ಬೆಂಗಳೂರು: ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರಿ ಚಂದ್ರಶೇಖರ ಸ್ವಾಮೀಜಿ (Chandrashekaranatha Swamiji) ಅವರ ಅಂತ್ಯಸಂಸ್ಕಾರವು ಮಠದ ಆವರಣದಲ್ಲಿ ನಾಥ ಸಂಪ್ರಾದಾಯದಂತೆ ಶನಿವಾರ ನೆರವೇರಿತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ನಿಧನರಾಗಿದ್ದರು. ಕೆಂಗೇರಿಯ ಮಠದ ಆವರಣದಲ್ಲಿ ಬೆಳಗ್ಗೆಯಿಂದಲೇ ಶ್ರೀಗಳ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಚಂದ್ರಶೇಖರನಾಥ ಸ್ವಾಮೀಜಿ ಅಂತಿಮ ಸಂಸ್ಕಾರ ಮುನ್ನ ಮಠದ ಆವರಣದಲ್ಲಿ ವಿಧಿ ವಿಧಾನದ ಪೂಜೆ ನಡೆಸಲಾಯಿತು. ಶ್ರೀ ಭಾನುಪ್ರಕಾಶ್ ಗುರೂಜಿ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು.
ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ, ಸೇರಿ ಹಲವು ನಾಯಕರು ಮತ್ತು ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಮಠದ ಶ್ರೀಗಳು ಸೇರಿದಂತೆ ಹಲವು ಮಠಾಧೀಶರು ಶ್ರೀಗಳ ಅಂತಿಮ ದರ್ಶನ ಪಡೆದರು.
ಈ ಸುದ್ದಿಯನ್ನೂ ಓದಿ | Chandrashekhar Swamiji Passes away: ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