New year celebrations: ಇಂದು ಬೆಂಗಳೂರಿನ ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆ?
Traffic restrictions in Bengaluru: ಬೆಂಗಳೂರಿನಲ್ಲಿ ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆಯಲ್ಲೂ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.31: ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ಇಂದು (ಡಿ.31) ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ. ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ ನಗರದ ಹಲವು ಫ್ಲೈಓವರ್‌ಗಳ ಮೇಲೆ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬ೦ಧ ವಿಧಿಸಲಾಗಿದೆ. ಇನ್ನು ನಗರದಲ್ಲಿ ಯಾವೆಲ್ಲಾ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಹಾಗೂ ಎಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆಯಲ್ಲೂ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ರಾತ್ರಿ 10 ಗಂಟೆ ನಂತರ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್
ನೈಸ್ ರಸ್ತೆಯಲ್ಲಿ ರಾತ್ರಿ 8ರಿಂದಲೇ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ರಾತ್ರಿ 10 ಗಂಟೆಯ ನಂತರ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್ ಆಗಲಿದೆ. ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳಿಗೆ ತೆರಳಿ ಪ್ರಯಾಣಿಕರು ಸಂಚಾರ ಮಾಡಬಹುದು.
ಬೆಂಗಳೂರಿಗರಿಗೆ ಗುಡ್ ನ್ಯೂಸ್; ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಲಭ್ಯ
ಎಲ್ಲೆಲ್ಲಿ ಸಂಚಾರ ನಿಷೇಧ
ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ, ಚರ್ಚ್ ಸ್ಟ್ರೀಟ್ನ ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ, ರೆಸಿಡೆನ್ಸಿ ರಸ್ತೆಯ ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೊ ಹಾಲ್ ಜಂಕ್ಷನ್‌ವರೆಗೆ, ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಎಸ್‌ಬಿಐ ವೃತ್ತದವರೆಗೆ ಸಂಚಾರ ವ್ಯವಸ್ಥೆ ನಿಷೇಧಿಸಲಾಗಿದೆ.
ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆ
ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶವಿದೆ.
ಮುನಿರೆಡ್ಡಿ ಕಲ್ಯಾಣ ಮ೦ಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ ಮೈದಾನ, 60 ಅಡಿ ಮಾದರಿ ರಸ್ತೆ ಎಡಭಾಗದಲ್ಲಿ (ಮುನಿರೆಡ್ಡಿ ಕಲ್ಯಾಣ ಮಂಟಪದಿಂದ ಕೆನರಾ ಬ್ಯಾಂಕ್ ಜಂಕ್ಷನ್‌ವರೆಗೆ) ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಲಾಗಿದೆ.
ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
- ಡಿಸೆಂಬರ್ 31ರ ರಾತ್ರಿ 8 ರಿಂದ ಕ್ಲೀನ್ಸ್ ವೃತ್ತದ ಕಡೆಯಿಂದ ಹಲಸೂರು ಮಾರ್ಗವಾಗಿ ಹೋಗುವ ಚಾಲಕರು, ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟೀಟ್ ಮೂಲಕ ಬಿ.ಆರ್.ವಿ ಜಂಕ್ಷನ್ ಬಳಿ ಬಲತಿರುವು ಪಡೆದು, ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ವೆಬ್ ಜಂಕ್ಷನ್ ಬಳಿ ಎಂ.ಜಿ. ರಸ್ತೆಯನ್ನು ಸೇರಿ ಮುಂದೆ ಸಾಗಬಹುದು.
- ಹಲಸೂರು ಕಡೆಯಿಂದ ಕಂಟೋನ್ಮೆಂಟ್ ಕಡೆಗೆ ಹೋಗುವ ವಾಹನಗಳು, ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದು ಹಲಸೂರು ರಸ್ತೆ ಮೂಲಕ ಡಿಕನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆ ಸೇರಿ ಮುಂದೆ ಸಾಗಬೇಕು.
