"ಬೆಂಗಳೂರಲ್ಲಿ ಕೇಸರಿಯ ಸೂರ್ಯ ಉದಯಿಸಿದ್ದಾನೆ" ; ಎಚ್‌ಎಎಲ್‌ನಲ್ಲಿ ಪ್ರಧಾನಿ ಮೋದಿ ಅಬ್ಬರ
ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮೋದಿ ಅವರಿಗೆ ಬೆಂಗಳೂರಿನ ಎಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸನ್ಮಾನ ಕಾರ್ಯಕ್ರಮ ನೆರವೇರಿತು. ಈ ವೇಳೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿಯವರಿಗೆ ಮೈಸೂರು ಶಲ್ಯ, ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, '13 ಕೆಜಿಯ ಬೃಹತ್ ಬೆಳ್ಳಿಯ ಪ್ರತಿಮೆಯನ್ನು ನೀಡಿ ಗೌರವಿಸಿದರು.
ಸಂಗ್ರಹ ಚಿತ್ರ -
ಬೆಂಗಳೂರು: ಪ್ರಧಾನಿ ಮೋದಿ (PM Modi) ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮೋದಿ ಅವರಿಗೆ ಬೆಂಗಳೂರಿನ ಎಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸನ್ಮಾನ ಕಾರ್ಯಕ್ರಮ ನೆರವೇರಿತು. ಈ ವೇಳೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿಯವರಿಗೆ ಮೈಸೂರು ಶಲ್ಯ, ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, '13 ಕೆಜಿಯ ಬೃಹತ್ ಬೆಳ್ಳಿಯ ಪ್ರತಿಮೆಯನ್ನು ನೀಡಿ ಗೌರವಿಸಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕರ್ನಾಟಕದೊಂದಿಗಿನ ತಮ್ಮ ಅವಿನಾಭಾವ ಸಂಬಂಧ ಮತ್ತು ದೇಶದ ಅಭಿವೃದ್ಧಿಯಲ್ಲಿ ಕನ್ನಡಿಗರ ಪಾತ್ರವನ್ನು ಹೊಗಳಿದ್ದಾರೆ.
ನಾನು ಈ ಹಿಂದೆ ಸಾಕಷ್ಟು ಬಾರಿ ಬೆಂಗಳೂರಿಗೆ ಬಂದಿದ್ದೇನೆ. ಸಾಮಾನ್ಯವಾಗಿ ವಿಮಾನ ನಿಲ್ದಾಣದ ಬಳಿ ಸಣ್ಣ ಕಾರ್ಯಕ್ರಮ ಮುಗಿಸಿ ಹೋಗುತ್ತಿದ್ದೆ. ಆದರೆ ಈ ಬಾರಿ ಏರ್‌ಪೋರ್ಟ್ ಬಳಿ ಇಷ್ಡು ದೊಡ್ಡ ಕಾರ್ಯಕ್ರಮ ಮಾಡಿದ್ದೀರಿ. ನನಗೆ ಅನಿಸುತ್ತೆ ಬೆಂಗಳೂರಿನ ಈ ನೆಲದಲ್ಲಿ ಕೇಸರಿ ಸೂರ್ಯ ಉದಯವಾಗಿದೆ. ಇಷ್ಟು ಬೆಳಗ್ಗೆ ಎಲ್ಲರೂ ಸಂಘಟಿತರಾಗಿ ಬಂದಿದ್ದೀರಿ. ನಿಮಗೆ ನಾನು ಆಭಾರಿ ಆಗಿದ್ದೇನೆ. ನಿಮ್ಮ ಕಣ್ಣುಗಳಲ್ಲಿ ನೋಡ್ತಿದ್ದೇನೆ. ನಿಮ್ಮ ಪ್ರೀತಿಯ ಕಣ್ಣುಗಳಲ್ಲಿ ನಾನು ಪಶ್ಚಿಮ ಬಂಗಾಳದ ಗೆಲುವಿನ ಸಂಭ್ರಮವನ್ನು ಕಾಣುತ್ತಿದ್ದೇನೆ' ಎಂದು ಮೋದಿ ಹೇಳಿದ್ದಾರೆ.
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮೋದಿ, 'ಕಳೆದ ಮೂರು ಚುನಾವಣೆಗಳಿಂದ ದೇಶದ ಜನತೆ ಕಾಂಗ್ರೆಸ್‌ಗೆ ಅವಕಾಶವೇ ಇಲ್ಲದಂತೆ ಮಾಡಿದ್ದಾರೆ. ಅವರ ಬಳಿ ಅಭಿವೃದ್ಧಿಯ ಅಜೆಂಡಾ ಇಲ್ಲ, ಕೇವಲ ನಿರಾಶೆ ಮನೆಮಾಡಿದೆ. ನಮ್ಮದು 'ಸಬ್ ಕಾ ಸಾತ್ ಸಬ್ ಕಾ ವಿಕಾಸ್' ಮಂತ್ರವಾದರೆ, ಕಾಂಗ್ರೆಸ್‌ನದ್ದು ಅಧಿಕಾರಕ್ಕೆ ಬಂದು ಜನರಿಗೆ ವಿಶ್ವಾಸದ್ರೋಹ ಮಾಡುವ ತಂತ್ರ' ಎಂದು ಟೀಕಿಸಿದರು. ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಖಜಾನೆ ಲೂಟಿ ಹೊಡೆಯುತ್ತಿದ್ದಾರೆ. ಜನರು ಸಮಸ್ಯೆಗಳಿಂದ ಬಳಲುತ್ತಿದ್ದರೆ, ಸರ್ಕಾರದ ನಾಯಕರು ಮಾತ್ರ ಲೂಟಿ ಹೊಡೆದ ಹಣಕ್ಕಾಗಿ ಆಂತರಿಕ ಜಗಳ ಮತ್ತು ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದಾರೆ. ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆ ಗೊತ್ತಿದೆ, ಕರ್ನಾಟಕದಲ್ಲೂ ಅದೇ ಹಾದಿ ಮುಂದುವರಿಯುತ್ತಿದೆ ಎಂದು ಮೋದಿ ಹೇಳಿದರು.
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸಿದ್ದನ್ನು ಪ್ರಸ್ತಾಪಿಸಿದ ಪ್ರಧಾನಿ, ಕಾಂಗ್ರೆಸ್‌ನವರು ಮಹಿಳಾ ಮೀಸಲಾತಿಯನ್ನು ತಡೆದರು. ಇದು ಜಾರಿಯಾಗಿದ್ದರೆ ಸಾಮಾನ್ಯ ವರ್ಗದ ಮಹಿಳೆಯರು ಕೂಡ ಇಂದು ವಿಧಾನಸಭೆ ಮತ್ತು ಸಂಸತ್ತಿಗೆ ಆಯ್ಕೆಯಾಗಿರುತ್ತಿದ್ದರು. ಕರ್ನಾಟಕದ ಮಹಿಳೆಯರು ಈ ದ್ರೋಹವನ್ನು ಎಂದಿಗೂ ಕ್ಷಮಿಸಬಾರದು ಎಂದು ಕರೆ ನೀಡಿದರು.