದ್ದಾರೆ. ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.

ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು: ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಜಾತಿಗಣತಿ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಬೇರೆ ಪಕ್ಷದವರು ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ. ಜಾತಿಗಳ ಪಟ್ಟಿಯಲ್ಲಿ ಅಕ್ಷರಗಳ ಆಧಾರದ ಮೇಲೆ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆ ಮನೆಗೆ ಹೋಗಿ, ಎಲ್ಲರ ಮಾಹಿತಿ ಸಂಗ್ರಹಿಸುತ್ತೇವೆ.” ಎಂದು ತಿಳಿಸಿದರು.

ಮೇಲ್ಮನೆ ಮಾಜಿ ಸಭಾಪತಿ ಸುದರ್ಶನ್ ಅವರು ತಮ್ಮ ಭಾಷಣದಲ್ಲಿ ನಿಮಗೆ ಕೆಲವು ಸಲಹೆ ನೀಡಿದ್ದಾರಲ್ಲ ಎಂದು ಕೇಳಿದಾಗ, “ಅವರು ಸಲಹೆ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ನಿಮ್ಮ ಸಲಹೆಯನ್ನು ತಿಳಿಸಿ ಎಂದು ಅವರಿಗೆ ಹೇಳಿದ್ದೇವೆ. ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ನಾವು ಈ ವಿಚಾರವಾಗಿ ಚರ್ಚೆ ಮಾಡುತ್ತೇವೆ” ಎಂದರು.