- ಈಜಿಪುರ ಕಡೆಯಿಂದ ಬರುವ ವಾಹನಗಳು ಇಂಡಿಯಾ ಗ್ಯಾರೇಜ್ ಬಳಿ ಬಲತಿರುವು ಪಡೆದು ಎ.ಎಸ್.ಸಿ. ಸೆಂಟರ್‌ನಲ್ಲಿ ಎಡತಿರುವು ಪಡೆದು ಟ್ರಿನಿಟಿ ಮೂಲಕ ಮುಂದೆ ಸಾಗಬಹುದು.
- ಎಚ್‌ಎಎಲ್ ಕಡೆಯಿಂದ ಬರುವ ವಾಹನಗಳು ಎಎಸ್‌ಸಿ ಸೆಂಟರ್‌ನಲ್ಲಿ ಬಲತಿರುವು ಪಡೆದು ಟ್ರಿನಿಟಿ ಮೂಲಕ ಮುಂದೆ ಸಾಗುವುದು.
- ಪಾದಚಾರಿಗಳು ಬ್ರಿಗೇಡ್ ರಸ್ತೆಯಲ್ಲಿ ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್ ಕಡೆಗೆ ಕಾಲ್ನಡಿಗೆಯಲ್ಲಿ ಹೋಗಬಹುದು.
- ಎಂ.ಜಿ, ರಸ್ತೆ, ಬ್ರಿಗೇಡ್ ರಸ್ತೆ, ರೆಸ್ಟ್ ಹೌಸ್ ರಸ್ತೆ, ಚರ್ಚ್ ಸ್ಟೀಟ್, ರೆಸಿಡೆನ್ಸಿ ರಸ್ತೆ ಹಾಗೂ ಸೇಂಟ್ ಮಾರ್ಕ್ಸ್ ರಸ್ತೆಗಳಲ್ಲಿ ನಿಲುಗಡೆ ಮಾಡುವ ವಾಹನಗಳನ್ನು ಡಿ.31ರ ಸಂಜೆ 4 ಗಂಟೆಯೊಳಗೆ ತೆರವುಗೊಳಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುವುದು
ಬಿಎಂಟಿಸಿ ಬಸ್ ಹಾಗೂ ಟಿ.ಟಿ. ವಾಹನ ಸಂಚರಿಸುವ ಮಾರ್ಗಗಳು
- ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯ ಸುತ್ತಮುತ್ತ ನಗರದ ವಿವಿಧ ಕಡೆಗಳಲ್ಲಿ ಬಿಎಂಟಿಸಿ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ. ಟಿ.ಟಿ. ವಾಹನಗಳ ಮೂಲಕ ಬರುವವರು ಸಂಭ್ರಮಾಚರಣೆ ಮುಗಿದ ಬಳಿಕ ಇದೇ ಮಾರ್ಗವಾಗಿ ಹಿಂತಿರುಗಬೇಕು.
- ಆಶೀರ್ವಾದಮ್‌ನಿಂದ ಬನ್ನೇರುಘಟ್ಟ, ಅನಿಲ್ ಕುಂಬ್ಳೆ ವೃತ್ತದಿಂದ ಬನಶಂಕರಿ, ನೈಸ್ ರಸ್ತೆ ಜಂಕ್ಷನ್, ಸುಂಕದ ಕಟ್ಟೆ, ಡೆಕತ್‌ಲಾನ್ ಒಪೆರಾ ಜಂಕ್ಷನ್‌ನಿಂದ ನೈಸ್ ರಸ್ತೆ ಜಂಕ್ಷನ್ (ರಿಡ್ಕಂಡ್ ಸರ್ಕಲ್ ಮೂಲಕ), ಮೆಯೋಹಾಲ್ ನಿಂದ ಮಾದಾವರ, ಟ್ರಿನಿಟಿಯಿಂದ ಬಾಗಲೂರು, ಟ್ರಿನಿಟಿಯಿಂದ ಹೊಸಕೋಟೆ ಮಾರ್ಗಕ್ಕೆ ಬಿಎಂಟಿಸಿ ಬಸ್‌ಗಳ ಸೌಲಭ್ಯ.
