KSRTC staff strike: ಸಾರಿಗೆ ನೌಕರರ ಒಕ್ಕೂಟದ ಜತೆ ಸಿಎಂ ಸಂಧಾನ ವಿಫಲ; ನಾಳೆಯಿಂದ ಮುಷ್ಕರಕ್ಕೆ ಕರೆ
KSRTC staff strike: ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳ ಜತೆಗಿನ ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ವಿಫಲಗೊಂಡಿದೆ. ಹೀಗಾಗಿ ನಾಳೆ ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯುವುದಿಲ್ಲ.ನಾಳೆ ಬೆಳಗ್ಗೆ 6ರಿಂದ ಮುಷ್ಕರ ನಡೆಸುತ್ತೇವೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ತಿಳಿಸಿದ್ದಾರೆ.


ಬೆಂಗಳೂರು: ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳ ಜತೆಗಿನ ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ವಿಫಲಗೊಂಡಿದೆ. ಇದರಿಂದ ನಾಳೆಯಿಂದ (ಆ.5) ಮುಷ್ಕರ ನಡೆಯುವುದು ಖಚಿತವಾಗಿದೆ. ಹೀಗಾಗಿ ನಾಳೆ ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯುವುದಿಲ್ಲ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರು, ಸರ್ಕಾರಕ್ಕೂ ನಮಗೂ ತುಂಬಾ ಹೊತ್ತು ಚರ್ಚೆ ನಡೆಯಿತು. ಪ್ರಮುಖವಾಗಿ 38 ತಿಂಗಳ ವೇತನ ಬಾಕಿ ಹಾಗೂ ಹೆಚ್ಚಳದ ಬಗ್ಗೆ ಚರ್ಚೆ ನಡೆಯಿತು. ಎರಡು ವರ್ಷ ಕೊಡುತ್ತೇವೆ, ಇನ್ನೆರಡು ವರ್ಷ ಕೊಡಲು ಆಗೋದಿಲ್ಲ ಎಂದಿದ್ದಾರೆ. ವೇತನ ಹೆಚ್ಚಳದ ಬಗ್ಗೆ ಯಾವ ನಿರ್ಣಯ ಹೇಳಿಲ್ಲ. ಹಾಗಾಗಿ ನಮ್ಮ ಯಾವುದೇ ಬೇಡಿಕೆ ಈಡೇರಿಲ್ಲ. ನಾಳೆ ಬೆಳಗ್ಗೆ 6ರಿಂದ ಮುಷ್ಕರ ನಡೆಸುತ್ತೇವೆ ಎಂದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳೇನು?
- 38 ತಿಂಗಳ ವೇತನ ಬಾಕಿ ಹಣ ನೀಡಬೇಕು
- ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು
- ಖಾಸಗೀಕರಣ, ಭ್ರಷ್ಟಾಚಾರ, ಕಾರ್ಮಿಕರ ಕಿರುಕುಳ ನಿಲ್ಲಬೇಕು
- ನಗದು ರಹಿತ ವೈದ್ಯಕೀಯ ಸೌಲಭ್ಯ
- ನಮ್ಮ ಹಕ್ಕಿನ ರಜೆ
- 1-1-2024 ರಿಂದ ವೇತನ ಜಾರಿಗೊಳಿಸುವುದು
- ಉತ್ತಮ ಕ್ಯಾಂಟೀನ್ ವ್ಯವಸ್ಥೆ
- ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು
- ಸಾರಿಗೆ ನಿಗಮದ ವಿದ್ಯುತ್ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು
- ಇ-ಬಸ್‌ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿ ಕೈಬಿಡಬೇಕು
ಈ ಸುದ್ದಿಯನ್ನೂ ಓದಿ | MK Stalin: ಸಿಎಂ ಸಿದ್ದರಾಮಯ್ಯಗೆ ಕನ್ನಡದಲ್ಲೇ ಜನ್ಮದಿನದ ಶುಭಾಶಯ ಕೋರಿದ ತಮಿಳುನಾಡು ಸಿಎಂ ಸ್ಟಾಲಿನ್