ವಿಕಸಿತ ಭಾರತದತ್ತ ಇನ್ನೊಂದು ದೃಢ ಹೆಜ್ಜೆ: ಬಜೆಟ್ ಬಗ್ಗೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರತಿಕ್ರಿಯೆ
Union Budget 2026: ಜನತೆಯ ಆಶೋತ್ತರಗಳನ್ನು ಸಾಧಿಸಬಲ್ಲ ಯೋಜನೆಗಳು ಮತ್ತು ತುಷ್ಟೀಕರಣದ ಮಾನಸಿಕತೆಯಿಂದ ಹೊರಬಂದು ಜನಸಾಮಾನ್ಯರನ್ನು ಕೇಂದ್ರವಾಗಿರಿಸಿರುವ ಈ ಬಾರಿಯ ಕೇಂದ್ರ ಬಜೆಟ್ ಅಭಿನಂದನೀಯ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಕ್ಯಾಪ್ಟನ್ ಗಣೇಶ್ ಕಾರ್ಣಿಕ್ -
ಬೆಂಗಳೂರು: ಕೇಂದ್ರದ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 9ನೇ ಬಜೆಟ್ ಮೋದಿಯವರ ಕನಸಿನ ವಿಕಸಿತ ಭಾರತದತ್ತ ಇಟ್ಟಿರುವ ಇನ್ನೊಂದು ದೃಢ ಹೆಜ್ಜೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ವಿಶ್ಲೇಷಿಸಿದ್ದಾರೆ.
ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದ ಜನತೆಯ ಮನಸ್ಸಿನಲ್ಲಿ ಆರ್ಥಿಕ ವಿಶ್ವಾಸ ತುಂಬಿರುವ ಸ್ವಾಗತಾರ್ಹ ಬಜೆಟ್. ದೀರ್ಘಕಾಲೀನ ಆರ್ಥಿಕ ಗುರಿಯನ್ನು ಮುಟ್ಟಲು ಅಗತ್ಯವಿರುವ ಅಲ್ಪಕಾಲೀನ ಯೋಜನೆಗಳೊಂದಿಗೆ ಸಂತುಲನೆಯ ಸಮದೃಷ್ಟಿಯ ಸಂತುಲಿತ ಬಜೆಟ್ ಇದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಸಮುದಾಯವನ್ನಾಗಲಿ, ಸಂಸ್ಥೆಯನ್ನಾಗಲಿ, ವರ್ಗವನ್ನಾಗಲಿ ತುಷ್ಟೀಕರಿಸುವ ಹಿಂದಿನ ಸರಕಾರಗಳ ಯೋಚನೆಗಳಿಗೆ ವಿರುದ್ಧವಾಗಿ, ಜಾಗತಿಕ ಆರ್ಥಿಕ ತಲ್ಲಣವನ್ನು ಗಮನದಲ್ಲಿರಿಸಿ ನಮ್ಮ ದೇಶದ ಜನತೆಯ ಭವಿಷ್ಯದ ಹಿತವನ್ನು ಕಾಪಾಡಲು ಅಗತ್ಯವಿರುವ ಯೋಚನೆ ಮತ್ತು ಯೋಜನೆಗಳನ್ನು ಹೊಂದಿರುವ ಮುಂಗಡಪತ್ರ ಇದು. ಜನತೆಯ ಆಶೋತ್ತರಗಳನ್ನು ಸಾಧಿಸಬಲ್ಲ ಯೋಜನೆಗಳು ಮತ್ತು ತುಷ್ಟೀಕರಣದ ಮಾನಸಿಕತೆಯಿಂದ ಹೊರಬಂದು ಜನಸಾಮಾನ್ಯರನ್ನು ಕೇಂದ್ರವಾಗಿರಿಸಿರುವ ಬಜೆಟ್ ಅಭಿನಂದನೀಯ ಎಂದು ತಿಳಿಸಿದ್ದಾರೆ.
ಬಜೆಟ್‌ನಲ್ಲಿ ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲಿಗೆ ಆದ್ಯತೆ ಕೊಡಬೇಕಿತ್ತು: ಎಂ.ಬಿ. ಪಾಟೀಲ್
ಮೂಲಭೂತ ಸೌಕರ್ಯಗಳು, ಕೃಷಿ, ಉದ್ಯೋಗ, ಸೆಮಿ ಕಂಡಕ್ಟರ್, ಪ್ರೆಶಿಯಸ್ ಲೋಹಗಳು, ಡೇಟಾ ಕೇಂದ್ರಗಳು ಮುಂತಾದ ಕ್ಷೇತ್ರಗಳಲ್ಲಿ ಸ್ವಾವಲಂಬನೆಯ ಯೋಜನೆಗಳ ಅಭಿವೃದ್ಧಿಗೆ ಪೂರಕ ಬಜೆಟ್ ಎಂದು ತಿಳಿಸಿದ್ದಾರೆ.