ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Rain: ಬೆಂಗಳೂರಿನ ಹಲವೆಡೆ ವರುಣನ ಆರ್ಭಟ; ರಾಜ್ಯಾದ್ಯಂತ ನಾಳೆ ಅಬ್ಬರಿಸಲಿದೆ ಮಳೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ನಗರದ ಹಲವೆಡೆ ಶನಿವಾರ ಮಧ್ಯಾಹ್ನ ಮಳೆ ಅಬ್ಬರಿಸಿದೆ. ಭಾರಿ ಮಳೆ (Bengaluru Rain) ಹಿನ್ನೆಲೆಯಲ್ಲಿ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವಂತಾಯಿತು. ನಗರದ ಮಲ್ಲೇಶ್ವರ, ಶೇಷಾದ್ರಿಪುರ, ಸದಾಶಿವನಗರ, ಮೆಜೆಸ್ಟಿಕ್, ರಾಜಾಜಿನಗರ, ವಿಧಾನಸೌಧ, ಕೆ.ಆರ್.ಸರ್ಕಲ್, ಶ್ರೀರಾಮಪುರ, ಗಾಂಧಿನಗರ, ವಿಜಯನಗರ, ಹೊಸಹಳ್ಳಿ, ಮಂಜುನಾಥ ನಗರ, ಶಿವಳ್ಳಿ, ನಾಗರಬಾವಿ, ಆರ್‌ಆರ್‌ ನಗರ ಸೇರಿ ಹಲವಡೆ ಜೋರು ಮಳೆಯಾಗಿದೆ.

ಇನ್ನು ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನಲ್ಲಿ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆ ರಾಜ್ಯಕ್ಕೆ ಯೆಲ್ಲೋ ಅಲರ್ಟ್

ಜುಲೈ 19ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗುಸಹಿತ ಮಳೆ ಅಬ್ಬರಿಸುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾನುವಾರ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (30-40 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬೀದರ್, ಕಲಬುರಗಿ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Vishwavani Health: ಸಾಧಕರಾಗಲು ಯಾವ ಸೂಪರ್ ಡ್ರಿಂಕ್ಸ್ ಕುಡಿಯಬೇಕು ಗೊತ್ತೆ?

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.