ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Monsoon Session: ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ

BY Vijayendra: ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ ಸರಕಾರವು ಉತ್ತರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡುತ್ತಿದೆ ಎಂಬ ಕುರಿತು ಚರ್ಚೆ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ

Prabhakara R Prabhakara R Aug 10, 2025 10:39 PM

ಬೆಂಗಳೂರು: ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಈ ಸರಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ಯಾವ್ಯಾವ ವಿಚಾರಗಳನ್ನು ಸದನದಲ್ಲಿ ಚರ್ಚಿಸಬೇಕು ಎಂಬ ವಿಷಯವನ್ನು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಟೀಕಿಸಿದರು.

ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ ಸರಕಾರವು ಉತ್ತರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡುತ್ತಿದೆ ಎಂಬ ಕುರಿತು ಚರ್ಚೆ ಮಾಡುತ್ತೇವೆ. ರಾಜ್ಯದಲ್ಲಿ ಜನವಿರೋಧಿ, ಬಡವರ ವಿರೋಧಿ, ರೈತ ವಿರೋಧಿ, ಭ್ರಷ್ಟಾಚಾರಿ ಸರಕಾರ ಇದೆ. ಇಂಥ ಕಾಂಗ್ರೆಸ್ ಸರಕಾರಕ್ಕೆ ಚಾಟಿ ಬೀಸುವ ಕೆಲಸ ಮಾಡಲಿದ್ದೇವೆ ಎಂದರು. ಇವೆಲ್ಲ ವಿಷಯ ಇಟ್ಟುಕೊಂಡು ಸರಕಾರಕ್ಕೆ ಛೀಮಾರಿ ಹಾಕುತ್ತೇವೆ ಎಂದು ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಇದ್ದರು.

ಈ ಸುದ್ದಿಯನ್ನೂ ಓದಿ | Namma Metro Phase 3: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