ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru stampede case: ಕೆಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್‌ ಮಧ್ಯಂತರ ಆದೇಶ

Bengaluru Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾ. ಎಸ್‌.ಆರ್‌.ಕೃಷ್ಣ ಕುಮಾರ್‌ ಅವರು ನಡೆಸಿದ್ದಾರೆ. ಕರಣದಲ್ಲಿ ತನಿಖೆಗೆ ತಡೆ ನೀಡುವುದಿಲ್ಲ, ಆದರೆ ಕೆಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ.

ಕೆಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್‌

ಕೆಎಸ್‌ಸಿಎ ಅಧ್ಯಕ್ಷ ರಘುರಾಮ್‌ ಭಟ್‌

Prabhakara R Prabhakara R Jun 6, 2025 5:00 PM

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ (Bengaluru stampede case) ಕೆಎಸ್‌ಸಿಎ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ತನಿಖೆಗೆ ತಡೆ ನೀಡುವುದಿಲ್ಲ, ಆದರೆ ಕೆಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಇದರಿಂದ ಅರ್ಜಿದಾರರಾದ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎ.ಶಂಕರ್‌, ಖಜಾಂಚಿ ಇ.ಎಸ್‌. ಜೈರಾಮ್‌ ಅವರು ಕೊಂಚ ನಿರಾಳರಾಗುವಂತಾಗಿದೆ.

ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾ. ಎಸ್‌.ಆರ್‌.ಕೃಷ್ಣ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ ನಡೆಸಿದೆ. ಕೆಎಸ್‌ಸಿಎ ಪರ ವಕೀಲ ಅಶೋಕ್‌ ಹಾರನಹಳ್ಳಿ ವಾದ ಮಂಡಿಸಿ, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಸಿಎಂ ಅವರೇ ಸ್ವತಃ ಅಧಿಕಾರಿಗಳನ್ನು ಬಂಧಿಸಲು ಸೂಚಿಸಿದ್ದಾರೆ. ಡಾ.ಮೈಕೆಲ್‌ ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ, ಮ್ಯಾಜಿಸ್ಟ್ರಿಯಲ್‌ ತನಿಖೆ ಹಾಗೂ ಎಫ್‌ಐಆರ್‌ ದಾಖಲಿಸಿ ಸಿಐಡಿಯಿಂದಲೂ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಈ ಪ್ರತಿಕ್ರಿಯಿಸಿದ ಜಡ್ಜ್‌, ಪ್ರಕರಣದ ತನಿಖೆಗೆ ತಡೆ ಕೊಡುವುದಿಲ್ಲ, ಯಾವ ರಕ್ಷಣೆ ಅಗತ್ಯವಿದೆ ನೋಡೋಣ. ಇನ್ನು ಪ್ರಕರಣದಲ್ಲಿ ಆರೋಪಿಗಳು ವಿಚಾರಣೆಗೆ ಸಹಕರಿಸಬೇಕು ಹಾಗೂ ಕೋರ್ಟ್‌ ವ್ಯಾಪ್ತಿ ಬಿಟ್ಟು ಹೋಗಬಾರದು ಎಂದು ಷರತ್ತು ವಿಧಿಸಿ, ಕೆಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಮಧ್ಯಂತರ ಆದೇಶ ನೀಡಿದರು.

ನಿಖಿಲ್‌ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್‌

ಕಾಲ್ತುಳಿತ ಪ್ರಕರಣದಲ್ಲಿ ಬಂಧನವಾಗಿರುವ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನ ಮಾರ್ಕೆಟಿಂಗ್‌ ಹೆಡ್‌ ನಿಖಿಲ್‌ ಸೋಸಲೆಗೆ ಸದ್ಯಕ್ಕೆ ಯಾವುದೇ ರಿಲೀಫ್‌ ಸಿಕ್ಕಿಲ್ಲ. ನಿಖಿಲ್‌ ಸೋಸಲೆ ಬಂಧನ ಪ್ರಶ್ನಿಸಿ ಪತ್ನಿ ಅರ್ಜಿ ರಿಟ್‌ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ವಿಚಾರಣೆ ಜೂನ್‌ 9 ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆಯಾಗಿದೆ.

ಎಫ್‌ಐಆರ್‌ ದಾಖಲಾಗಿದ್ದರಿಂದ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನ ಮಾರ್ಕೆಟಿಂಗ್‌ ಹೆಡ್‌ ನಿಖಿಲ್‌ ಸೋಸಲೆ, ಆರ್‌ಸಿಬಿ ಸಿಬ್ಬಂದಿ ಸುಮಂತ್‌, ಡಿಎನ್‌ಎ ಮ್ಯಾನೇಜರ್‌ ಕಿರಣ್‌ ಹಾಗೂ ಡಿಎನ್‌ಎ ಮ್ಯಾನೇಜ್‌ಮೆಂಟ್‌ನ ಸುನೀಲ್‌ ಮ್ಯಾಥ್ಯೂ ಅವರನ್ನು ಬಂಧನವಾಗಿತ್ತು.

ಈ ಸುದ್ದಿಯನ್ನೂ ಓದಿ | Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಎಚ್‌ಡಿಕೆ ವಾಗ್ದಾಳಿ