Union Budget 2025: ಕೇಂದ್ರ ಬಜೆಟ್;‌ ಕರ್ನಾಟಕದ ಪ್ರಮುಖ ಬೇಡಿಕೆಗಳು ಹೀಗಿವೆ

Union Budget 2025: ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನಿರಂತರವಾಗಿ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಅವುಗಳನ್ನು ಪರಿಹರಿಸಲು ಮುಂದಾಗಬೇಕು. 2025-26ನೇ ಸಾಲಿನ ಬಜೆಟ್ ಮಂಡಿಸಲಿರುವ ಹಿನ್ನೆಲೆಯಲ್ಲಿ ಅದರಲ್ಲಿ ಸೇರಿಸಬೇಕಾಗಿರುವ ರಾಜ್ಯದ ಬೇಡಿಕೆಗಳ ಪಟ್ಟಿಯನ್ನು ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

union budget 2025 (1)
Profile Prabhakara R Jan 31, 2025 6:07 PM

ಬೆಂಗಳೂರು: ಇಂದು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮುಂದೆ ಪ್ರಮುಖ 23 ಬೇಡಿಕೆಗಳನ್ನು ಇಟ್ಟಿದ್ದಾರೆ. ಫೆ.1ರಂದು ಕೇ೦ದ್ರ ಹಣಕಾಸು ಸಚಿವರು 2025-26ನೇ ಸಾಲಿನ ಬಜೆಟ್ ಮಂಡಿಸಲಿರುವ ಹಿನ್ನೆಲೆಯಲ್ಲಿ ಅದರಲ್ಲಿ ಸೇರಿಸಬೇಕಾಗಿರುವ ರಾಜ್ಯದ ಬೇಡಿಕೆಗಳ ಪಟ್ಟಿಯನ್ನು ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇನೆ. ಇವುಗಳಲ್ಲಿ ಮುಖ್ಯವಾದವುಗಳನ್ನು ರಾಜ್ಯದ ಜನತೆಯೊಂದಿಗೆ ಹಂಚಿಕೊಳ್ಳ ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಿಎಂ ಅವರು, ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮೃತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ವಿಶೇಷವಾಗಿ, ಕರ್ನಾಟಕವೂ ಸೇರಿದಂತೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳ ಆದ್ಯತೆಗಳನ್ನು ಗುರುತಿಸಿ ಸಂಪನ್ಮೂಲ ಹಂಚಿಕೆಯ ವಿಚಾರದಲ್ಲಿ ಅವುಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು, ಅವುಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಇದರಿಂದ ದೇಶಕ್ಕೆ ಹೆಚ್ಚು ಲಾಭವಿದ್ದು, ಈ ರಾಜ್ಯಗಳ ಸಾಧನೆಯ ಪಾಲು ಇತರೆ ರಾಜ್ಯಗಳಿಗೂ ಸಹಜವಾಗಿಯೇ ಸಲ್ಲುತ್ತದೆ.

ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನಿರಂತರವಾಗಿ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಅವುಗಳನ್ನು ಪರಿಹರಿಸಲು ಮುಂದಾಗಬೇಕೆಂದು ನಮ್ಮ ಸರ್ಕಾರ ಒತ್ತಾಯಿಸುತ್ತಲೇ ಬ೦ದಿದೆ ಎಂದು ತಿಳಿಸಿದ್ದಾರೆ.



