Rani Chennamma Maidan: ಹುಬ್ಬಳ್ಳಿ ಈದ್ಗಾ ಮೈದಾನ ಇನ್ಮುಂದೆ ʼರಾಣಿ ಚೆನ್ನಮ್ಮ ಮೈದಾನʼ; ಪಾಲಿಕೆಯಿಂದ ಘೋಷಣೆ
Hubli News: ಈ ಬಾರಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಶಾಂತಿಯುತವಾಗಿ ನಡೆದಿದೆ. ಗಣೇಶೋತ್ಸವದ ಕಾರ್ಯಕ್ರಮದಲ್ಲಿಯೇ ಈದ್ಗಾ ಮೈದಾನಕ್ಕೆ ʼರಾಣಿ ಚೆನ್ನಮ್ಮ ಮೈದಾನʼ ಎಂದು ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ಉಪ ಮೇಯರ್ ಸಂತೋಷ್ ಚೌಹ್ವಾಣ್ ಅಧಿಕೃತವಾಗಿ ಘೋಷಿಸಿದ್ದಾರೆ.

-

ಹುಬ್ಬಳ್ಳಿ: ಪ್ರತಿ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ ವಿವಾದಕ್ಕೆ ಕಾರಣವಾಗುತ್ತಿದ್ದ ಹುಬ್ಬಳ್ಳಿಯ ಈದ್ಗಾ ಮೈದಾನವನ್ನು (Hubli Idgah Maidan) 'ರಾಣಿ ಚೆನ್ನಮ್ಮ ಮೈದಾನʼ ಎಂದು ಹುಬ್ಬಳ್ಳಿ ಮಹಾನಗರ ಪಾಲಿಕೆಯು ಮರುನಾಮಕರಣ ಮಾಡಿದೆ. ಈ ಬಗ್ಗೆ ಉಪ ಮೇಯರ್ ಸಂತೋಷ್ ಚೌಹ್ವಾಣ್ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಬಾರಿಯ ಗಣೇಶೋತ್ಸವವು ಈದ್ಗಾ ಮೈದಾನದಲ್ಲಿ ಶಾಂತಿಯುತವಾಗಿ ನಡೆದಿದೆ. ಗಣೇಶೋತ್ಸವದ ಕಾರ್ಯಕ್ರಮದಲ್ಲಿಯೇ ಈದ್ಗಾ ಮೈದಾನಕ್ಕೆ ʼರಾಣಿ ಚೆನ್ನಮ್ಮ ಮೈದಾನʼ (Rani Chennamma Maidan) ಎಂದು ಮರುನಾಮಕರಣ ಮಾಡಲಾಗಿದೆ.
ಈ ಬಗ್ಗೆ ಮಹಾನಗರ ಪಾಲಿಕೆಯು ಠರಾವು ಪಾಸ್ ಮಾಡಿದೆ. ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಮೈದಾನವೆಂದು ಮರುನಾಮಕರಣ ಮಾಡಿರುವುದು ಹಿಂದೂಪರ ಸಂಘಟನೆಗಳು ಹಾಗೂ ಗಜಾನನ ಉತ್ಸವ ಸಮಿತಿಯವರಲ್ಲಿ ಸಂತಸ ತಂದಿದೆ.
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಗಣೇಶೋತ್ಸವವು ವಿಸರ್ಜನೆಯ ಮೂಲಕ ಸಂಪನ್ನಗೊಂಡಿದೆ. ವಿವಾದದಲ್ಲೇ ಅಂತ್ಯಗೊಳ್ಳುತ್ತಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶೋತ್ಸವ ಈ ಬಾರಿ ಅತ್ಯಂತ ಶಾಂತಿಪ್ರಿಯವಾಗಿ ನಡೆದಿದೆ.
ಈ ಸುದ್ದಿಯನ್ನೂ ಓದಿ | Ganesh Chathurthi 2025: ಬಾಲಿವುಡ್ ತಾರೆಯರ ಗಣೇಶ ಹಬ್ಬದ ಸಂಭ್ರಮ ಹೇಗಿತ್ತು? ಇಲ್ಲಿದೆ ಫೋಟೊ
ಈ ಬಾರಿ ಮುಖ್ಯ ಅತಿಥಿಯಾಗಿ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಾಸಕ ಮಹೇಶ್ ಟೆಂಗಿನಕಾಯಿ, ಗಜಾನನ ಉತ್ಸವ ಮಹಾಮಂಡಳಿ ಅಧ್ಯಕ್ಷ ಸಂಜೀವ ಬಡಾಸ್ಕರ್ ಸೇರಿದಂತೆ ಹಲವರು ಪ್ರತಾಪ್ ಸಿಂಹಗೆ ಸಾಥ್ ನೀಡಿದರು.