ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ration Card e-KYC app: ಪಡಿತರದಾರರಿಗೆ ಗುಡ್‌ನ್ಯೂಸ್‌;‌ ರೇಷನ್‌ ಕಾರ್ಡ್ ಇ-ಕೆವೈಸಿ ಮಾಡಲು 'ಅನ್ನಸೇವೆ' ಆ್ಯಪ್ ಬಿಡುಗಡೆ

Ration Card e-KYC app: ಬೆಂಗಳೂರಿನ ಶಿವಾಜಿನಗರದ ರಾಜೀವ್ ಗಾಂಧಿ ಕಾಲೋನಿಯಲ್ಲಿ ಇಂದು ‘ಅನ್ನ ಸೇವಾ’ ಇ-ಕೆವೈಸಿ ಮೊಬೈಲ್ ಆ್ಯಪ್‌ಗೆ ಆಹಾರ ಸಚಿವ ರಿಜ್ವಾನ್‌ ಅರ್ಷದ್‌ ಚಾಲನೆ ನೀಡಿದ್ದಾರೆ. ರಾಜ್ಯದ 8 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಪೈಲೆಟ್ ಹಂತದ ಕಾರ್ಯಾರಂಭವಾಗಿದೆ.

ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು 'ಅನ್ನಸೇವೆ' ಆ್ಯಪ್ ಬಿಡುಗಡೆ

-

Prabhakara R
Prabhakara R Oct 1, 2026 5:02 PM

ಬೆಂಗಳೂರು: ಪಡಿತರದಾರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಸರ್ವರ್‌ ಸಮಸ್ಯೆ ಹಿನ್ನೆಲೆಯಲ್ಲಿ ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಲು ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳ ಬಳಿ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಕುಳಿತು ಇ-ಕೆವೈಸಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ʼಅನ್ನ ಸೇವೆʼ ಮೊಬೈಲ್‌ ಆ್ಯಪ್ ಬಿಡುಗಡೆ ಮಾಡಲಾಗಿದೆ.

ʼಅನ್ನಸೇವೆʼ ಆ್ಯಪ್ ಅನ್ನು ಮೊದಲ ಹಂತದಲ್ಲಿ ಪೈಲೆಟ್‌ ಯೋಜನೆಯಡಿ ರಾಜ್ಯದ 8 ಜಿಲ್ಲೆಗಳಲ್ಲಿ ಮಾತ್ರ ಲಾಂಚ್‌ ಮಾಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಉಡುಪಿ, ಹಾವೇರಿ, ಕಾರವಾರ, ಬಳ್ಳಾರಿ, ಬೀದರ್, ಕೊಪ್ಪಳ ಜಿಲ್ಲೆಯ ಜನರು ಈ ಆ್ಯಪ್ ಬಳಸಬಹುದಾಗಿದ್ದು, 20 ದಿನದ ಬಳಿಕ ಅಧಿಕೃತವಾಗಿ ಉಳಿದ ಎಲ್ಲಾ ಜಿಲ್ಲೆಗೆ ಈ ಸೌಲಭ್ಯ ಸಿಗುವಂತೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ಬಗ್ಗೆ ಸಚಿವ ರಿಜ್ವಾನ್ ಅರ್ಷದ್ ಮಾತನಾಡಿ, ಶಿವಾಜಿನಗರದ ರಾಜೀವ್ ಗಾಂಧಿ ಕಾಲೋನಿಯಲ್ಲಿ ಇಂದು ‘ಅನ್ನ ಸೇವಾ’ ಇ-ಕೆವೈಸಿ ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಾಯಿತು. ಇದು ರಾಜ್ಯದ 8 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಪೈಲೆಟ್ ಹಂತದ ಕಾರ್ಯಾರಂಭವಾಗಿದೆ ಎಂದು ಹೇಳಿದ್ದಾರೆ.

ಇನ್ನೂ ರೇಷನ್ ಕಾರ್ಡ್​ ಇ-ಕೆವೈಸಿ ಮಾಡಿಸಿಲ್ಲವೆ? ಇಲ್ಲಿದೆ ಗುಡ್‌ನ್ಯೂಸ್‌; ದಿನಾಂಕ ವಿಸ್ತರಿಸಿದ ಸರ್ಕಾರ

ಫಲಾನುಭವಿಗಳಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಸುಲಭಗೊಳಿಸುವ ಜೊತೆಗೆ, ಪಡಿತರ ಸೇವೆಗಳಲ್ಲಿ ತಂತ್ರಜ್ಞಾನ, ಪಾರದರ್ಶಕತೆ ಮತ್ತು ವೇಗವನ್ನು ಮತ್ತಷ್ಟು ಹೆಚ್ಚಿಸುವುದು ಈ ಉಪಕ್ರಮದ ಪ್ರಮುಖ ಉದ್ದೇಶವಾಗಿದೆ. ಡಿಜಿಟಲ್ ತಂತ್ರಜ್ಞಾನದ ಮೂಲಕ ಪಡಿತರ ಸೇವೆಯನ್ನು ಜನರಿಗೆ ಇನ್ನಷ್ಟು ಹತ್ತಿರವಾಗಿಸುವ ಸಂಕಲ್ಪ ನಮ್ಮ ಸರ್ಕಾರದ್ದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.