ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್‌ ಪ್ರಾಯೋಗಿಕ ಸಂಚಾರ

ರೈಲಿನ ಸುರಕ್ಷತಾ ಮಾನದಂಡಗಳು, ಹಳಿಗಳ ಸ್ಥಿತಿಗತಿ, ಬ್ರೇಕಿಂಗ್ ಕ್ಷಮತೆ ಹಾಗೂ ವಿದ್ಯುತ್ ಎಳೆತದ ಪ್ರತಿಕ್ರಿಯೆಗಳನ್ನು ತಂಡವು ಸೂಕ್ಷ್ಮವಾಗಿ ಮೌಲ್ಯಮಾಪನ ಮಾಡುತ್ತಿದೆ. ಈ ಪ್ರಾಯೋಗಿಕ ಪರೀಕ್ಷೆ ಯಲ್ಲಿ ಸಂಗ್ರಹಿಸಲಾದ ತಾಂತ್ರಿಕ ದತ್ತಾಂಶಗಳನ್ನು ಆಧರಿಸಿ, ರೈಲ್ವೆ ಅಧಿಕಾರಿಗಳು ವಾಣಿಜ್ಯ ವೇಳಾ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.

ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್‌

-

Profile
Ashok Nayak Sep 6, 2026 4:55 PM

ಬೆಂಗಳೂರು: ಯಶವಂತಪುರ ಮತ್ತು ಮಂಗಳೂರು ಸೆಂಟ್ರಲ್ ನಡುವೆ ರೈಲಿನ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆ ಪರಿಶೀಲಿಸಲು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಆರಂಭವಾಗಿದೆ. ‌

ಬೆಳಗ್ಗೆ ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟ ಈ ಪ್ರಾಯೋಗಿಕ ರೈಲಿನ ಚಾಲನಾ ಸಮಯವನ್ನು ಅಂದಾಜಿಸಿ ವಿವಿಧ ವಿಭಾಗಗಳಲ್ಲಿನ ಗರಿಷ್ಠ ವೇಗವನ್ನು ಪರಿಶೀಲಿಸಲಾಗುತ್ತದೆ. ಈ ಪ್ರಾಯೋಗಿಕ ಸಂಚಾರದ ಸಂದರ್ಭದಲ್ಲಿ ಕಾರ್ಯಾಚರಣೆ, ರೋಲಿಂಗ್ ಸ್ಟಾಕ್ ಮತ್ತು ವಿದ್ಯುತ್ ವಿತರಣೆ ಎಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಸೇರಿದಂತೆ ಪ್ರಮುಖ ವಿಭಾಗಗಳ ಹಿರಿಯ ಅಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿ ರೈಲಿನಲ್ಲಿದ್ದು ಸಮಗ್ರ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bangalore News: ಕಾನೂನು ಬಾಹಿರವಾಗಿ ಮದರಸಾಗೆ ನೀಡಿರುವ ಐದು ಲಕ್ಷ ರೂ. ಅನುದಾನ ವಾಪಸ್ ಪಡೆಯುವಂತೆ ಎರಡನೇ ಬಾರಿಗೆ ಹೈ ಕೋರ್ಟ್ ಆದೇಶ

ರೈಲಿನ ಸುರಕ್ಷತಾ ಮಾನದಂಡಗಳು, ಹಳಿಗಳ ಸ್ಥಿತಿಗತಿ, ಬ್ರೇಕಿಂಗ್ ಕ್ಷಮತೆ ಹಾಗೂ ವಿದ್ಯುತ್ ಎಳೆತದ ಪ್ರತಿಕ್ರಿಯೆಗಳನ್ನು ತಂಡವು ಸೂಕ್ಷ್ಮವಾಗಿ ಮೌಲ್ಯಮಾಪನ ಮಾಡುತ್ತಿದೆ. ಈ ಪ್ರಾಯೋಗಿಕ ಪರೀಕ್ಷೆ ಯಲ್ಲಿ ಸಂಗ್ರಹಿಸಲಾದ ತಾಂತ್ರಿಕ ದತ್ತಾಂಶಗಳನ್ನು ಆಧರಿಸಿ, ರೈಲ್ವೆ ಅಧಿಕಾರಿಗಳು ವಾಣಿಜ್ಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.

