ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA Veerendra Puppy: ಅಕ್ರಮ ಬೆಟ್ಟಿಂಗ್‌ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ಕಸ್ಟಡಿಗೆ

illegal betting case: ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ (illegal betting case) ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಶುಕ್ರವಾರ ಬಂಧಿಸಿದ್ದರು. ಅವರನ್ನು ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್‌ ಆದೇಶಿಸಿದೆ.

ಅಕ್ರಮ ಬೆಟ್ಟಿಂಗ್‌ ಪ್ರಕರಣ; ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ಕಸ್ಟಡಿಗೆ

Prabhakara R Prabhakara R Aug 24, 2025 4:29 PM

ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ (MLA Veerendra Puppy) ಅವರನ್ನು ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್‌ ಆದೇಶಿಸಿದೆ. ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಆದರೆ ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ಆಗಸ್ಟ್​ 28ರ ವರೆಗೆ ಶಾಸಕನನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಂತರ ರೂ. ನಗದು, ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕ್ಯಾಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್​ಗಳ ವ್ಯವಹಾರ ನಡೆದಿದೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್​ 28ರ ವರೆಗೆ ಶಾಸಕನನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

31 ಸ್ಥಳಗಳಲ್ಲಿ ಇಡಿ ದಾಳಿ, 12 ಕೋಟಿ ರೂ. ನಗದು, ಚಿನ್ನಾಭರಣ ವಶ

ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ (illegal betting case) ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ (K.C. Veerendra Puppy) ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಶುಕ್ರವಾರ ಬಂಧಿಸಿದ್ದರು. ಅವರಿಗೆ ಸಂಬಂಧಿಸಿದ 31 ಸ್ಥಳಗಳಲ್ಲಿ ದಾಳಿ ನಡೆಸಿ, 12 ಕೋಟಿ ರೂ. ನಗದು (ಒಂದು ಕೋಟಿ ರೂ. ವಿದೇಶಿ ಕರೆನ್ಸಿ ಸೇರಿ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿದ್ದರು.

ಶಾಸಕ ವಿರೇಂದ್ರ ಪಪ್ಪಿ ತನ್ನ ಸಹಚರರೊಂದಿಗೆ ಸಿಕ್ಕಿಂನ ಗ್ಯಾಂಗ್ಟಕ್‌ಗೆ ಪ್ರಯಾಣಿಸಿದ್ದರು. ಅಲ್ಲಿ ಅವರು ಕ್ಯಾಸಿನೊಗಾಗಿ ಭೂಮಿಯನ್ನು ಗುತ್ತಿಗೆಗೆ ಪಡೆಯುತ್ತಿದ್ದರು ಎನ್ನಲಾಗಿದೆ. ಇವರಿಗೆ ಸಂಬಂಧಿಸಿದ 31 ಸ್ಥಳಗಳ ಮೇಲೆ ದಾಳಿ ನಡೆಸಿ, 12 ಕೋಟಿ ನಗದು (ಸುಮಾರು ಒಂದು ಕೋಟಿ ವಿದೇಶಿ ಕರೆನ್ಸಿ ಸೇರಿ, 6 ಕೋಟಿ ಮೌಲ್ಯದ ಚಿನ್ನದ ಆಭರಣಗಳು ಮತ್ತು ಸುಮಾರು 10 ಕೆಜಿ ತೂಕದ ಬೆಳ್ಳಿ ವಸ್ತುಗಳು ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಸುದ್ದಿಯನ್ನೂ ಓದಿ | Sameer M D: ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಎಂ.ಡಿ. ಸಮೀರ್

ಗೋವಾದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ವಿರೇಂದ್ರ ಪಪ್ಪಿಗೆ ಸಂಬಂಧಿಸಿದ ಐದು ಕ್ಯಾಸಿನೊಗಳಾದ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊಗಳಲ್ಲಿ ಇಡಿ ಶೋಧ ನಡೆಸಿದೆ. ಆರೋಪಿತ ಕೆ. ಸಿ. ವೀರೇಂದ್ರ ಪಪ್ಪಿ ಅವರು ಹಲವಾರು ಆನ್ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿರುವುದು ಶೋಧ ಕಾರ್ಯಾಚರಣೆಯ ವೇಳೆ ಬಹಿರಂಗವಾಗಿದೆ.