ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದ ಶಾಲೆ, ಪಿಯು ಕಾಲೇಜುಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆ ಕಡ್ಡಾಯ: ಶಿಕ್ಷಣ ಇಲಾಖೆ ಆದೇಶ

Sanitary napkins mandatory: 6 ರಿಂದ 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ಜತೆಗೆ ಪ್ರತ್ಯೇಕ ಶೌಚಾಲಯ, ನೈರ್ಮಲ್ಯ ನಿರ್ವಹಣೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಶಾಲೆ, ಪಿಯು ಕಾಲೇಜುಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆ ಕಡ್ಡಾಯ

-

Prabhakara R
Prabhakara R Nov 24, 2026 4:30 PM

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಯೋಡಿಗ್ರೇಡಬಲ್ ಸ್ಯಾನಿಟರಿ ಪ್ಯಾಡ್‌ಗಳನ್ನು (Sanitary Pads) ವಿತರಿಸುವುದು ಕಡ್ಡಾಯ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಮಹತ್ವದ ಸುತ್ತೋಲೆ ಹೊರಡಿಸಲಾಗಿದೆ.

ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಋತುಚಕ್ರದ ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಸಂಬಂಧೊಟ್ಟ ಅಧಿಕಾರಿಗಳಿಗೆ ಇಲಾಖೆ ನಿರ್ದೇಶನ ನೀಡಿದೆ.

6 ರಿಂದ 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ಜತೆಗೆ ಪ್ರತ್ಯೇಕ ಶೌಚಾಲಯ, ನೈರ್ಮಲ್ಯ ನಿರ್ವಹಣೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ. ಸುಪ್ರೀಂ ಕೋರ್ಟ್ 2026ರ ಜನವರಿ 30ರಂದು ನೀಡಿರುವ ತೀರ್ಪಿನ ಅನುಸಾರ ಈ ಕ್ರಮ ಕೈಗೊಳ್ಳಲಾಗಿದೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕವಾಗಿ ವಿಘಟನೆಯಾಗುವ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸಬೇಕು. ಸಾಧ್ಯವಾದಷ್ಟು ಶಾಲೆಗಳ ಶೌಚಾಲಯಗಳಲ್ಲಿಯೇ ವೆಂಡಿಂಗ್ ಯಂತ್ರಗಳನ್ನು ಅಳವಡಿಸಿ ಪ್ಯಾಡ್‌ಗಳು ಸುಲಭವಾಗಿ ದೊರೆಯುವಂತೆ ಮಾಡಬೇಕು ಅಥವಾ ಶಾಲೆಯ ನಿಗದಿತ ಸ್ಥಳ ಅಥವಾ ಜವಾಬ್ದಾರಿಯುತ ಅಧಿಕಾರಿಗಳ ಮೂಲಕ ವಿತರಿಸಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರಿನ 86 ವಿಶೇಷಚೇತನರಿಗೆ ಆಸರೆಯಾದ ‘ಲರ್ನಿಂಗ್ ಫಾರ್ ಲೈಫ್’: ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

ಹೆಣ್ಣುಮಕ್ಕಳಿಗೆ ಪ್ರತ್ಯೇಕ ಹಾಗೂ ಶುದ್ಧವಾದ ಶೌಚಾಲಯ, ನಿರಂತರ ನೀರು ಮತ್ತು ಕೈ ತೊಳೆಯುವ ವ್ಯವಸ್ಥೆ ಇರಬೇಕು. ಬಳಸಿದ ಪ್ಯಾಡ್‌ಗಳ ವಿಲೇವಾರಿಗಾಗಿ ಮುಚ್ಚಳವಿರುವ ಡಸ್ಟ್‌ಬಿನ್‌ಗಳು ಅಥವಾ ಪರಿಸರಸ್ನೇಹಿ ಇನ್ಸಿನರೇಟರ್ ವ್ಯವಸ್ಥೆ ಮಾಡಬೇಕು. ನಿಯಮಗಳನ್ನು ಪಾಲಿಸದ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.