ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪ್ರಕಾಶ್‌ ರೈ ಬಂಧನಕ್ಕೆ ವಾರೆಂಟ್

ಕಳೆದ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ವಕೀಲರಾದ ದಿಲೀಪ್ ಕುಮಾರ್ ಎಂಬುವರು ಪ್ರಕಾಶ್ ರೈ ಅವರು ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಪುದುಚೇರಿಯಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ.

ಕರ್ನಾಟಕ ಸೇರಿ ‌4 ರಾಜ್ಯಗಳಲ್ಲಿ ಮತದಾರ ಚೀಟಿ ಹೊಂದಿದ ಆರೋಪದಡಿ ದೂರು

ಬೆಂಗಳೂರು: ನಾಲ್ಕು ರಾಜ್ಯಗಳಲ್ಲಿ ಕಾನೂನುಬಾಹಿರವಾಗಿ ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪದ ಮೇಲೆ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ನ್ಯಾಯಾಲಯ ನೀಡಿದ್ದ ಸಮನ್ಸ್ ಗೆ ಸತತ ಗೈರುಹಾಜರಾಗಿ, ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಬೆಂಗಳೂರಿನ 48ನೇ ಎಸಿಜೆಎಂ ನ್ಯಾಯಾಲಯವು ಜಾಮೀನುರಹಿತ ಬಂಧನ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು?: ಕಳೆದ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ವಕೀಲರಾದ ದಿಲೀಪ್ ಕುಮಾರ್ ಎಂಬುವರು ಪ್ರಕಾಶ್ ರೈ ಅವರು ಕರ್ನಾಟಕ, ತಮಿಳು ನಾಡು, ತೆಲಂಗಾಣ ಮತ್ತು ಪುದುಚೇರಿಯಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ. ಇದು ಜನಪ್ರತಿನಿಧಿ ಕಾಯಿದೆ ಹಾಗೂ ದೇಶದ ಚುನಾವಣಾ ನಿಯಮಾವಳಿಗಳ ಅನ್ವಯ ಗಂಭೀರ ಅಪರಾಧ ಎಂದು ಆರೋಪಿಸಿದ್ದರು.

ಇದನ್ನೂ ಓದಿ: Actor Prakash raj: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ನನಗೆ ಫೋನ್‌ ಮಾಡಿದ್ದು ನಿಜ: ಧರ್ಮಸ್ಥಳ ಕೇಸ್‌ ಬಗ್ಗೆ ನಟ ಪ್ರಕಾಶ್‌ ರಾಜ್‌ ಸ್ಪಷ್ಟನೆ

ಕೋರ್ಟ್ ಮೆಟ್ಟಿಲೇರಿದ್ದ ವಕೀಲ: ವಕೀಲ ದಿಲೀಪ್ ಕುಮಾರ್ ಅವರು 2019ರಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದಾಗ, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ, ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಿದ್ದರು. ಯಾವುದೇ ಇಲಾಖೆ ಕಾನೂನು ಕ್ರಮ ಜರುಗಿಸದ ಹಿನ್ನೆಲೆ ಯಲ್ಲಿ ಅಂತಿಮವಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿ ಖಾಸಗಿ ದೂರು ದಾಖಲಿಸಿದ್ದರು

ಕೋರ್ಟ್‌ಗೆ ಗೈರು

ನ್ಯಾಯಾಲಯ ನೀಡಿದ ಎರಡು ಸಮನ್ಸ್ ಗಳಿಗೂ ಬೆಲೆ ಕೊಡದ ಪ್ರಕಾಶ್ ರೈ, ವಿಚಾರಣೆಗೆ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.