ಬೆಂಗಳೂರು, ಮೇ 21: ʼವಿಶ್ವವಾಣಿʼ ದಿನಪತ್ರಿಕೆಯಲ್ಲಿ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಹಿರಿಯ ಗ್ರಾಫಿಕ್ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಿ.ಎಲ್. ರಂಗನಾಥ್ (48) (GL Ranganath) ಗುರುವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನವರಾದ ರಂಗನಾಥ್ ಏಳೆಂಟು ವರ್ಷಗಳಿಂದ ʼವಿಶ್ವವಾಣಿʼ ದಿನಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ʼವಿಜಯವಾಣಿʼ ಸೇರಿದಂತೆ ವಿವಿಧ ದಿನಪತ್ರಿಕೆ, ನಿಯತಕಾಲಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
48 ವರ್ಷದ ರಂಗನಾಥ್ ಅವರಿಗೆ ಕೆಲ ತಿಂಗಳ ಹಿಂದೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡರೂ, ಅಲ್ಪಕಾಲಿಕ ಅನಾರೋಗ್ಯದಿಂದ ಗುರುವಾರ ಮುಂಜಾನೆ ಕೊನೆಯುಸಿರು ಎಳೆದಿದ್ದಾರೆ.
ಗುರುವಾರ ಮಧ್ಯಾಹ್ನ ಪೀಣ್ಯದ ಎಸ್‌ಆರ್‌ಎಸ್ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಿವೆ. ಮೃತರು ಇಬ್ಬರು ಸಹೋದರರು, ಸಹೋದರಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ರಂಗನಾಥ್ ಅವರ ಅಂತಿಮ ದರ್ಶನವನ್ನು ʼವಿಶ್ವವಾಣಿʼ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಸೇರಿ ಸಂಸ್ಥೆಯ ಸಿಬ್ಬಂದಿ ಪಡೆದು, ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಕನ್ನಡದ ಖ್ಯಾತ ಸಿನಿಮಾ, ಧಾರಾವಾಹಿ ಸಂಭಾಷಣೆಗಾರ ಟಿ.ಜಿ. ನಂದೀಶ್ ಹೃದಯಾಘಾತದಿಂದ ನಿಧನ