ಕರ್ನಾಟಕದ ಬೇಡಿಕೆಗಳಿವು

1. 15ನೇ ಹಣಕಾಸು ಆಯೋಗದ ಅವಧಿ ಮುಂದಿನ ವರ್ಷ ಪೂರ್ಣಗೊಳ್ಳಲಿದ್ದರೂ ಇಲ್ಲಿಯ ವರೆಗೆ ಆಯೋಗವೇ ಶಿಫಾರಸು ಮಾಡಿರುವ ವಿಶೇಷ ಅನುದಾನ 5495 ಕೋಟಿ ರೂ. ಮತ್ತು ರಾಜ್ಯ ಕೇಂದ್ರಿತ 6000 ಕೋಟಿ ರೂ. ಮೊತ್ತದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಕೇಂದ್ರ ಹಣಕಾಸು ಆಯೋಗ ತಾನು ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ಮೊತ್ತದ ಹಣವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತಾ ಬಂದಿದೆ. 2021-22, 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ 1311 ಕೋಟಿ, ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ 775 ಕೋಟಿ ರೂ. ಕಡಿಮೆ ಅನುದಾನ ನೀಡಲಾಗಿದೆ. 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ, ಆರೋಗ್ಯ ಅನುದಾನದಲ್ಲಿ 826 ಕೋಟಿ ರೂ., ಎಸ್ ಡಿ ಆರ್ ಎಫ್ ಅಡಿಯಲ್ಲಿ 340 ಕೋಟಿ ರೂ. ಹಣವನ್ನು ಕಡಿತ ಮಾಡಲಾಗಿದೆ. ಈ ಒಟ್ಟು ಬಾಕಿ ರೂ.3,300 ಕೋಟಿ ರೂಪಾಯಿ ಮತ್ತು 2024-25 ಮತ್ತು 2025-26ರ ಅವಧಿಯಲ್ಲಿ ಆಯೋಗ ಶಿಫಾರಸು ಮಾಡಿರುವ ವಿಶೇಷ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು.

2. ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ವಸೂಲು ಮಾಡುತ್ತಿರುವ ಸೆಸ್ ಮತ್ತು ಸರ್ಚಾರ್ಜ್ ಗಳಲ್ಲಿ ರಾಜ್ಯಗಳಿಗೆ ಪಾಲು ನೀಡಲಾಗುತ್ತಿಲ್ಲ. 2010-11ರಲ್ಲಿ ಒಟ್ಟು ತೆರಿಗೆಯ ಶೇಕಡಾ 8.1ರಷ್ಟಿದ್ದ ಸೆಸ್ ಮತ್ತು ಸರ್ಚಾರ್ಜ್ ನ ಪ್ರಮಾಣ 2024-25ರಲ್ಲಿ ಶೇಕಡಾ 14ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಕರ್ನಾಟಕಕ್ಕೆ ಬರುವ ತೆರಿಗೆ ಪಾಲಿನಲ್ಲಿ ಕಡಿತ ಉಂಟಾಗಿದೆ. ಇದರ ಜೊತೆಯಲ್ಲಿ ಕೇಂದ್ರದ ಸಹಾಯ ಧನ ಕೂಡಾ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಸೆಸ್‌ ಮತ್ತು ಸರ್ಚಾರ್ಜ್ ಅನ್ನು ರದ್ದುಗೊಳಿಸಬೇಕು ಇಲ್ಲವೆ ಅದನ್ನು ಒಟ್ಟು ತೆರಿಗೆಯ ನಿಧಿಗೆ ಸೇರಿಸಿ ಅದನ್ನು ರಾಜ್ಯಗಳಿಗೆ ಹಂಚಿಕೆ ಮಾಡಬೇಕು.

3. ಜಿಎಸ್‌ಟಿ ಅನುಷ್ಠಾನದಿಂದಾಗಿ ರಾಜ್ಯ ಸರ್ಕಾರಗಳಿಗೆ ಆಗುವ ನಷ್ಟಕ್ಕೆ ಪರಿಹಾರ ನೀಡಲು ಜಿಎಸ್ ಟಿ ಪರಿಹಾರ ಸೆಸ್ ಜಾರಿಗೊಳಿಸಲಾಗಿತ್ತು. 2022ರ ಜುಲೈ ತಿಂಗಳಲ್ಲಿಯೇ ಪರಿಹಾರ ನೀಡುವುದನ್ನು ನಿಲ್ಲಿಸಿದರೂ 2026ರ ವರೆಗೆ ಸೆಸ್ ಸಂಗ್ರಹವನ್ನು ಮುಂದುವರಿಸಲಾಗಿದೆ.. ಈ ಸೆಸ್ ಬದಲಿಗೆ ಹೆಚ್ಚುವರಿ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್ ಜಿಎಸ್ ಟಿ) ಸಂಗ್ರಹಕ್ಕೆ ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಬೇಕು.

