ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೇ 20ಕ್ಕೆ ಸಾರಿಗೆ ಮುಷ್ಕರ; ಸೇವೆಗೆ ಗೈರಾದರೆ ಶಿಸ್ತು ಕ್ರಮ, ಸಿಬ್ಬಂದಿಗೆ ಖಡಕ್‌ ಎಚ್ಚರಿಕೆ ಕೊಟ್ಟ KSRTC

ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ನೌಕರರಿಗೆ ಕೆಎಸ್ಆರ್​ಟಿಸಿ ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಆದೇಶಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ನೌಕರರಿಗೆ ಕೆಎಸ್ಆರ್​ಟಿಸಿ (KSRTC) ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಆದೇಶಿಸಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ನೋ ವರ್ಕ್ ನೋ ಪೇ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ.

ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಕಾರಣ ಮೇ 20 ರಂದು ಬಸ್​ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳಬೇಕು. ಸಿಬ್ಬಂದಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು. ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಿ. ಅನಿವಾರ್ಯ ಸಂದರ್ಭದಲ್ಲಿ ಅಥವಾ ಅವಶ್ಯವಿದ್ದಲ್ಲಿ, ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವಂತೆ ಅಕ್ರಂಪಾಷಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಷ್ಕರಕ್ಕೆ ಸಜ್ಜಾದ ಸಾರಿಗೆ ನಿಗಮದ ನೌಕರರಿಗೆ ಒಂದಷ್ಟು ವಿಷಯಗಳನ್ನು ತರಲಾಗಿದೆ. ಸಾರಿಗೆ ಸಂಸ್ಥೆಗಳು ಜನಸಾಮಾನ್ಯರಿಗೆ ಸಮರ್ಪಕವಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿದೆ. ಜವಾಬ್ದಾರಿಗೆ ಅನುಗುಣವಾಗಿ ಸರ್ಕಾರ 'ಕರ್ನಾಟಕ ಅಗತ್ಯ ಸೇವಾ ನಿರ್ವಹಣೆ ಕಾಯಿದೆ -2013 (Karnataka Act No-25/2015) ಜಾರಿಗೊಳಿಸಿದೆ. ಹೀಗಾಗಿ ಸಾರಿಗೆ ನಿಗಮಗಳ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ವ್ಯಕ್ತಿ, ಸಂಘ ಸಂಸ್ಥೆ ಅಥವಾ ವ್ಯಕ್ತಿಗಳು ಮುಷ್ಕರ ಹೂಡುವಂತೆ ಪ್ರಚೋದಿಸುವಂತಿಲ್ಲ ಎಂದು ಹೇಳಿದೆ.

19ನೇ ತಾರೀಖು ಮಧ್ಯಾಹ್ನದವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಲಾಗಿದೆ. 19ನೇ ತಾರೀಖು ಸಂಜೆ ಮೇಲೆ ಮಾತುಕತೆಗೆ ಆಹ್ವಾನಿಸಿದ್ರೂ ಬರಲ್ಲ ಎಂದು ಸರ್ಕಾರಕ್ಕೆ ಸಾರಿಗೆ ಸಂಘಟನೆ ಖಡಕ್ ಸಂದೇಶ ಮಾಡಿದೆ. ಪ್ರತಿ ಬಾರಿ ಮುಷ್ಕರ ಅಥವಾ ಪ್ರತಿಭಟನೆಗೆ ಕರೆಕೊಟ್ಟ ಬಳಿಕ ಕೊನೆಯ ದಿನಾಂಕ ಮಾತುಕತೆಗೆ ಆಹ್ವಾನಿಸುತ್ತಿದ್ದ ಸರ್ಕಾರ. ಈ ಬಾರಿ ಅದಕ್ಕೆ ಅವಕಾಶ ನೀಡದಿರಲು ಸಂಘಟನೆಗಳ ನಿರ್ಧಾರ ಮಾಡಿದೆ.

Vishakha Bhat Heggar

View all posts by this author