ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತಮಿಳುನಾಡಿಗೆ ನೀರು ಬಿಡಲ್ಲ

ತಮಿಳುನಾಡಿಗೆ ನೀರು ಹರಿಸಬೇಕು ಎನ್ನುವ ಆದೇಶದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ, ಸ್ಥಿತಿಗತಿ ಅವಲೋಕಿಸಿದ್ದಾರೆ.

ಪ್ರಾಧಿಕಾರಕ್ಕೆ ರಾಜ್ಯಸರಕಾರ ಮೇಲ್ಮನವಿ: ಇಂದು ಸಭೆ ದೆಹಲಿಯಲ್ಲಿ ನೀರಾವರಿ ತಜ್ಞರ ಜತೆ ಡಿಕೆಶಿ ಮಾತುಕತೆ

ಬೆಂಗಳೂರು: ತಮಿಳುನಾಡಿಗೆ ನಿತ್ಯ 3500 ಕ್ಯುಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಸಮಿತಿ ನೀಡಿರುವ ಆದೇಶವನ್ನು ಪಾಲಿಸಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಸರಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತುರ್ತು ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಗುರುವಾರ ನಡೆಯಲಿದೆ.

ತಮಿಳುನಾಡಿಗೆ ನೀರು ