Physical Abuse: ಬೆಂಗಳೂರಿನಲ್ಲಿ ಹೀನ ಕೃತ್ಯ; ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್
Bengaluru News: ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


ಆನೇಕಲ್: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದೆ. ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೂರು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್ನಲ್ಲಿರುವ ಸ್ನೇಹಿತನ ಮನೆಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ಬಂದ ಇಬ್ಬರು ವ್ಯಕ್ತಿಗಳು, ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.
ಹಣಕ್ಕೂ ಡಿಮ್ಯಾಂಡ್
ದುಷ್ಕರ್ಮಿಗಳು ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆಕೆಯ ಬಳಿ ಹಣಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್ನಿಂದ ಹಣ ನೀಡಿದ್ದಾಳೆ. ಆರೋಪಿಗಳು, ಈ ಹಣವನ್ನು ಬೆಟ್ಟಿಂಗ್ ಆ್ಯಪ್ ಅಕೌಂಟ್ಗೆ ಹಾಕಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಅನ್ನು ಕಿಡಿಗೇಡಿಗಳು ಕಸಿದುಕೊಂಡಿದ್ದಾರೆ. ಸಾಲದಕ್ಕೆ ಮನೆಯಲ್ಲಿದ್ದ ಪ್ರಿಡ್ಜ್, ವಾಷಿಂಗ್ ಮಷಿನ್ ಹೊತ್ತೊಯ್ದಿದ್ದಾರೆ.
ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Murder Case: ಮಹಿಳೆಯ ಮೈಮೇಲಿನ ದೆವ್ವ ಬಿಡಿಸಲು ಯದ್ವಾತದ್ವಾ ಹೊಡೆತ, ಸಾವು
ಶಾಪಿಂಗ್ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು, ಉಸಿರುಗಟ್ಟಿಸಿ ಕೊಂದ ಪತಿ!
ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ. ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯನ್ನು ಪತಿಯೊಬ್ಬ ಬರ್ಬರ ಕೊಲೆ (Murder Case) ಮಾಡಿರುವುದು ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ಪದ್ಮಜ (29) ಕೊಲೆಯಾದವರು. ಪರಿ ಹರೀಶ್ ಕೊಲೆ ಆರೋಪಿ. ಶಾಪಿಂಗ್ ಹೋಗಿದ್ದಕ್ಕೆ ಕುತ್ತಿಗೆಯನ್ನು ಕಾಲಿನಿಂದ ತುಳಿದು ಉಸಿರು ಗಟ್ಟಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಇವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ದಂಪತಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೊಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಬ್ಬರು ಬಿಇ ಮುಗಿಸಿಕೊಂಡಿದ್ದು, ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಕೆಲ ತಿಂಗಳಿನಿಂದ ಗಂಡ ಹರೀಶ್ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಪತ್ನಿಯ ಜತೆಗೆ ನಿತ್ಯ ಗಲಾಟೆ ಮಾಡುತ್ತಿದ್ದ. ಆದರೆ ನೆನ್ನೆ ಶಾಪಿಂಗ್‌ಗೆ ಹೋಗಿ ಬಂದಿದ್ದಕ್ಕೆ ಪತ್ನಿ ಜತೆಗೆ ಹರೀಶ್ ಜಗಳ ತೆಗೆದಿದ್ದಾನೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಹೆಂಡತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ.
ಈ ಸುದ್ದಿಯನ್ನೂ ಓದಿ | DK Suresh: ಐಶ್ವರ್ಯ ಗೌಡ ವಂಚನೆ ಪ್ರಕರಣ: ಇಡಿ ಕೇಳಿದ ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದ ಡಿ.ಕೆ.ಸುರೇಶ್