ಡೀಲ್ ಮಾಡ್ಕೊಂಡರೆ ಜೋಕೆ, ಪೊಲೀಸರಿಗೆ ಡಿಕೆ ಎಚ್ಚರಿಕೆ
ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿ ಯಾಗಿ ಬದುಕಲು ಸಾಧ್ಯವಾಗುತ್ತಿದೆ. ಸಾಧನೆ ಸಾಮರ್ಥ್ಯಕ್ಕಿಂತ ನಿಮ್ಮ ಗುರಿ ನಿರ್ಧಾರ ಮಾಡಿದಾಗ ಜಯ ನಿಮ್ಮದಾಗಲಿದೆ ಎಂದರು. ನಮ್ಮ ಪೊಲೀಸ್ ಇಲಾಖೆಗೆ ದೇಶದ ದಕ್ಷ ಇಲಾಖೆ ಎಂದು ಹೆಸರು ಪಡೆದಿದೆ. ಪೊಲೀಸ್ ಸಿಬ್ಬಂದಿಗಳ ಪರಿಶ್ರಮ, ನಿಷ್ಠೆ, ಕಾರ್ಯಕ್ಷಮತೆಯಿಂದ ಈ ಹೆಸರು ಬಂದಿದೆ.
-
ಅಪರಾಧ ಪ್ರಕರಣದಲಿ ಶಾಮೀಲಾದರೆ ಕಠಿಣ ಕ್ರಮ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಪರಾಧಿಗ ಳೊಂದಿಗೆ ಪೊಲೀಸರು ಶಾಮೀಲಾಗಿರುವ ಪ್ರಕರ ಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ, ಡೀಲ್ ಮಾಡ್ಕೊಂಡ್ರೆ ನೆಟ್ಟರಿಗಲ್ಲ ಎನ್ನುವ ಖಡಕ್ ಎಚ್ಚರಿಕೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶನಿವಾರ ನಡೆದ 32 ಅತ್ಯಾಧುನಿಕ ಮೊಬೈಲ್ ಫಾರೆನ್ಸಿಕ್ ವ್ಯಾನ್ ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಈ ಎಚ್ಚರಿಕೆ ನೀಡಿರುವ ಅವರು, ಅಪರಾಧ ಪ್ರಕರಣದಲ್ಲಿ ಶಾಮೀಲಾದರೆ ಕಠಿಣ ಕ್ರಮದ ಎಚ್ಚರಿಕೆಯ ಜತೆಜತೆಗೆ ಲಂಚ ಕೊಟ್ಟು ಯಾರೂ ಸೇವೆಗೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್‌ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ.
ಇದನ್ನೂ ಓದಿ: CM DK Shivakumar: ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ. ಶಿವಕುಮಾರ್
ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿ ಯಾಗಿ ಬದುಕಲು ಸಾಧ್ಯವಾಗುತ್ತಿದೆ. ಸಾಧನೆ ಸಾಮರ್ಥ್ಯಕ್ಕಿಂತ ನಿಮ್ಮ ಗುರಿ ನಿರ್ಧಾರ ಮಾಡಿದಾಗ ಜಯ ನಿಮ್ಮದಾಗಲಿದೆ ಎಂದರು. ನಮ್ಮ ಪೊಲೀಸ್ ಇಲಾಖೆಗೆ ದೇಶದ ದಕ್ಷ ಇಲಾಖೆ ಎಂದು ಹೆಸರು ಪಡೆದಿದೆ. ಪೊಲೀಸ್ ಸಿಬ್ಬಂದಿಗಳ ಪರಿಶ್ರಮ, ನಿಷ್ಠೆ, ಕಾರ್ಯಕ್ಷಮತೆಯಿಂದ ಈ ಹೆಸರು ಬಂದಿದೆ. ಹಗಲು ರಾತ್ರಿ ನಿಮ್ಮ ಸೇವೆಗೆ ಸರಕಾರ ನಿಮ್ಮ ಪರವಾಗಿ ನಿಲ್ಲಲಿದೆ. ಕೆಲವು ಸಂದರ್ಭದಲ್ಲಿ ಅನಾಹುತಗಳು ಆಗುತ್ತವೆ. ಅಂತಹ ಪರಿಸ್ಥಿತಿಯಲ್ಲೂ ನಾನು ಹಾಗೂ ನಮ್ಮ ಸರಕಾರ ನಿಮ್ಮ ಆತ್ಮಸ್ಥೈ ರ್ಯ ಕುಸಿಯದಂತೆ ನೋಡಿಕೊಳ್ಳಲಾಗಿದೆ
ಕಾನೂನು ಕಾಯುತ್ತೀರಿ, ಸಮಾಜದ ಹಿತ ಕಾಪಾಡುತ್ತೀರಿ. ಅಪರಾಧಗಳಲ್ಲಿ ವಿವಿಧ ರೂಪಗಳಿವೆ. ತಂತ್ರಜ್ಞಾನ, ಎಐ ಬಂದ ಬಳಿಕ ಅಪರಾಧ ಪತ್ತೆಹಚ್ಚಲು ಅನೇಕ ಕ್ರಮ ಕೈಗೊಳ್ಳಲಾಗಿದೆ. ಗೂಂಡಾಗಿರಿ ತಡೆಗಟ್ಟಲು, ಎಲ್ಲಾ ಠಾಣೆಗಳಲ್ಲಿ ಪಡೆ ರಚಿಸಲು ನಿರ್ದೇಶನ ನೀಡಿದ್ದೇನೆ ಎಂದರು.