- ಕೋರಮಂಗಲದ ವೈ.ಡಿ. ಮಠ ರಸ್ತೆಯ ಸುಖಸಾಗರ ಜಂಕ್ಷನ್‌ನಿಂದ ಮೈಕ್ರೋಲ್ಯಾಂಡ್ ಜಂಕ್ಷನ್, ವೈ.ಡಿ. ಮಠ ರಸ್ತೆಗೆ ಸಂಪರ್ಕ ಕಲ್ಪಿಸುವ ಅಡ್ಡರಸ್ತೆಗಳಾದ ಜೆ.ಎನ್.ಸಿ ರಸ್ತೆ, 4ನೇ ಬಿ ಕ್ರಾಸ್ ರಸ್ತೆ, ಟಾನಿಕ್ ಹಿಂಭಾಗದ ರಸ್ತೆ, 17ನೇ ಹೆಚ್ ಮುಖ್ಯರಸ್ತೆಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧವಿದೆ.
- ಬಿಎಂಟಿಸಿ ಬಸ್‌ಗಳು ಹಾಗೂ ಟಿ.ಟಿ. ವಾಹನಗಳು ಸಂಚರಿಸುವ ಮಾರ್ಗಗಳು
- ಮಡಿವಾಳ ಚೆಕ್‌ಪೋಸ್ಟ್‌ನಿಂದ ಬನಶಂಕರಿ ಬಸ್ ನಿಲ್ದಾಣ (ಬಿಟಿಎಂ ಮೂಲಕ)
- ಮಡಿವಾಳ ಚೆಕ್‌ಪೋಸ್ಟ್‌ನಿಂದ ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆಯ ಮೂಲಕ)
- ಮಡಿವಾಳ ಚೆಕ್‌ಪೋಸ್ಟ್‌ನಿಂದ ಕೆ.ಆರ್. ಪುರ (ಹಳೇ ವಿಮಾನ ನಿಲ್ದಾಣ ರಸ್ತೆ ಮೂಲಕ ಸುರಂಜನ್ ದಾಸ್ ರಸ್ತೆ) ಮಡಿವಾಳ ಚೆಕ್‌ಪೋಸ್ಟ್‌ನಿಂದ ಮೀನಾಕ್ಷಿ ಟೆಂಪಲ್ ಬನ್ನೇರುಘಟ್ಟ (ಡೈರಿ ಸರ್ಕಲ್ ಮೂಲಕ)
- ನೆಕ್ಸಸ್ ಮಾಲ್‌ನಿಂದ ದೇವನಹಳ್ಳಿ (ಮೇಕ್ರಿ ಸರ್ಕಲ್ ಮೂಲಕ)
- ನೆಕ್ಸಸ್ ಮಾಲ್‌ನಿಂದ (ಹೊಸೂರು ರಸ್ತೆ ಜಂಕ್ಷನ್) ಕೆ.ಆರ್. ಮಾರ್ಕೆಟ್ (ಜೆ.ಸಿ. ರಸ್ತೆ ಮೂಲಕ)
- ನೆಕ್ಸಸ್ ಮಾಲ್‌ನಿಂದ (ಹೊಸೂರು ರಸ್ತೆ ಜಂಕ್ಷನ್) ಮೆಜೆಸ್ಟಿಕ್ (ವಿಲ್ಸನ್ ಗಾರ್ಡನ್ ಮೂಲಕ)
- ಎನ್.ಜಿ.ವಿ. ಬ್ಯಾಕ್ ಗೇಟ್‌ನಿಂದ ಹೆಬ್ಬಾಳ (ಇಂದಿರಾನಗರ ಮೂಲಕ)
- ಎನ್.ಜಿ.ವಿ.ಯಿಂದ ವೈಟ್‌ಫೀಲ್ಡ್ (ಹೊರವರ್ತುಲ ರಸ್ತೆಯ ಮೂಲಕ) ಕಡೆಗೆ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.