ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉಗಾಂಡಾದಿಂದ ಬೆಂಗಳೂರಿಗೆ ಹಿಂತಿರುಗಿದ 28 ವರ್ಷದ ಮಹಿಳೆಯಲ್ಲಿ ಎಬೋಲಾ ವೈರಸ್ ಪತ್ತೆ? ಆಸ್ಪತ್ರೆಯಲ್ಲಿ ಚಿಕಿತ್ಸೆ

Ebola virus detected: ಉಗಾಂಡಾದಿಂದ ಪ್ರಯಾಣಿಸಿದ್ದ ಮಹಿಳೆಯನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನಿಗಾದಲ್ಲಿಟ್ಟು ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 28 ವರ್ಷದ ಮಹಿಳೆಗೆ ಸೌಮ್ಯವಾದ ದೇಹದ ನೋವು ಇದ್ದರೂ ಎಬೋಲಾ ವೈರಸ್‍ನ ಯಾವುದೇ ತೀವ್ರ ಲಕ್ಷಣಗಳು ಕಂಡುಬಂದಿಲ್ಲ. ಅವರ ಆರೋಗ್ಯ ಪರಿಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಉಗಾಂಡಾದಿಂದ ಹಿಂತಿರುಗಿದ ಮಹಿಳೆಯಲ್ಲಿ ಪತ್ತೆಯಾಯ್ತಾ ಎಬೋಲಾ ವೈರಸ್?

ಸಾಂದರ್ಭಿಕ ಚಿತ್ರ -

Priyanka P
Priyanka P May 27, 2026 11:15 AM

ಬೆಂಗಳೂರು, ಮೇ 27: ಆಫ್ರಿಕಾದ ಕೆಲವು ಭಾಗಗಳಲ್ಲಿ ಎಬೋಲಾ ಸೋಂಕು (Ebola virus) ಹರಡುವಿಕೆ ಕುರಿತು ಆತಂಕಗಳು ಹೆಚ್ಚುತ್ತಿರುವ ನಡುವೆಯೇ, ಉಗಾಂಡಾದಿಂದ (Uganda) ಪ್ರಯಾಣಿಸಿದ್ದ ಮಹಿಳೆಯನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನಿಗಾದಲ್ಲಿಟ್ಟು ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಹಮದಾಬಾದ್ ಮೂಲಕ ಆಗಮಿಸಿ ಮಂಗಳವಾರ (ಮೇ 26) ಆಸ್ಪತ್ರೆಗೆ ದಾಖಲಾಗಿದ್ದ 28 ವರ್ಷದ ಮಹಿಳೆಗೆ ಸೌಮ್ಯವಾದ ದೇಹದ ನೋವು ಇದ್ದರೂ ಯಾವುದೇ ತೀವ್ರ ಲಕ್ಷಣಗಳು ಕಂಡುಬಂದಿಲ್ಲ. ಅವರ ಆರೋಗ್ಯ ಪರಿಸ್ಥಿತಿ ಪ್ರಸ್ತುತ ಸ್ಥಿರವಾಗಿದೆ.

ಎಬೋಲಾ ಪೀಡಿತ ಪ್ರದೇಶದಿಂದ ಆಗಮಿಸಿದ್ದ ಮಹಿಳೆಯನ್ನು ಹೋಟೆಲ್‌ನಿಂದ ಮೊದಲೇ ನಿಗದಿಪಡಿಸಿದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಕೆಯನ್ನು ಪರೀಕ್ಷಿಸಿ ಮಾದರಿಯನ್ನು ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (NIV) ಕಳುಹಿಸಲಾಗಿತ್ತು. ಪರೀಕ್ಷಾ ವರದಿಯು ಎಬೋಲಾ ವೈರಸ್ ಇರುವಿಕೆಯನ್ನು ದೃಢಪಡಿಸಿಲ್ಲ. ಮಹಿಳೆಯ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ.

ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣ ದೃಢಪಟ್ಟಿಲ್ಲ

ಭಾರತದಲ್ಲಿ ಇದುವರೆಗೆ ಯಾವುದೇ ಎಬೋಲಾ ವೈರಸ್ ಕಾಯಿಲೆ ದೃಢಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ. ಆಫ್ರಿಕಾದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಎಬೋಲಾ ವೈರಸ್ ಉಲ್ಬಣಗೊಳ್ಳುತ್ತಿರುವುದು ಜಾಗತಿಕ ಮಟ್ಟದಲ್ಲಿ ಕಳವಳ ಮೂಡಿದೆ. ಎಬೋಲಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Ebola outbreak: ಎಬೋಲಾ ವೈರಸ್‌ ಆತಂಕ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್‌; ಮಾರ್ಗಸೂಚಿ ಪ್ರಕಟ

ಈ ಸೋಂಕು ಹರಡುವಿಕೆಯು ಬುಂಡಿಬುಗ್ಯೋ ಎಂಬ ವೈರಸ್ ತಳಿಯಾಗಿದೆ. ಎಬೋಲಾ ಒಂದು ಗಂಭೀರ ಹಾಗೂ ಮಾರಣಾಂತಿಕ ರೋಗವಾಗಿದ್ದು, ಸೋಂಕಿತ ವ್ಯಕ್ತಿಯ ದೇಹದ ದ್ರವಗಳ ನೇರ ಸಂಪರ್ಕದ ಮೂಲಕ ಬಹಳ ವೇಗವಾಗಿ ಹರಡುತ್ತದೆ. ಈ ವೈರಸ್ ಇದುವರೆಗಿನ ಮೂರನೇ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದ್ದು, ಈ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವ ಅಗತ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳಿದೆ.

ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ಉಗಾಂಡಾದಲ್ಲಿ ವೇಗವಾಗಿ ಹರಡುತ್ತಿರುವ ಎಬೋಲಾ ಸೋಂಕು ನಿಯಂತ್ರಣ ಕ್ರಮಗಳನ್ನು ಮೀರಿಸುತ್ತಿದ್ದು, ಶಂಕಿತ ಸಾವುಗಳ ಸಂಖ್ಯೆ 220ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.

ಈ ಮೂರು ಆಫ್ರಿಕನ್ ರಾಷ್ಟ್ರಗಳಿಗೆ ಅನಗತ್ಯ ಪ್ರಯಾಣಿಸದಂತೆ ಭಾರತ ಸರ್ಕಾರ ಸಲಹೆ

ಎಬೋಲಾ ವೈರಸ್‌ ವ್ಯಾಪಕವಾಗಿ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸೂಡಾನ್ ಸೇರಿದಂತೆ ಕೆಲವು ದೇಶಗಳಿಗೆ ಅಗತ್ಯವಿಲ್ಲದ ಯಾವುದೇ ಪ್ರಯಾಣ ಕೈಗೊಳ್ಳಬೇಡಿ ಎಂದು ಭಾರತ ಸರ್ಕಾರ ಈಗಾಗಲೇ ಸಲಹೆ ನೀಡಿತ್ತು. ಇದರ ಜೊತೆಗೆ, ಈ ಮೂರು ದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸ್ಥಳೀಯ ಆಡಳಿತ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಮೇ 22ರಂದು ಹೊರಡಿಸಿದ ಹೊಸ ನಿರ್ದೇಶನಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ತಪಾಸಣಾ ಕೇಂದ್ರಗಳಲ್ಲಿ ರೋಗ ಮೇಲ್ವಿಚಾರಣೆಯನ್ನು ಹೆಚ್ಚಿಸಬೇಕೆಂದು ಸೂಚಿಸಲಾಗಿದೆ. ಸೋಂಕು ಬೇರೆ ದೇಶಗಳಿಗೆ ಹರಡದಂತೆ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ತಿಳಿಸಿದೆ.