ಲಂಚ ಕೊಟ್ಟು ಇಲಾಖೆ ಸೇರುವಂತಿಲ್ಲ: ಪ್ರಿಯಾಂಕ್ ಖರ್ಗೆ ಅವರು ಈ ಇಲಾಖೆ ಬಗ್ಗೆ ಬಹಳ ಆಸಕ್ತಿ ಹೊಂದಿದ್ದರು. ಕಳೆದ ಸರಕಾರದ ಅವಧಿಯಲ್ಲಿ ಪಿಎಸ್‌ಐ ಹಗರಣವನ್ನು ತಮ್ಮದೇ ಆದ ರೀತಿ ತನಿಖೆ ಮಾಡಿ ಸರಕಾರ ಹಾಗೂ ಜನರ ಗಮನ ಸೆಳೆದಿದ್ದರು. ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು. ಯಾರೊಬ್ಬರೂ ಲಂಚ ಕೊಟ್ಟು ಕೆಲಸಕ್ಕೆ ಸೇರಬಾರದು. ಅರ್ಹತೆಯೇ ಹುದ್ದೆಯ ನೇಮಕಾತಿಗೆ ಮುಖ್ಯ ಮಾನದಂಡ ಎಂಬ ಅಡಿಪಾಯ ಹಾಕಿದ್ದಾರೆ. ಸರಕಾರ ನಿಮ್ಮೊಂದಿಗೆ ಇರುತ್ತದೆ. ನೀವು ನಿಮ್ಮ ಕರ್ತವ್ಯನ್ನು ಸರಿಯಾಗಿ ನಿಭಾಯಿಸಿ ಎಂದು ಸಲಹೆ ನೀಡಿದರು.
ಡ್ರಗ್ಸ್ ಕಾರ್ಯಾಚರಣೆ ತಂಡಕ್ಕೆ 10 ಲಕ್ಷ ನಮ್ಮ ಪೊಲೀಸರು ಒಂದು ವರ್ಷದಲ್ಲಿ 375 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು 1500 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದು, ಇದು ದೊಡ್ಡ ದಾಖಲೆ. ಇಡೀ ದೇಶ ಕರ್ನಾಟಕವನ್ನು ಗಮನಿಸುತ್ತಿದೆ. ಡ್ರಗ್ಸ್ ಜಾಲವನ್ನು ಬೇಧಿಸಿದ ತಂಡಕ್ಕೆ ಸರಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಿದೆ. ಇತ್ತೀಚೆಗೆ ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ನನ್ನನ್ನು ಭೇಟಿ ಮಾಡಿ ಕರ್ನಾಟಕ ಮತ್ತು ಕೇರಳ ನಡುವಣ ಮಾದಕ ದ್ರವ್ಯ ದಂಧೆ ಮಟ್ಟ ಹಾಕಲು ನೆರವು ಕೇಳಿದ್ದಾರೆ. ಈ ವಿಚಾರದಲ್ಲಿ ರಾಜ್ಯದ ನೆರವಿನ ಭರವಸೆ ನೀಡಿದ್ದೇನೆ ಎಂದು ತಿಳಿಸಿದರು.