ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Towing: ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ ಟೋಯಿಂಗ್‌, ಎಲ್ಲೆಂದರಲ್ಲಿ ಪಾರ್ಕ್‌ ಮಾಡೋರೇ ಎಚ್ಚರ!

ಕೆಲ ದಿನಗಳ ಹಿಂದಷ್ಟೆ ಡಿಸಿಎಂ ಡಿಕೆ ಶಿವಕುಮಾರ್ ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸೋ ಬಗ್ಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೆ ಅಲರ್ಟ್ ಆಗಿದ್ದ ಪೊಲೀಸ್ ಇಲಾಖೆ, ಟೋಯಿಂಗ್ ಮಾಡೋಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ತಲಾ ಎರಡು ವಾಹನಗಳಂತೆ ಹತ್ತು ಟೋಯಿಂಗ್ ವಾಹನಗಳನ್ನು ಸರ್ಕಾರದ ವತಿಯಿಂದ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ ಟೋಯಿಂಗ್‌, ವಾಹನ ಪಾರ್ಕ್‌ ವೇಳೆ ಎಚ್ಚರ!

ಟೋಯಿಂಗ್ -

ಹರೀಶ್‌ ಕೇರ
ಹರೀಶ್‌ ಕೇರ Mar 24, 2026 10:11 AM

ಬೆಂಗಳೂರು, ಮಾ.24: ಸಿಲಿಕಾನ್ ಸಿಟಿಯಲ್ಲಿ (Bengaluru) ಇಂದಿನಿಂದ ಮತ್ತೆ ವಾಹನಗಳ ಟೋಯಿಂಗ್ (Towing) ಆರಂಭವಾಗಲಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಯನ್ನು ಜಿಬಿಎ (GBA) ಮತ್ತು ಪೊಲೀಸ್ ಇಲಾಖೆ (police department) ಮಾಡಿಕೊಂಡಿದ್ದು, ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದೆ. ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ತಲಾ ಎರಡು ವಾಹನಗಳಂತೆ ಹತ್ತು ಟೋಯಿಂಗ್ ವಾಹನಗಳನ್ನು ಸರ್ಕಾರದ ವತಿಯಿಂದ ನೀಡಲಾಗಿದೆ.

ಸಾರ್ವಜನಿಕರ ತೀವ್ರ ಆಕ್ರೋಶ, ಟೋಯಿಂಗ್ ಸಿಬ್ಬಂದಿ ವರ್ತನೆಯಿಂದ ಬೇಸತ್ತು ಟೋಯಿಂಗ್ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು. ಟೋಯಿಂಗ್ ಇಲ್ಲದ ಕಾರಣ ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡೋದು, ಅಡ್ಡಾದಿಡ್ಡಿ ನಿಲ್ಲಿಸಿ ಹೋಗೋದು, ಹಳೆಯ ವಾಹನಗಳನ್ನು ಪಾರ್ಕ್ ಮಾಡಿ, ತಿಂಗಳಗಟ್ಟಲೇ ರಸ್ತೆಯಲ್ಲೇ ಬಿಡ್ತಿದ್ದ ಕಾರಣದಿಂದಾಗಿ ನಗರದಲ್ಲಿ ಇತ್ತೀಚಿಗೆ ಟ್ರಾಫಿಕ್ ಜಾಸ್ತಿಯಾಗಿದೆ.

ಇದರ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೆ ಡಿಸಿಎಂ ಡಿಕೆ ಶಿವಕುಮಾರ್ ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸೋ ಬಗ್ಗೆ ಹೇಳಿಕೆ ನೀಡಿದ್ರು. ಈ ಹೇಳಿಕೆ ಬೆನ್ನಲ್ಲೆ ಅಲರ್ಟ್ ಆಗಿದ್ದ ಪೊಲೀಸ್ ಇಲಾಖೆ, ಟೋಯಿಂಗ್ ಮಾಡೋಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ.

ಟೋಯಿಂಗ್ ಸಿಬ್ಬಂದಿಗೆ ತರಬೇತಿ ಅಗತ್ಯ

ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ತಲಾ ಎರಡು ವಾಹನಗಳಂತೆ ಹತ್ತು ಟೋಯಿಂಗ್ ವಾಹನಗಳನ್ನು ಸರ್ಕಾರದ ವತಿಯಿಂದ ನೀಡಿದ್ದು, ಅದರಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಸೇರಿ ಓರ್ವ ಕಾನ್‌ಸ್ಟೇಬಲ್ ಮತ್ತು ವಾಹನಗಳನ್ನು ಟೋ ಮಾಡಲು ಜಿಬಿಎಯಿಂದ ನಾಲ್ಕು ಸಿಬ್ಬಂದಿ ನೇಮಿಸಲಾಗಿದೆ.

ಟೋಯಿಂಗ್ ವಾಹನದ ಮುಂಭಾಗ ಮತ್ತು ಹಿಂಭಾಗದಲ್ಲಿ ಸಿಸಿಟಿವಿ ಅಳವಡಿಸಿದ್ದು, ಯಾವುದೇ ಅವಘಡ ಅಥವ ಗಲಾಟೆಗಳು ನಡೆದ್ರೆ ಅದನ್ನು ಸೆರೆಹಿಡಿಯಲಾಗುತ್ತದೆ. ಆ ಮೂಲಕ ಸಿಬ್ಬಂದಿಯ ವರ್ತನೆ ಮೇಲೆ ಹಿರಿಯ ಅಧಿಕಾರಿಗಳು ಕಣ್ಣೀಡಲಿದ್ದಾರೆ. ಮುಖ್ಯವಾಗಿ ಅತಿ ಹೆಚ್ಚು ಟ್ರಾಫಿಕ್ ಆಗುವ ರಸ್ತೆಗಳು, ನೋ ಪಾರ್ಕಿಂಗ್ ಜಾಗಗಳಲ್ಲಿ ಟೋಯಿಂಗ್ ಮಾಡಲು ನಿರ್ಧರಿಸಲಾಗಿದೆ.

ಬೆಂಗಳೂರಿನ ಮಾಲ್‌ನಲ್ಲಿ ಗರ್ಭಿಣಿಯರಿಗೆ 'ಪಿಂಕ್ ಪಾರ್ಕಿಂಗ್'' ಸೌಲಭ್ಯ; ಸಾರ್ವಜನಿಕರಿಂದ ಭಾರೀ ಮೆಚ್ಚುಗೆ