ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಇಂದಿನಿಂದ ಅನ್‌ಲಿಮಿಟೆಡ್‌ ಪಾಸ್‌

ಇದುವರೆಗೆ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ (ಸಿಎಸ್‌ಸಿ) ಮೂಲಕವೇ ಲಭ್ಯವಾಗುತ್ತಿದ್ದು, ₹50 ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯವಾಗಿತ್ತು. ಇದೀಗ ಮೊಬೈಲ್ ಕ್ಯೂಆರ್‌ ಕೋಡ್‌ ಪಾಸ್‌ಗಳ ಪರಿಚಯದೊಂದಿಗೆ, ಪಾಸ್‌ಗಳು ಮೊಬೈಲ್ ಫೋನ್‌ಗಳಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುತ್ತವೆ. ಪ್ರಯಾಣಿಕರಿಗೆ ಯಾವುದೇ ಭದ್ರತಾ ಠೇವಣಿ ಪಾವತಿಸುವ ಅಗತ್ಯವಿರುವುದಿಲ್ಲ.

ನಮ್ಮ ಮೆಟ್ರೋ

ಬೆಂಗಳೂರು, ಜ.15 : ಬೆಂಗಳೂರಿನ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇದೀಗ ಬಿಎಂಆರ್‌ಸಿಎಲ್ (BMRCL) ಮತ್ತೊಂದು ಸಿಹಿ ಸುದ್ದಿ ನೀಡಿದ್ದು , ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಆರ್‌ಸಿಎಲ್ 1, 3 ಹಾಗೂ 5 ದಿನಗಳ ಅನ್ಲಿಮಿಟೆಡ್ ಕ್ಯೂಆರ್ ಕೋಡ್ ಪಾಸ್ ಸೇವೆ ಆರಂಭಿಸಿದೆ.

ಇದುವರೆಗೆ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ (ಸಿಎಸ್‌ಸಿ) ಮೂಲಕವೇ ಲಭ್ಯವಾಗುತ್ತಿದ್ದು, ₹50 ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯವಾಗಿತ್ತು. ಇದೀಗ ಮೊಬೈಲ್ ಕ್ಯೂಆರ್‌ ಕೋಡ್‌ ಪಾಸ್‌ಗಳ ಪರಿಚಯದೊಂದಿಗೆ, ಪಾಸ್‌ಗಳು ಮೊಬೈಲ್ ಫೋನ್‌ಗಳಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುತ್ತವೆ. ಪ್ರಯಾಣಿಕರಿಗೆ ಯಾವುದೇ ಭದ್ರತಾ ಠೇವಣಿ ಪಾವತಿಸುವ ಅಗತ್ಯವಿರುವುದಿಲ್ಲ.

ಪಾಸ್‌ಗಳನ್ನು ನಮ್ಮ ಮೆಟ್ರೋ ಅಧಿಕೃತ ಆಪ್ ಮೂಲಕ ಖರೀದಿಸಬಹುದು. ಇತರ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ. ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಪ್ರದರ್ಶಿಸಲಾದ ಕ್ಯೂಆರ್‌ ಕೋಡ್ ಅನ್ನು ಸ್ವಯಂಚಾಲಿತ ಸಂಗ್ರಹ (ಎಎಫ್‌ಸಿ) ಗೇಟ್‌ಗಳಲ್ಲಿ ಸ್ಕ್ಯಾನ್ ಮಾಡಿ ಪ್ರವೇಶ ಮತ್ತು ನಿರ್ಗಮನ ಪಡೆಯಬಹುದು.

ಮೆಟ್ರೋ ದಿನದ ಪಾಸ್ ದರಗಳು

1 ದಿನದ ಪಾಸ್ – 250

3 ದಿನದ ಪಾಸ್ – 550

5 ದಿನದ ಪಾಸ್ – 850

ಹರೀಶ್‌ ಕೇರ

View all posts by this author