ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Janivara Row: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ವಶಕ್ಕೆ

KCET 2026: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದಲ್ಲಿ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಇದೀಗ ಪರೀಕ್ಷಾ ಕೇಂದ್ರದ ಇನ್‌ಚಾರ್ಜ್ ಸುಧಾಕರ್, ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಮೂವರು ಸಿಬ್ಬಂದಿ ವಶಕ್ಕೆ

-

Prabhakara R
Prabhakara R Apr 24, 2026 7:28 PM

ಬೆಂಗಳೂರು: ನಗರದ ಮಡಿವಾಳದ ಕೃಪಾನಿಧಿ ಕಾಲೇಜು ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ (Janivara Row) ತೆಗೆಸಿ, ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ಮೂವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಘಟನೆಗೆ ಕಾರಣರಾದ ಪರೀಕ್ಷಾ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪರೀಕ್ಷಾ ಕೇಂದ್ರದ ಇನ್‌ಚಾರ್ಜ್ ಸುಧಾಕರ್, ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಜನಿವಾರ ತೆಗೆಸಿದ್ದರಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವಾಗಿದೆ ಎಂದು ನೊಂದ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಬಿಎನ್ಎಸ್ ಕಾಯ್ದೆ 299 (ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ಕೆರಳಿಸುವುದು ಅಥವಾ ಧಕ್ಕೆ ತರುವುದು), ಬಿಎನ್ಎಸ್ ಕಾಯ್ದೆ 302 (ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಶಾಂತಿ ಕದಡುವುದು) ಅಡಿ ಪ್ರಕರಣ ದಾಖಲಾಗಿತ್ತು.

ಏನಿದು ಪ್ರಕರಣ?

ಏ.23ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿತ್ತು. ಜನಿವಾರ ತೆಗೆಯಲು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದಾಗ, ಜನಿವಾರ ತೆಗೆಯದಿದ್ದರೆ ಮನೆಗೆ ವಾಪಸ್ ಹೋಗಿ ಎಂದು ಸಿಬ್ಬಂದಿ ಕಟ್ಟುನಿಟ್ಟಾಗಿ ಹೇಳಿದ್ದರು ಎನ್ನಲಾಗಿದೆ. ಅಂತಿಮವಾಗಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರ ತೆಗೆಸಿ ಪರೀಕ್ಷೆಗೆ ಕಳುಹಿಸಿದ್ದರು. ಎಂಬ ಆರೋಪ ಕೇಳಿಬಂದಿದೆ.

Janivara Row: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಈ ಘಟನೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಾಲೇಜಿಗೆ ತಹಸೀಲ್ದಾರ್, ಶಿಕ್ಷಣಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಕಾಲೇಜು ಆಡಳಿತ ಮಂಡಳಿಯು ಪೋಷಕರ ಮನವೊಲಿಸಿ, ಘಟನೆಯ ಬಗ್ಗೆ ಎಲ್ಲಿಯೂ ಹೇಳಿಕೆ ನೀಡದಂತೆ ಪತ್ರ ಬರೆಯಿಸಿಕೊಂಡು ಪ್ರಕರಣವನ್ನು ಹತ್ತಿಕ್ಕಲು ಪ್ರಯತ್ನಿಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ವಿದ್ಯಾರ್ಥಿಯೊಬ್ಬರ ಪೋಷಕರಿಂದ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.