ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಂಪಿ ಸಂರಕ್ಷಣೆಗೆ ಯುನೆಸ್ಕೋ ತಜ್ಞರ ಮೆಚ್ಚುಗೆ: ಡಿಸೆಂಬರ್ ಮಧ್ಯಭಾಗದಲ್ಲಿ ಅಂತಿಮ ವರದಿ ನಿರೀಕ್ಷೆ

ಹಂಪಿಯಲ್ಲಿ ಕ್ಷೇತ್ರ ಪರಿಶೀಲನೆ ನಡೆಸಿದ ಬಳಿಕ ಬುಧವಾರ ವಿಧಾನಸೌಧದಲ್ಲಿ ನಡೆದ ಸಮಾರೋಪ ಸಭೆಯಲ್ಲಿ ತಜ್ಞರು ತಮ್ಮ ಪ್ರಾಥಮಿಕ ಅಭಿಪ್ರಾಯ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಂಡರು. ಸ್ಮಾರಕಗಳ ಸಂರಕ್ಷಣೆಯ ಜತೆಗೆ ಸ್ಥಳೀಯ ಸಮುದಾಯದ ಪಾಲ್ಗೊಳ್ಳುವಿಕೆ ಹೆಚ್ಚಿಸುವುದು, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರಕ್ಕೆ ತಜ್ಞ ಮಾನವ ಸಂಪನ್ಮೂಲ ಹಾಗೂ ಆರ್ಥಿಕ ಬಲ ಒದಗಿಸುವುದು ಮತ್ತು ಪರಂಪರೆ ನಿರ್ವಹಣೆಯಲ್ಲಿ ಆಡಳಿತಾತ್ಮಕ ನಿರಂತರತೆ ಕಾಯ್ದುಕೊಳ್ಳುವುದು ಅಗತ್ಯವೆಂದು ಸಲಹೆ ನೀಡಿದರು.

ಹಂಪಿ ಸಂರಕ್ಷಣೆಗೆ ಯುನೆಸ್ಕೋ ತಜ್ಞರ ಮೆಚ್ಚುಗೆ

-

Profile
Ashok Nayak Oct 29, 2026 11:11 PM

ಬೆಂಗಳೂರು: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಹಂಪಿ(Hampi)ಯ ಸ್ಮಾರಕಗಳ ಸಂರಕ್ಷಣಾ ಸ್ಥಿತಿ ಹಾಗೂ ರಾಜ್ಯ ಸರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಇತರ ಸಂಸ್ಥೆಗಳ ನಡುವಿನ ಸಮನ್ವಯಕ್ಕೆ ಯುನೆಸ್ಕೋ(UNESCO) ತಜ್ಞರ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಹಂಪಿಯ ಸಂರಕ್ಷಣೆಗೆ ಸಂಬಂಧಿಸಿದ ಅಂತಿಮ ಮಿಷನ್ ವರದಿಯನ್ನು ಡಿಸೆಂಬರ್ ಮಧ್ಯಭಾಗದಲ್ಲಿ ಸಲ್ಲಿಸುವ ನಿರೀಕ್ಷೆಯಿದೆ.

ಹಂಪಿಯಲ್ಲಿ ಕ್ಷೇತ್ರ ಪರಿಶೀಲನೆ ನಡೆಸಿದ ಬಳಿಕ ಬುಧವಾರ ವಿಧಾನಸೌಧದಲ್ಲಿ ನಡೆದ ಸಮಾರೋಪ ಸಭೆಯಲ್ಲಿ ತಜ್ಞರು ತಮ್ಮ ಪ್ರಾಥಮಿಕ ಅಭಿಪ್ರಾಯ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಂಡರು. ಸ್ಮಾರಕಗಳ ಸಂರಕ್ಷಣೆಯ ಜತೆಗೆ ಸ್ಥಳೀಯ ಸಮುದಾಯದ ಪಾಲ್ಗೊಳ್ಳುವಿಕೆ ಹೆಚ್ಚಿಸುವುದು, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರಕ್ಕೆ ತಜ್ಞ ಮಾನವ ಸಂಪನ್ಮೂಲ ಹಾಗೂ ಆರ್ಥಿಕ ಬಲ ಒದಗಿಸುವುದು ಮತ್ತು ಪರಂಪರೆ ನಿರ್ವಹಣೆಯಲ್ಲಿ ಆಡಳಿತಾತ್ಮಕ ನಿರಂತರತೆ ಕಾಯ್ದುಕೊಳ್ಳುವುದು ಅಗತ್ಯವೆಂದು ಸಲಹೆ ನೀಡಿದರು.

