ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ತೆರಳಿದ್ದಾರೆ.

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ  ಹೆಚ್.ಡಿ.ಕುಮಾರಸ್ವಾಮಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 15, 2026 10:07 AM

ತಿರುವನಂತಪುರಂ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಶಬರಿಮಲೆ ಯಾತ್ರೆ (Shabarimale) ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ತೆರಳಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡವು, ತದನಂತರ ಹಂಪಿಯಲ್ಲಿ ಪುಣ್ಯ ಸ್ನಾನ ಮಾಡಿ ಶಬರಿಮಲೆ ಅಂತ ಸಾಗಲಿದೆ.

Shabarinmale Temple (1)

ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಿರುವ ಕುಮಾರಸ್ವಾಮಿ ಅವರು, ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ. ಇದಕ್ಕೂ ಮೊದಲು ಅವರು ಹಲವಾರು ಬಾರಿ ಅಯ್ಯಪ್ಪನ ಸನ್ನಿಧಿಗೆ ಯಾತ್ರೆ ಕೈಗೊಂಡಿದ್ದಾರೆ.

Bidadi Township: ಬಿಡದಿ ಟೌನ್‌ಶಿಪ್ ಸರ್ಕಾರಿ ರಿಯಲ್ ಎಸ್ಟೇಟ್ ಯೋಜನೆ: ಎಚ್.ಡಿ. ಕುಮಾರಸ್ವಾಮಿ ಕಿಡಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಮಂತ್ರಿಗಳಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಶಾಸಕರಾದ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರ ತಂಡದೊಂದಿಗೆ ಕೇಂದ್ರ ಸಚಿವರು ಯಾತ್ರೆ ಕೈಗೊಂಡಿದ್ದಾರೆ.