ಬೆಂಗಳೂರು: ಕರ್ನಾಟಕ ಪೊಲೀಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ (DGP Ramachandra Rao) ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಡಿಜಿಪಿ ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಅವರ ಮಲ ತಂದೆಯಾಗಿದ್ದಾರೆ. ಪುತ್ರಿಯ ಕೇಸ್‌ನಲ್ಲಿ ಇವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಬೆಳಕಿಗೆ ಬಂದಿವೆ.
ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್ ಆಗಿದೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಈಗ ಹೊರಬಂದಿವೆ.
ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ!
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ತಂದಿದೆ. ಈ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿವೆ.
ಈ ಹಿಂದೆ ಚಿನ್ನ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಪುತ್ರಿ ರನ್ಯ ರಾವ್‌ಗೆ ಶಿಷ್ಟಾಚಾರ ಉಲ್ಲಂಘಿಸಿ ವಿಮಾನ ನಿಲ್ದಾಣದಲ್ಲಿ ವಿಐಪಿ ಟ್ರೀಟ್‌ಮೆಂಟ್ ನೀಡಿದ್ದಕ್ಕೆ ಈ ಪೊಲೀಸ್ ಅಧಿಕಾರಿಗೆ ಸಂಕಷ್ಟ ಎದುರಾಗಿತ್ತು. ಈ ಬಗ್ಗೆ ತನಿಖೆ ನಡೆದು, ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ರಾಮಚಂದ್ರರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿಯಾಗಿ ನಿಯೋಜಿಸಲಾಗಿತ್ತು.