ಇದನ್ನೂ ಓದಿ: Devi Maheshwar Hampinaidu Column: ಸಿಂಗೀತಂ ಕನ್ನಡ ಚಿತ್ರರಂಗದ ಮಧುರ ಸಂಗೀತಂ

ಈ ಕುರಿತು ಕೀನ್ಯಾದ ಯುನೆಸ್ಕೋ ತಜ್ಞ ಪ್ರೊ. ಜಾರ್ಜ್ ಅಬುಂಗು, ಹಂಪಿ ಜಾಗತಿಕ ಮಹತ್ವದ ಅಪರೂಪದ ಪರಂಪರೆ ತಾಣ. ಸ್ಮಾರಕಗಳ ಸ್ಥಿತಿ ಮತ್ತು ನಡೆಯುತ್ತಿರುವ ಸಂರಕ್ಷಣಾ ಕಾರ್ಯಗಳ ಬಗ್ಗೆ ತೃಪ್ತಿ ಇದೆ. ತಜ್ಞರ ತಂಡವು ಪರಿಶೀಲಕರಾಗಿ ಅಲ್ಲ, ಸ್ಮಾರಕದ ಅಭಿವೃದ್ಧಿಯ ಸ್ನೇಹಿತರು ಮತ್ತು ಪಾಲುದಾರರಾಗಿ ಭೇಟಿ ನೀಡಿದೆ. ಹಂಪಿಯ ಭವಿಷ್ಯದ ನಿರ್ವಹಣೆಯಲ್ಲಿ ಸ್ಥಳೀಯ ಸಮುದಾಯ ಕೇಂದ್ರವಾಗಿರಿಸಬೇಕು. ಸ್ಥಳೀಯರ ಸಕ್ರಿಯ ಪಾಲ್ಗೊಳ್ಳುವಿಕೆ ಇಲ್ಲದೆ ಸುಸ್ಥಿರ ಪರಂಪರೆ ಸಂರಕ್ಷಣೆ ಸಾಧ್ಯವಿಲ್ಲ ಎಂದರು.

ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಮಾತನಾಡಿ, ಹಂಪಿಯ ಅಸಾಧಾರಣ ಸಾರ್ವತ್ರಿಕ ಮೌಲ್ಯ ಯಾವುದೇ ರಾಜಿ ಇಲ್ಲದೆ ಸಂರಕ್ಷಿಸುವುದು ಸರಕಾರದ ಬದ್ಧತೆಯಾಗಿದೆ. ಇದಕ್ಕಾಗಿ ಸ್ಥಳೀಯ ಸಮುದಾಯದ ಸಹಭಾಗಿತ್ವ, ತಜ್ಞರ ಮಾರ್ಗದರ್ಶನ ಮತ್ತು ಬಲವಾದ ಸಾಂಸ್ಥಿಕ ವ್ಯವಸ್ಥೆ ಅಗತ್ಯ ಎಂದರು.

ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ

ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್(K J Goerge) ಅವರ ಮಾರ್ಗದರ್ಶನದಲ್ಲಿ ಹಂಪಿಯ ಪ್ರವಾಸೋದ್ಯಮ ಅಭಿವೃದ್ಧಿಯು ಪರಂಪರೆ ಅಥವಾ ಸ್ಥಳೀಯರ ಜೀವನೋಪಾಯಕ್ಕೆ ಧಕ್ಕೆ ಯಾಗದಂತೆ ನಡೆಯಲಿದೆ. ಮುಂದಿನ ಪ್ರವಾಸೋದ್ಯಮ ಹಾಗೂ ಅಭಿವೃದ್ಧಿ ಯೋಜನೆಗಳಲ್ಲಿ ಪರಂಪರೆ ಮೇಲಿನ ಪರಿಣಾಮದ ಮೌಲ್ಯಮಾಪನ ಅವಿಭಾಜ್ಯ ಅಂಗವಾಗಲಿದೆ ಎಂದು ಪ್ರವಾಸೋ ದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.