ಬೆಂಗಳೂರು, ಜ.20: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಟಿಕೆಟ್ ಹಣಕ್ಕೆ ಕನ್ನ ಹಾಕುತ್ತಿದ್ದ ಮೂವರು ನಿರ್ವಾಹಕರನ್ನು (BMTC conductor fraud) ಅಮಾನತುಗೊಳಿಸಲಾಗಿದೆ. ಅಧಿಕೃತ ಯುಪಿಐ ಕ್ಯೂಆರ್ ಕೋಡ್ ಬದಲಿಗೆ ತಮ್ಮ ವೈಯಕ್ತಿಕ ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಮೊತ್ತವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ ಆರೋಪದಲ್ಲಿ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಾಗಿದೆ.
ಡಿಸೆಂಬರ್ 2025 ರಲ್ಲಿ ನಡೆಸಲಾದ ತಪಾಸಣೆಯ ಸಂದರ್ಭದಲ್ಲಿ ಬಿಎಂಟಿಸಿ ತನಿಖಾ ತಂಡವು ಈ ಅಕ್ರಮವನ್ನು ಪತ್ತೆಹಚ್ಚಿದೆ. ಈ ಮೂವರು ಸಿಬ್ಬಂದಿ ಟಿಕೆಟ್ ವಿತರಣೆಗಾಗಿ ಬಿಎಂಟಿಸಿ ಒದಗಿಸಿದ ಅಧಿಕೃತ ಯುಪಿಐ ಕ್ಯೂಆರ್ ಬಳಸದೆ, ಪ್ರಯಾಣಿಕರಿಂದ ಬರುವ ಹಣವನ್ನು ತಮ್ಮ ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್ ಮೂಲಕ ಸಂಗ್ರಹಿಸುತ್ತಿದ್ದರು.
ಅಮಾನತುಗೊಂಡ ಸಿಬ್ಬಂದಿ ಸುಮಾರು 1 ಲಕ್ಷಕ್ಕೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ. ಸುರೇಶ್ ಎಂಬಾತ 47,257 ರೂ., ಮಂಚೇಗೌಡ 54,358 ರೂ. ಹಾಗೂ ಆಶ್ವಾಕ್ ಖಾನ್ 3,206 ರೂ. ಹಣ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಆರೋಪಗಳು ವಿಚಾರಣೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಇನ್ನು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್; ವರದಿ ನೀಡುವಂತೆ ಸಿಎಂ ಸೂಚನೆ
ನಟ ಸುದೀಪ್ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ; ದೂರು ದಾಖಲು

ಬೆಂಗಳೂರು: ಬಿಗ್ ಬಾಸ್ ಸೀಸನ್ 12 ಮುಕ್ತಾಯದ ಬೆನ್ನಲ್ಲೇ ನಟ ಕಿಚ್ಚ ಸುದೀಪ್ (Kichcha Sudeepa) ಅವರಿಗೆ ಸಂಕಷ್ಟ ಎದುರಾಗಿದೆ. 90 ಲಕ್ಷ ರುಪಾಯಿ ನೀಡದೆ ಸುದೀಪ್ ಮತ್ತು ಅವರ ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ವಂಚಿಸಿದ್ದಾರೆ ಎಂದು ಆರೋಪಿಸಿ ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್ ಠಾಣೆ ಮೆಟ್ಟಿಲೇರಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಪ್ರಕರಣ ದಾಖಲಾಗಿದೆ. ಸುದೀಪ್ ನಿರ್ಮಾಣದ ʼವಾರಸ್ದಾರʼ ಧಾರಾವಾಹಿಗೆ ಸಂಬಂಧಿಸಿದಂತೆ ಈ ವಂಚನೆ ನಡೆದಿದೆ ಎಂದು ದೀಪಕ್ ಆರೋಪಿಸಿದ್ದಾರೆ.
ದೂರಿನಲ್ಲಿ ಏನಿದೆ?: 2018ರಲ್ಲಿ ನಟ ಕಿಚ್ಚ ಸುದೀಪ್ ಅವರ ನಿರ್ಮಾಣ ಸಂಸ್ಥೆ 'ಕಿಚ್ಚ ಕ್ರಿಯೇಷನ್ಸ್ʼವತಿಯಿಂದ 'ವಾರಸ್ದಾರ' ಧಾರಾವಾಹಿಯನ್ನು ನಿರ್ಮಿಸಲಾಗಿತ್ತು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಈ ಧಾರಾವಾಹಿಯ ಚಿತ್ರೀಕರಣವನ್ನು ಚಿಕ್ಕಮಗಳೂರು ಜಿಲ್ಲೆಯ ಬೈಗೂರು ಗ್ರಾಮದಲ್ಲಿ ನಡೆಸಲಾಗಿತ್ತು. ಇದಕ್ಕಾಗಿ ದೀಪಕ್ ಅವರ ಮನೆಯನ್ನು ಬಾಡಿಗೆಗೆ ಪಡೆಯಲಾಗಿತ್ತು. ಆದರೆ ಹಣ ನೀಡಿಲ್ಲ ಎಂದು ದೀಪಕ್ ದೂರಿದ್ದಾರೆ.
ʼವಾರಸ್ದಾರʼ ಧಾರಾವಾಹಿ ಚಿತ್ರೀಕರಣಕ್ಕಾಗಿ ತಮ್ಮ ಕಾಫಿ ತೋಟ ಮತ್ತು ಮನೆಯನ್ನು 2 ವರ್ಷಗಳಿಗೆ ಅಗ್ರಿಮೆಂಟ್ ಮಾಡಿಸಿ ಬಾಡಿಗೆ ಪಡೆಯಲಾಗಿತ್ತು. ಆದರೆ ಬಳಿಕ 2 ತಿಂಗಳಿಗೆ ಜಾಗ ಖಾಲಿ ಮಾಡಿ ಹಣ ನೀಡಿಲ್ಲ ಎಂದು ದೀಪಕ್ ಆರೋಪಿಸಿದ್ದಾರೆ. 2 ತಿಂಗಳ ಅವಧಿಯ ಶೂಟಿಂಗ್ ವೇಳೆ ಕಾಫಿ ಗಿಡ ಮತ್ತು ಮರ ನಾಶವಾಗಿದ್ದು, 90 ಲಕ್ಷ ರುಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಶಬರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ ಸೇರಿ 21 ಕಡೆ ಇಡಿ ದಾಳಿ
ಚಿತ್ರೀಕರಣದ ವೇಳೆ ಆದ ನಷ್ಟಕ್ಕೆ ಪರಿಹಾರ ನೀಡುವುದಾಗಿ ಸುದೀಪ್ ಭರವಸೆ ನೀಡಿದ್ದರು. ಆದರೆ ಇದುವರೆಗೆ ತಮಗೆ 10 ಲಕ್ಷ ರುಪಾಯಿಯ ಚೆಕ್ ಮಾತ್ರವೇ ಬಂದಿದೆ. ಹೀಗಾಗಿ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ದೀಪಕ್ ದೂರಿನಲ್ಲಿ ಮನವಿ ಮಾಡಿದ್ದಾರೆ.