ಆ.11 ರಿಂದ ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋ ಗಿಕ ಸಂಚಾರ ಆರಂಭವಾಗಿತ್ತು. ಘಾಟ್ ಪ್ರದೇಶದಲ್ಲಿ ಸಂಚರಿಸಲು ಅತ್ಯಗತ್ಯವಾದ ಆಟೋ ಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ವ್ಯವಸ್ಥೆ ಹೊಂದಿರುವ ರೇಕ್ ಲಭ್ಯವಿಲ್ಲದ ಕಾರಣ ಪ್ರಕ್ರಿಯೆ ತಡವಾಗಿತ್ತು. 350 ಕಿ.ಮೀ ದೂರದ ಮಾರ್ಗದಲ್ಲಿ ಪ್ರಯೋಗಿಕ ಪರೀಕ್ಷೆ ವೇಳೆ ಹಾಸನ ಜಂಕ್ಷನ್, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆಯಲ್ಲಿ ಮಾತ್ರ ರೈಲಿಗೆ ನಿಲುಗಡೆ ನೀಡಲಾಗಿದೆ.

AEB ತಂತ್ರಜ್ಞಾನ ಕಡ್ಡಾಯ ಏಕೆ?

ವಂದೇ ಭಾರತ್ ರೈಲು ಸಾಮಾನ್ಯವಾಗಿ ಅತ್ಯಾಧುನಿಕ ಎಲೆಕ್ಟ್ರೋ-ನ್ಯೂಮ್ಯಾಟಿಕ್ ಡಿಸ್ಕ್ ಬ್ರೇಕ್ ಹಾಗೂ egenerative Braking ವ್ಯವಸ್ಥೆಯನ್ನು ಹೊಂದಿರುತ್ತದೆ. ಆದರೆ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಘಾಟ್ ಮಾರ್ಗವು ಅತ್ಯಂತ ಕಡಿದಾದ ಇಳಿಜಾರು ಹೊಂದಿದೆ. ಈಗ ಈ ಮಾರ್ಗದಲ್ಲಿ ಚಲಿಸುವ ರೈಲುಗಳ ಸುರಕ್ಷತೆಗಾಗಿ ಬ್ಯಾಂಕರ್ ಇಂಜಿನ್‌ಗಳನ್ನು ಜೋಡಿಸಲಾಗುತ್ತದೆ.

ಇವುಗಳನ್ನು ಜೋಡಿಸಲು ಮತ್ತು ಕಳಚಲು ಸುಮಾರು 15 ನಿಮಿಷ ಬೇಕಾಗುತ್ತದೆ. ವಂದೇ ಭಾರತ್ ರೈಲಿಗೆ ಈ ರೀತಿ ಹೊರಗಿನಿಂದ ಬ್ಯಾಂಕರ್ ಎಂಜಿನ್ ಜೋಡಿಸಬೇಕಾದರೆ ರೈಲಿನ ಮುಂಭಾಗದ ಭಾಗವನ್ನು ಕಳಚಬೇಕಾಗುತ್ತದೆ. ಈ ಕಾರಣಕ್ಕೆ ರೈಲಿನ ಸ್ವಯಂ ಚಾಲಿತವಾಗಿ ಗರಿಷ್ಠ 30 ಕಿ.ಮೀ ವೇಗವನ್ನು ನಿಯಂತ್ರಿಸುವ ಆಟೋಮ್ಯಾಟಿಕ್ ಎಮ ರ್ಜೆನ್ಸಿ ಬ್ರೇಕಿಂಗ್ ವ್ಯವಸ್ಥೆ ಹೊಂದಿರುವ ವಿಶೇಷ ರೇಕ್‌ಗಾಗಿ ರೈಲ್ವೇ ಕಾಯುತ್ತಿತ್ತು. ಈಗ ಎಇಬಿ ವ್ಯವಸ್ಥೆ ಹೊಂದಿರುವ ರೇಕ್ ಬಂದಿರುವು ದರಿಂದ ಪ್ರಾಯೋಗಿಕ ಸಂಚಾರ ಯಶಸ್ವಿಯಾದ ತಕ್ಷಣವೇ ವಾಣಿಜ್ಯ ಸಂಚಾರಕ್ಕೆ ರೈಲ್ವೆ ಮಂಡಳಿ ಯಿಂದ ಅಧಿಕೃತ ಅನುಮೋದನೆ ಸಿಗಲಿದೆ.