ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ (PM Modi Birthday) ಅಂಗವಾಗಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ, ರಕ್ತದಾನ, ನೇತ್ರದಾನ, ಹಿರಿಯ ನಾಗರಿಕರು, ಪೌರ ಕಾರ್ಮಿಕರಿಗೆ ಸನ್ಮಾನ ಮತ್ತು 75 ದಿನ ಮಧ್ಯಾಹ್ನ ಬಿಸಿಯೂಟ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದೇ ವೇಳೆ ಬಿಜೆಪಿ ನಾಯಕರು, ಕಾರ್ಯಕರ್ತರು, ಕರುಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, 75 ಕೆಜಿ ಕೇಕ್ ಕತ್ತರಿಸಿ ತಮ್ಮ ನೆಚ್ಚಿನ ನಾಯಕನ ಜನ್ಮದಿನವನ್ನು ಆಚರಿಸಿದ್ದಾರೆ. ಈ ವೇಳೆ ಶಾಸಕ ಎಸ್.ಸುರೇಶ್ ಕುಮಾರ್, ಸಂಸದ ಪಿ.ಸಿ.ಮೋಹನ್, ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎಂ.ಮುನಿರಾಜು, ಶಕೀಲ ಮುನಿರಾಜು, ಮಂಡಲದ ಅಧ್ಯಕ್ಷ ಸುದರ್ಶನ್, ರಾಜಾಜಿನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಂಜಯ್ ಕುಮಾರ್ ಉಪಸ್ಥಿತರಿದ್ದರು.

ಈ ವೇಳೆ ಶಾಸಕರಾದ ಎಸ್.ಸುರೇಶ್ ಕುಮಾರ್ ಅವರು ಮಾತನಾಡಿ ಇಡಿ ದೇಶದಲ್ಲಿ ನರೇಂದ್ರ ಮೋದಿರವರ ಹುಟ್ಟುಹಬ್ಬವನ್ನು ಅಚರಿಸುತ್ತಿದ್ದಾರೆ. ನಮ್ಮ ದೇಶದಲ್ಲಿ ವಿಶಿಷ್ಟ ವೈದ್ಯರಿದ್ದಾರೆ, ಅವರು ಪೌರ ಕಾರ್ಮಿಕರು. ಅವರಿಂದ ನಮ್ಮ ರಾಜ್ಯದ ಜನರು ಆರೋಗ್ಯವಂತರಾಗಿದ್ದಾರೆ ಎಂದು ಹೇಳಿದರು.
ಮೋದಿ ಅವರು ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ವಿಶ್ವಾಸ ಮೂಡಿಸಿದ್ದಾರೆ, ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಜಿ.ಎಸ್.ಟಿ. ಕಡಿತ ಮಾಡಿ ಜನಸಾಮಾನ್ಯರಿಗೆ ಒಳ್ಳೆಯದು ಮಾಡಿದ್ದು, 80 ಕೋಟಿ ಜನರಿಗೆ ಆಹಾರ ಭದ್ರತೆ ನೀಡಿದ್ದಾರೆ. ಔಷಧಿಗಳ ಮೇಲಿನ ಬೆಲೆ ಬಡವರಿಗೆ ಕೈಗೆಟ್ಟುವಂತೆ ಮಾಡಿದ್ದಾರೆ ಎಂದು ಹೇಳಿದರು.

ಸಂಸದ ಪಿ.ಸಿ.ಮೋಹನ್ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ರಕ್ತದಾನ, ನೇತ್ರದಾನ ಮತ್ತು ವಿವಿಧ ಸಮಾಜಮುಖಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನಿ ನರೇಂದ್ರಮೋದಿ ಅವರು ತಿಳಿಸಿದಂತೆ ʼಜನಸೇವಕʼ ಎಂದರೆ ಜನಸೇವೆ ಮಾಡು ಎಂದರ್ಥ. ಪ್ರತಿದಿನ, ಪ್ರತಿಕ್ಷಣ ಜನರ ಸೇವೆ ಮಾಡಲು ಅವರು ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | PM Modi Birthday: ಪ್ರಧಾನಿ ಮೋದಿ ಬರ್ತ್‌ಡೇಗೆ ವಿಶ್ ಮಾಡಿದ ಸೂಪರ್‌ಸ್ಟಾರ್ ರಜನೀಕಾಂತ್; ಎಕ್ಸ್ ಪೋಸ್ಟ್‌ನಲ್ಲೇನಿದೆ?
ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ನರೇಂದ್ರ ಮೋದಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, ಮೋದಿ ಅವರ ಜೀವನ ಚರಿತ್ರೆ ಛಾಯಾಚಿತ್ರ ಪ್ರದರ್ಶನ, ಬೈಕ್ ಜಾಥಾ, 75 ದಿನ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಹಿರಿಯ ನಾಗರಿಕರು, ಪೌರ ಕಾರ್ಮಿಕರಿಗೆ ಸನ್ಮಾನ, ರಕ್ತದಾನ ಶಿಬಿರ, ನೇತ್ರದಾನ ಶಿಬಿರ, ಉಚಿತವಾಗಿ ಸಾರ್ವಜನಿಕರಿಗೆ 500 ನೀರಿನ ಕ್ಯಾನ್ ವಿತರಣೆ ಮಾಡಲಾಯಿತು.