ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Accident: ಬೆಂಗಳೂರಿನಲ್ಲಿ ಘೋರ ಘಟನೆ; 4 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿಯನ್ನು ಬಲಿ ಪಡೆದ ಲಾರಿ!

ಬೆಂಗಳೂರು-ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್​ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ ದೀಪಾಂಜಲಿ ಮೆಟ್ರೋ ನಿಲ್ದಾಣ ಬಳಿ ಈ ದುರಂತ ನಡೆದಿದ್ದು, ಅಪಘಾತದ ಬಳಿಕ ಲಾರಿ ಬಿಟ್ಟು ಪರಾರಿಯಾಗಿದ್ದ ಚಾಲಕನನ್ನು ಬ್ಯಾಟರಾಯನಪುರ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಇನ್ನೇನು ನಾಲ್ಕೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಅಪಘಾತದಲ್ಲಿ ಮೃತಪಟ್ಟಿರುವ ಘೋರ ಘಟನೆ ನಗರದಲ್ಲಿ ನಡೆದಿದೆ. ತನ್ನ ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ಹೋದಾಗ ಸ್ಕೂಟರ್​ಗೆ ಲಾರಿ ಡಿಕ್ಕಿಯಾಗಿ ದುರಂತ (Bengaluru Accident) ಸಂಭವಿಸಿದೆ. ಇದರಿಂದ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು-ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್​ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ 3:30ರ ಸುಮಾರಿಗೆ ದೀಪಾಂಜಲಿ ಮೆಟ್ರೋ ನಿಲ್ದಾಣ ಬಳಿ ಈ ದುರಂತ ನಡೆದಿದ್ದು, ಅಪಘಾತದ ಬಳಿಕ ಲಾರಿ ಬಿಟ್ಟು ಪರಾರಿಯಾಗಿದ್ದ ಚಾಲಕನನ್ನು ಬ್ಯಾಟರಾಯನಪುರ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪಘಾತದಲ್ಲಿ ಸಿಂಧುಶ್ರೀ (29), ವಿದ್ಯಾ (19) ಮೃತಪಟ್ಟಿದ್ದಾರೆ. ಸಿಂಧುಶ್ರೀಗೆ ಮುಂದಿನ ಸೋಮವಾರ ಮದುವೆ ನಿಶ್ಚಯವಾಗಿತ್ತು. ಈ ಹಿನ್ನೆಲೆ ಮದುವೆ ಪತ್ರಿಕೆ ಕೊಡಲು ಅತ್ತೆ ಮಗಳು ವಿದ್ಯಾ ಜತೆ ಕತ್ರಿಗುಪ್ಪೆಗೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಟ್ರಕ್​ ಬಂದು ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ.

ಟ್ರಕ್ ಗುದ್ದಿದ ರಭಸಕ್ಕೆ ಇಬ್ಬರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಇಬ್ಬರ ಮೇಲೆ ಟ್ರಕ್ ಚಕ್ರ ಹರಿದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.