ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಎಐಸಿಸಿಯ ಒಬಿಸಿ ಸಲಹಾ ಮಂಡಳಿಗೆ ಯಾವುದೇ ನೇಮಕಾತಿ ಆಗಿಲ್ಲ: ಸಿದ್ದರಾಮಯ್ಯ ನೇಮಕ ಕುರಿತು ಕಾಂಗ್ರೆಸ್‌ ಸ್ಪಷ್ಟನೆ

CM Siddaramaiah: ಎಐಸಿಸಿಯ ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎಐಸಿಸಿಯ ಒಬಿಸಿ ಘಟಕ ಮಾಹಿತಿ ನೀಡಿದೆ.

ಎಐಸಿಸಿಯ ಒಬಿಸಿ ಸಲಹಾ ಮಂಡಳಿಗೆ ಯಾವುದೇ ನೇಮಕಾತಿ ಆಗಿಲ್ಲ

Profile Prabhakara R Jul 6, 2025 3:46 PM

ಬೆಂಗಳೂರು: ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.‌ ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ (ಎಐಸಿಸಿ) ಒಬಿಸಿ ಘಟಕ ಸ್ಪಷ್ಟನೆ ನೀಡಿದೆ.

ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.

Congress

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ಸಿಬ್ಬಂದಿಯ ವೇತನ (Salary) ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಕುರಿತಾಗಿ ಮುಂದಿನ ವಾರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಕರಾರಸಾ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಸಿಎಂರನ್ನು ಭೇಟಯಾಗಿದ್ದರು. ದಿನಾಂಕ 01.01.2020ರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ಪಾವತಿಸಬೇಕು. ದಿನಾಂಕ 01.01.2024ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ದಿನಾಂಕ 01.01.2024ರಿಂದ ಇಂದಿನವರೆಗಿನ ಹಿಂಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಕುರಿತಾಗಿ ಸರ್ಕಾರದ ಯಾವುದೇ ಆದೇಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಹಿಂಬಾಕಿ ಕುರಿತು ಮುಂದಿನ ವಾರ ಮತ್ತೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: Farmers Protest: ದೇವನಹಳ್ಳಿ ರೈತ ಹೋರಾಟ; ಸರ್ಕಾರದ ಅಂತಿಮ ನಿರ್ಧಾರ ಪ್ರಕಟಕ್ಕೆ 10 ದಿನ ಕಾಲಾವಕಾಶ ಕೋರಿದ ಸಿಎಂ