4. 1985ರಿಂದ ಸೇವಾ ತೆರಿಗೆಯನ್ನು ಪರಿಷ್ಕರಿಸಿಲ್ಲ, ಈ ದೀರ್ಘಾವಧಿಯಲ್ಲಿ ನಡೆದಿರುವ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸೇವಾ ತೆರಿಗೆಯ ಗರಿಷ್ಠ ಮಿತಿಯನ್ನು ಹೆಚ್ಚಿಸಲು ಸಂವಿಧಾನಕ್ಕೆ ತಿದ್ದುಪಡಿಮಾಡಬೇಕು.

5. ಬ೦ಡವಾಳ ವೆಚ್ಚಕ್ಕೆ ವಿಶೇಷ ನೆರವು ನೀಡುವ ಯೋಜನೆ ಸ್ವಾಗತಾರ್ಹವಾದುದು. ಆದರೆ ತೆರಿಗೆ ಹಂಚಿಕೆಯಲ್ಲಿ ಸಿಗುವ ಪಾಲಿನ ಆಧಾರದಲ್ಲಿಯೇ ಈ ವಿಶೇಷ ನೆರವು ನೀಡುತ್ತಿರುವ ಕಾರಣದಿಂದಾಗಿ ಈಗಾಗಲೇ ತೆರಿಗೆ ಹಂಚಿಕೆಯಲ್ಲಿ ಅನ್ಯಾಯಕ್ಕೀಡಾಗಿರುವ ಕರ್ನಾಟಕಕ್ಕೆ ಅತಿ ಕಡಿಮೆ ನೆರವು ಸಿಗುತ್ತಿದೆ. ಈ ಕಾರಣಕ್ಕಾಗಿ ವಿಶೇಷ ನೆರವು ಯೋಜನೆಯ ಮಾನದಂಡವನ್ನು ಬದಲಾಯಿಸಬೇಕು.

6. ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ಸುಮಾರು 69 ಲಕ್ಷ ಬಡ ಕುಟುಂಬಗಳನ್ನು ಮಾತ್ರ ಫಲಾನುಭವಿಗಳಾಗಿ ಗುರುತಿಸಿ ನೆರವು ನೀಡುತ್ತಿದೆ. ಇದರಿಂದಾಗಿ ಆರೋಗ್ಯ ಕರ್ನಾಟಕ ಯೋಜನೆಯ ಶೇಕಡಾ 60ರಷ್ಟು ಕುಟುಂಬಗಳಿಗೆ ಮಾತ್ರ ಕೇಂದ್ರ ಸರ್ಕಾರ ಅನುದಾನ ನೀಡುವಂತಾಗಿದ್ದು ಉಳಿದ ಕುಟುಂಬಗಳ ಹೊಣೆಯನ್ನು ರಾಜ್ಯ ಸರ್ಕಾರ ಹೊರಬೇಕಾಗಿದೆ. ಆದರೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ 1.14 ಕುಟುಂಬಗಳನ್ನು ಫಲಾನುಭವಿಗಳೆಂದು ಗುರುತಿಸಿದೆ... ಈ ನಿಯಮಾವಳಿಗಳನ್ನು ಬದಲಾಯಿಸಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಾಗಿರುವರೆಲ್ಲರಿಗೂ ಆರೋಗ್ಯ ಯೋಜನೆಯನ್ನು ವಿಸ್ತರಿಸಬೇಕು.

7. ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರದ ನಿಯಮಾವಳಿಗಳಿಗೆ ಅನುಗುಣವಾಗಿ ಕರ್ನಾಟಕ ಸರ್ಕಾರ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡುತ್ತಿದೆ. ಈ ಯೋಜನೆಗೆ ಸ೦ಬ೦ಧಿಸಿದ೦ತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿರು ರೂ.2,461.49 ಕೋಟಿ ಹಣವನ್ನು ಬಾಕಿ ಇರಿಸಿರುವುದರಿಂದಾಗಿ ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಹಣ ಬಿಡುಗಡೆ ಮಾಡಬೇಕಾಗಿದೆ. ಈ ಬಾಕಿ ಹಣವನ್ನು ಶೀಘ್ರ ಬಿಡುಗಡೆಗೊಳಿಸಬೇಕು.

8. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಗೌರವಧನ ಮತ್ತು ಸಾಮಾಜಿಕ ಭದ್ರತಾ ಪಿಂಚಣಿಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಹಣ ಅತಿ ಕಡಿಮೆ ಮೊತ್ತದಾಗಿದ್ದು ಕಳೆದ ಕೆಲವು ವರ್ಷಗಳಿಂದ ಅದನ್ನು ಪರಿಷ್ಕರಿಸಿಲ್ಲ. ಈ ಪರಿಸ್ಥಿತಿಯಲ್ಲಿ ಕೇಂದ್ರದ ಪಾಲನ್ನು ರಾಜ್ಯ ಸರ್ಕಾರವೇ ನೀಡಬೇಕಾದ ಪರಿಸ್ಥಿತಿ ಇದೆ. ಇದರಿಂದ ರಾಜ್ಯದ ಖಜಾನೆ ಮೇಲೆ ಒತ್ತಡ ಹೆಚ್ಚಾಗುತ್ತಿದೆ.

ರಾಜ್ಯದ ಅಂಗನವಾಡಿ ಕಾರ್ಯಕರ್ತರರಿಗೆ ಮಾಸಿಕ ರೂ,10000 ಗೌರವಧನ ನೀಡಲಾಗುತ್ತಿದ್ದು ಇದರಲ್ಲಿ ಕೇಂದ್ರದ ಪಾಲು 2700 ರೂಪಾಯಿ ಮಾತ್ರ. ಆಶಾ ಕಾರ್ಯಕರ್ತರಿಗೆ ನೀಡುವ 7000 ರೂ. ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲು ರೂ. 2000. ಅಂಗನವಾಡಿಯ ಅಡುಗೆ ಕೆಲಸಗಾರರು ಮತ್ತು ಸಹಾಯಕರಿಗೆ ರಾಜ್ಯ ಸರ್ಕಾರ ರೂ.3100 ವೇತನ ನೀಡುತ್ತಿದ್ದು ಇದರಲ್ಲಿ ಕೇಂದ್ರ ಸರ್ಕಾರ ಪಾಲು 2.600 3. ಈ ಕಾರ್ಯಕರ್ತರ ವೇತನದ ಬಾಕಿಮೊತ್ತವನ್ನು ಭರಿಸುವುದು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ.

ಅಂಗನವಾಡಿ ಮತ್ತು ಆಶಾಕಾರ್ಯಕರ್ತರ ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ರೂ.5000ಕ್ಕೆ ಮತ್ತು ಅಡುಗೆ ಕೆಲಸಗಾರರು ಮತ್ತು ಕಾರ್ಯಕರ್ತರ ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ಕನಿಷ್ಠ ರೂ.5000 ಹೆಚ್ಚಿಸಬೇಕು.

9. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಕೇಂದ್ರ ಸರ್ಕಾರ ಪ್ರತಿಯೊಂದು ಮನೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ರೂ.1.50 ಲಕ್ಷ ಮತ್ತು ರಾಜ್ಯ ಸರ್ಕಾರ 1.80 ಲಕ್ಷ ಸಹಾಯ ಧನ ನೀಡುತ್ತಿದೆ. ಆದರೆ ಮನೆನಿರ್ಮಾಣ ವೆಚ್ಚ ವಿಪರೀತ ಏರಿಕೆಯಾಗುವುದರಿಂದ ಕೇಂದ್ರ ಸರ್ಕಾರ ತನ್ನ ಪಾಲನ್ನು ಕನಿಷ್ಠ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು.

10. ಪ್ರಧಾನ ಮಂತ್ರಿ ಅವಾಸ ಯೋಜನೆ (ಗ್ರಾಮೀಣ) ಪ್ರತಿ ಮನೆಗೆ ಕೇಂದ್ರ ಸರ್ಕಾರ 72 ಲಕ್ಷ ರೂಪಾಯಿ ಮತ್ತು ರಾಜ್ಯ ಸರ್ಕಾರ 42 ಲಕ್ಷ ರೂಪಾಯಿ ಸಹಾಯಧನ ನೀಡುತ್ತಿದೆ. ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ತನ್ನ ಪಾಲನ್ನು ಕನಿಷ್ಠ ಮೂರು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು.

