ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Rains: ಬೆಂಗಳೂರಿನ ಹಲವೆಡೆ ಮಳೆ ಆರ್ಭಟ; ಸಂಚಾರ ದಟ್ಟಣೆಯಿಂದ ವಾಹನ ಸವಾರರ ಪರದಾಟ

Bengaluru Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಆರ್.ಪಿ. ರಸ್ತೆ ಬಳಿ ಭಾನುವಾರ ಮಳೆ ನೀರು ನಿಂತಿದ್ದರಿಂದ ವಿಂಡ್ಸನ್ ಮ್ಯಾನರ್ ಹೋಟೆಲ್ ಕಡೆಗೆ ನಿಧಾನಗತಿಯ ವಾಹನ ಸಂಚಾರವಿತ್ತು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ನಗರದ ಹಲವೆಡೆ ಬಿರುಸಿನ ಮಳೆಯಾಗಿದೆ. ವಿಧಾನಸೌಧ, ರೇಸ್ ಕೋರ್ಸ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಆರ್‌ಆರ್‌ ನಗರ ಸೇರಿ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ವರುಣನ ಆಗಮನದಿಂದ ರಾಜಧಾನಿ ವಾತಾವರಣ ಮತ್ತಷ್ಟು ಕೂಲ್ ಕೂಲ್ ಆಗಿದೆ. ಇನ್ನು ನಗರದ ವಿವಿಧೆಡೆ ಭಾರಿ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದರು.

ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಇನ್ನು ಇಂದು (ಜುಲೈ 20) ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 21ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಅಂಜೂರ: ಪೋಷಕಾಂಶಗಳ ಆಗರ! ಇದರ ಆರೋಗ್ಯ ಲಾಭಗಳ ಬಗ್ಗೆ ನಮಗೆ ಗೊತ್ತಾ?