HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ; ಮೀಡಿಯಾ ಸೆಕ್ರೆಟರಿ ಚೆನ್ನಕೃಷ್ಣ ಮಾಹಿತಿ
ಕೇಂದ್ರ ಸಚಿವ ಎಚ್ ಡಿ ಕುಮಾರ ಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕಫದ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿಸಾಗಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ ಈ ಕುರಿತು ಇದೀಗ ಸ್ಪಷ್ಟನೆ ದೊರಕಿದೆ. ಕುಮಾರ ಸ್ವಾಮಿಯವರ ಮೀಡಿಯಾ ಸೆಕ್ರೆಟರಿ ಚೆನ್ನಕೃಷ್ಣ ಮಾಹಿತಿ ನೀಡಿದ್ದಾರೆ.


ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರ (HD Kumaraswamy) ಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕಫದ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿಸಾಗಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ ಈ ಕುರಿತು ಇದೀಗ ಸ್ಪಷ್ಟನೆ ದೊರಕಿದೆ. ಕುಮಾರ ಸ್ವಾಮಿಯವರ ಮೀಡಿಯಾ ಸೆಕ್ರೆಟರಿ ಚೆನ್ನಕೃಷ್ಣ ಮಾಹಿತಿ ನೀಡಿದ್ದು, ಸಚಿವರು ಆರಾಮವಾಗಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಅವರು ಜಾರ್ಖಂಡ್ ನಲ್ಲಿ ಇದ್ದಾರೆ. ಇಂದು ಬೆಂಗಳೂರಿಗೆ ವಾಪಾಸು ಆಗುವುದಾಗಿ ತಿಳಿಸಿದ್ದಾರೆ. ಅವರ ಆರೋಗ್ಯದ ಸ್ಥಿತಿ ಕೇಳಿ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು.
ಏ. 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಖಂಡಿಸಿದ್ದರು. ಭಾರತೀಯ ಸೇನೆಯು ಈ ಹೇಡಿತನದ ಕೃತ್ಯಕ್ಕೆ ಸೂಕ್ತ ಉತ್ತರ ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಭಯೋತ್ಪಾದಕ ದಾಳಿ ಖಂಡನೀಯ ಮತ್ತು ಹೇಯ ಕೃತ್ಯವಾಗಿದೆ. ಭಾರತದ ಶಾಂತಿಯನ್ನು ಕದಡುವ ಪ್ರಯತ್ನ ಮಾಡಿದವರಿಗೆ ಸರಿಯಾಗಿ ಉತ್ತರ ಸಿಗಲಿದೆ ಎಂದು ಅವರು ಹೇಳಿದ್ದಾರೆ. ನಮ್ಮ ರಾಷ್ಟ್ರವು ಅಂತಹ ವಿನಾಶಕಾರಿ ಶಕ್ತಿಗಳನ್ನು ಹೋರಾಡುವ ಮತ್ತು ಸೋಲಿಸುವ ಶಕ್ತಿಯನ್ನು ಹೊಂದಿದೆ. ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಗಳಿಗೆ ದಯಪಾಲಿಸಲಿ ಎಂದು ಸಚಿವರು ತಮ್ಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ: HD Kumaraswamy: ಭೂ ಒತ್ತುವರಿ ಪ್ರಕರಣ; ಎಚ್.ಡಿ. ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಣೆ
ಇನ್ನು ಜೆಡಿಎಸ್ ಪಕ್ಷದ ಮುಖಂಡರ ಸಭೆ ನಡೆಯುತ್ತಿದ್ದು, ಏಪ್ರಿಲ್ ತಿಂಗಳ ಒಳಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರನ್ನು ನೇಮಕ ಮಾಡುವ ಬಗ್ಗೆ ಪಕ್ಷದ ಎಲ್ಲಾ ಪ್ರಮುಖ ಮುಖಂಡರು ಹಾಗೂ ಶಾಸಕರು, ಮಾಜಿ ಶಾಸಕರು, ಸಭೆಯಲ್ಲಿ ಒಲವು ತೋರಿದ್ದಾರೆಂದು ತಿಳಿದುಬಂದಿದೆ. ಬಹುತೇಕ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ಆಂತರಿಕ ಚುನಾವಣೆ ಮೂಲಕ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.