11. 2023ರಲ್ಲಿ ಕರ್ನಾಟಕದ 236 ತಾಲೂಕುಗಳ ಪೈಕಿ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದ ಕಾರಣದಿಂದಾಗಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿ ರೂ.35,162 ಕೋಟಿ ನಷ್ಟ ಉಂಟಾಗಿತ್ತು. ಇದಕ್ಕಾಗಿ ಕರ್ನಾಟಕ ರೂ.18,171 ಕೋಟಿ ಪರಿಹಾರ ಕೇಳಿದ್ದರೂ ಎನ್ ಡಿಆರ್ ಎಫ್ ನಿ೦ದ ಬಿಡುಗಡೆಯಾಗಿದ್ದು ಕೇವಲ ರೂ.3454 ಕೋಟಿ ಮಾತ್ರ. 2024ರಲ್ಲಿ ಅತಿವೃಷ್ಟಿಯಿಂದ ರಾಜ್ಯದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಆಗಿರುವ ಹಾನಿಗೆ ಎನ್ ಡಿಎಂಎಫ್ ನಿಂದ ಪರಿಹಾರ ಕೇಳಿದ್ದರೂ ಇಲ್ಲಿಯ ವರೆಗೆ ಚಿಕ್ಕಾಸು ಸಿಕ್ಕಿಲ್ಲ.

12. ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ (ಎನ್ ಡಿಆರ್ ಎಫ್) ಮತ್ತು ಎಸ್ ಡಿಆರ್ ಎಫ್‌ ನಿಧಿಗಳಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಷ್ಟಕ್ಕೆ ಸರಿಸಮನಾಗಿ ಪರಿಹಾರ ನೀಡಲು ಸಹಾಯವಾಗುವಂತೆ ಮತ್ತು ಪರಿಹಾರ ನೀಡುವ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ತ್ವರಿತಗತಿಯಲ್ಲಿ ನಡೆಯುವಂತೆ ಎನ್ ಡಿಆರ್ ಎಫ್ ಅನ್ನು ಸುಧಾರಣೆಗೊಳಪಡಿಸಬೇಕು. ಪರಿಹಾರ ನೀಡಿಕೆಯ ಮಾನದಂಡಗಳನ್ನು ಬರಪೀಡಿತ ರಾಜ್ಯಗಳಿಗೆ ನೆರವಾಗುವ ರೀತಿಯಲ್ಲಿ ಪರಿಹಾರ ನೀಡಿಕೆಯ ಮಾನದಂಡಗಳನ್ನು ಬದಲಾವಣೆ ಮಾಡಬೇಕು.

13. ರೈಲ್ವೆ ಯೋಜನೆಗಳು ಸಂವಿಧಾನದ ಏಳನೇ ಶೆಡ್ಯೂಲ್ ಪ್ರಕಾರ ಕೇಂದ್ರ ಪಟ್ಟಿಯಲ್ಲಿದ್ದರೂ ಇವುಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಪ್ರಸ್ತುತ ರೈಲ್ವೆ ಯೋಜನೆಗಳ ಸಂಬಂಧಿಸಿದ ಭೂಸ್ವಾಧೀನದ ಸಂಪೂರ್ಣ ವೆಚ್ಚ ಮತ್ತು ನಿರ್ಮಾಣ ವೆಚ್ಚದ ಅರ್ಧಭಾಗವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ಪಾಲುದಾರಿಕೆಯನ್ನು ಬದಲಾಯಿಸಿ ಭೂಸ್ವಾಧೀನ ವೆಚ್ಚದ ಅರ್ಧಪಾಲು ಮತ್ತು ನಿರ್ಮಾಣ ವೆಚ್ಚವನ್ನು ಪೂರ್ಣವಾಗಿ ಕೇಂದ್ರ ಸರ್ಕಾರವೇ ನೀಡಬೇಕು.

14. ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತ್ರತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್ ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ. ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯ ಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಿಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು.

ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಕೇಂದ್ರ ಸರ್ಕಾರ ಶೀಘ್ರವಾಗಿ ಈ ನದಿ ತಿರುವು ಯೋಜನೆಗೆ ಅನುಮತಿ ನೀಡಬೇಕು.

15. ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010 ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಆದರೆ ಸುಪ್ರೀಮ್ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐತೀರ್ಪನ್ನು ಗೆಜೆಟ್ ನಲ್ಲ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ,

16. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಗೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಇದೇ ಬಜೆಟ್ ನಲ್ಲಿ ಈ ಘೋಷಣೆ ಮಾಡಬೇಕೆಂದು ಒತ್ತಾಯಿಸುತ್ತಿದ್ದೇವೆ.

17. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ ಶೀಘ್ರವಾಗಿ ಈ ಯೋಜನೆಗೆ ಅನುಮತಿ ನೀಡಬೇಕು.

18. ಭೌಗೋಳಿಕ ವೈಶಿಷ್ಟ್ಯ ಮತ್ತು ಪರಿಸರ ಸಂಬಂಧಿ ಗುಣಲಕ್ಷಣಗಳಿಂದಾಗಿ ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಹಲವಾರು ಬಗೆಯ ಸವಾಲುಗಳನ್ನು ಎದುರಿಸುತ್ತಿದೆ. ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿರುವ ಪಶ್ಚಿಮಘಟ್ಟದ ಸಂರಕ್ಷಣೆಗಾಗಿ ಮಲೆನಾಡು ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಐದು ವರ್ಷಗಳ ಅವಧಿಗೆ 10,000 ರೂಪಾಯಿಗಳ ವಿಶೇಷ ಅನುದಾನವನ್ನು ಘೋಷಿಸಬೇಕು.

19. ಕಲ್ಯಾಣ ಕರ್ನಾಟಕ ಎ೦ದು ಕರೆಯಲಾಗುವ ಹೈದರಾಬಾದ್ ಕರ್ನಾಟಕ ಪ್ರದೇಶ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಪ್ರಾದೇಶಿಕ ಅಸಮತೋಲನದ ಸವಾಲನ್ನು ಎದುರಿಸುತ್ತಿದೆ. ಈ ಪ್ರದೇಶದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರತಿವರ್ಷ 5,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಇದಕ್ಕೆ ಪೂರಕವಾಗಿ ರೂ.5000 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಬೇಕು.

20. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುತ್ತಿರುವ ಅನುದಾನದಲ್ಲಿಯೂ ಕಡಿತವಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆರು ತಿಂಗಳಲ್ಲಿ 61 ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು ಜಾರಿಗೆ ತರುತ್ತಿರುವ 23 ಇಲಾಖೆಗಳಿಗೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲ.

21. ಕೇಂದ್ರ ಅನುದಾನಿತ ಯೋಜನೆಗಳ ಒಟ್ಟು ಸ್ವರೂಪವನ್ನೇ ಬದಲಾಯಿಸಬೇಕಾದ ಅಗತ್ಯ ಇದೆ. ಈ ಯೋಜನೆಗಳನ್ನು ರೂಪಿಸುವಾಗ ರಾಜ್ಯಗಳ ಜೊತೆ ಸಮಾಲೋಚನೆ ನಡೆಸುವ ಅಗತ್ಯ ಇದೆ. ಇದರಿಂದ ರಾಜ್ಯ ಸರ್ಕಾರ ನೀಡಬೇಕಾಗಿರುವ ಪಾಲಿನ ಬಗ್ಗೆ ನಮಗೂ ಸ್ಪಷ್ಟತೆ ಇರುತ್ತದೆ. ಈಗಿನ ವ್ಯವಸ್ಥೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಮೂಲವೆಚ್ಚಕ್ಕಿಂತ ಕಡಿಮೆ ಮೊತ್ತದ ಹಣವನ್ನು ಕೇಂದ್ರ ಸರ್ಕಾರ ನೀಡುವುದರಿಂದ ರಾಜ್ಯ ಸರ್ಕಾರ ತನ್ನ ಸ್ವಂತಮೂಲದಿಂದ ಸಂಪನ್ಮೂಲವನ್ನು ಬಳಸಬೇಕಾಗುತ್ತದೆ. ಕೇಂದ್ರ ಸರ್ಕಾರ ಅನುದಾನಿತ ಯೋಜನೆಗಳಿಗೆ ಅನುಮತಿ ನೀಡಿದಾಗಲೇ ಅದಕ್ಕೆ ಸಂಬಂಧಿಸಿದ ಪೂರ್ಣ ವೆಚ್ಚವನ್ನು ಬಿಡುಗಡೆಗೊಳಿಸಿದರೆ ರಾಜ್ಯಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುತ್ತದೆ.

