ಬೆಂಗಳೂರು: ಇಳಿ ವಯಸ್ಸಿನಲ್ಲೂ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ, ಚಿರ ಯುವಕರಂತೆ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿರುವ, ಶೈಕ್ಷಣಿಕ , ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅನರ್ಘ್ಯ ಸೇವೆಸಲ್ಲಿಸಿದ ಸಮಾಜಬಂಧು ಸುಬ್ಬರಾಮ ಶೆಟ್ಟರು. ಅವರಿಗೆ ಕರ್ನಾಟಕ ಆರ್ಯ ವೈಶ್ಯ ಜೀವಮಾನ ಸಾಧನೆ ಗೌರವ ಸಲ್ಲಿಸಲಾಗಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗು ಕನ್ನಡ ಪ್ರಭ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಇವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸುಬ್ಬರಾಮ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿದರು. ಕರ್ನಾಟಕ ಆರ್ಯ ವೈಶ್ಯ ಮಹಾ ಸಭಾ ಅಧ್ಯಕ್ಷ ಆರ್.ಪಿ. ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Bangalore News: ಕನ್ನಡದಲ್ಲಿ ವಿಜ್ಞಾನದ ರಸದೌತಣ: ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್‌ನಿಂದ ವಿಶೇಷ ಅಭಿಯಾನ!
ಎ.ಪಿ.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸಿ ಎ.ಡಾ.ವಿಷ್ಣುಭರತ್ ಆಲಂಪಲ್ಲಿ ಮಾತನಾಡಿ, ತಮಗೆ ಜಿ.ಕೆ. ಸುಬ್ಬರಾಮ ಶೆಟ್ಟಿ ಮಾದರಿಯಾಗಿದ್ದು, ಅವರ ಪ್ರೇರಣೆಯಿಂದ ತಾವು ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ಆರ್.ವಿ. ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಗೆ ಕಾರಣೀಭೂತರಾದ ಶಿಕ್ಷಣತಜ್ಞ. ಬಡಮಕ್ಕಳಿಗೆ ನೆರವಾದ ಸಮಾಜಮುಖಿ ಉದ್ಯಮಿ. ಸುಶಿಕ್ಷಿತ ಕುಟುಂಬದ ಕುಡಿಯಾದ ಸುಬ್ಬರಾಮ ಶೆಟ್ಟಿ, ಅವರು ಬಿಎಸ್ಸಿ, ಟೆಕ್ಸ್ಟೈಲ್ಸ್ ಪದವೀಧರರು. ಆರ್.ವಿ.ಶಿಕ್ಷಣ ಸಂಸ್ಥೆಯ ಕೋಶಾಧ್ಯಕ್ಷರಾಗಿ ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ದುಡಿದು ಸಂಸ್ಥೆಯ ಪ್ರಗತಿಗೆ ಅಮೂಲ್ಯ ಕಾಣಿಕೆ ಕೊಟ್ಟದ್ದಾರೆ.
ವಾಸವಿ ಟ್ರಸ್ಟ್ ಅಧ್ಯಕ್ಷರಾಗಿ ಆಸ್ಪತ್ರೆ, ಕನ್ವೆನ್ಷನ್ ಹಾಲ್ ನಿರ್ಮಾಣ, ಬೆಂಗಳೂರು ಗ್ರಾಮಾಂ ತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟದಲ್ಲಿ ಮಾರುತಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷರಾಗಿ ಹಳ್ಳಿಮಕ್ಕಳಲ್ಲಿ ಅಕ್ಷರ ಜ್ಯೋತಿ ಬೆಳಗಿದವರು. ಜೀವನಸಂಧ್ಯಾ ಟ್ರಸ್ಟ್ ಅಧ್ಯಕ್ಷರಾಗಿ ವೃದ್ಧರ ಹಾಗೂ ಎಪಿಎಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.
ಜನಸೇವಾ ವಿದ್ಯಾಕೇಂದ್ರದ ಅಧ್ಯಕ್ಷರಾಗಿ ಗ್ರಾಮೀಣ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ, ಹಿಂದೂ ಸೇವಾ ಪ್ರತಿಷ್ಠಾನ-ಭಾರತ್ ವಿಕಾಸ್ ಪರಿಷತ್ತುಗಳಲ್ಲಿ ಗಣನೀಯ ಸೇವೆ, ಕೋಮ ರ್ಲ ಉದ್ದಿಮೆಗಳ ಗುಂಪಿನ ಅಧ್ಯಕ್ಷರಾಗಿ ಉದ್ಯಮರಂಗದಲ್ಲೂ ಸಾಧನೆ, ಎಫ್,ಕೆ.ಸಿ.ಸಿ.ಐ ಅಧ್ಯಕ್ಷ, ಬೆಂಗಳೂರು ವಿವಿ ಸೆನೆಟ್ ಸದಸ್ಯ, ಪೀಪಲ್ಸ್ ಟ್ರಸ್ಟ್ ಅಧ್ಯಕ್ಷ ಸೇರಿ ಹತ್ತಾರು ಸಂಸ್ಥೆ ಗಳ ಪದಾಧಿಕಾರಿಯಾಗಿ ಸೇವೆಗೈದ ವಿರಳ ಸೇವಾಸಿಂಧು. ರಾಜ್ಯೋತ್ಸವ 2022, ಕೆಂಪೇಗೌಡ ಪ್ರಶಸ್ತಿ ನೀಡಲಾಗಿದೆ.