22. ಸಮಗ್ರ ಶಿಶು ರಕ್ಷಣಾ ಯೋಜನೆ( ವಾತ್ಸಲ್ಯ ಮಿಷನ್) ಸಮಗ್ರ ಶಿಕ್ಷಾ, ಅತ್ಯಾಚಾರ ಮತ್ತು ಪೋಕೋ ಕಾಯ್ದೆ ಪ್ರಕರಣಗಳ ನಿರ್ವಹಣೆಗಾಗಿ ರಚಿಸಲಾಗಿರುವ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ, ಉಣ್ಣೆ, ಹಾಲು, ಮಾಂಸ ಮೊದಲಾದ ವಸ್ತುಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣವನ್ನು ಮರುಪಾವತಿ ಪದ್ದತಿಯ ಬದಲಿಗೆ ಮುಂಗಡವಾಗಿ ಪಾವತಿಸಬೇಕು..

23. ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿ ಕೇಂದ್ರ ಸರ್ಕಾರ 14.41 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ಮತ್ತಿತರ ರೂಪಗಳಲ್ಲಿ ಆರ್ಥಿಕ ನೆರವು ನೀಡುತ್ತಿದೆ. ರಾಜ್ಯ ಸರ್ಕಾರ ತನ್ನ ಸ್ವಂತ ಯೋಜನೆಗಳಡಿಯಲ್ಲಿ 68,66 ಲಕ್ಷ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುತ್ತಿದೆ. ಈಗಿನ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಶೇಕಡಾ 17ರಷ್ಟು ಫಲಾನುಭವಿಗಳಿಗೆ ಮಾತ್ರ ನೆರವು ನೀಡುತ್ತಿದ್ದು ಇದನ್ನು ಬದಲಾಯಿಸಿ ರಾಷ್ಟ್ರೀಯ ಸಾಮಾಜಿಕ ನೆರವು ನೀಡುವ ಯೋಜನೆಯಡಿ ರಾಜ್ಯದ ಕನಿಷ್ಠ ಶೇಕಡಾ 50ರಷ್ಟು ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವಂತೆ ಮಾಡಬೇಕು.

2023-24ರಲ್ಲಿ ಸಾಮಾಜಿಕ ಭದ್ರತಾ ಯೋಜನೆಳಿಗಾಗಿ ಖರ್ಚು ಮಾಡಲಾಗಿರುವ ಹಣ ರೂ.10,544 ಕೋಟಿ ಇದರಲ್ಲಿ ಕೇಂದ್ರ ಸರ್ಕಾರದ ಪಾಲು ರೂ.471 ಕೋಟಿ ಮಾತ್ರ ಇದು ಒಟ್ಟು ವೆಚ್ಚದ ಶೇಕಡಾ ನಾಲ್ಕರಷ್ಟಾಗುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಅನುದಾನದ ಮೊತ್ತವನ್ನು ಪರಿಷ್ಕರಿಸಿಲ್ಲ. ಇದನ್ನು ಮಂದಿನ ಹಣಕಾಸು ವರ್ಷದಲ್ಲಿ ಬದಲಾಯಿಸಬೇಕು.

ಈ ಸುದ್ದಿಯನ್ನೂ ಓದಿ | Union Budget 2025: ಜವಾಹರ್‌ಲಾಲ್ ನೆಹರೂ, ಮನಮೋಹನ್‌ ಸಿಂಗ್‌...: ಕೇಂದ್ರ ಬಜೆಟ್‌ ಮಂಡಿಸಿದ ಪ್ರಧಾನಿಗಳಿವರು

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್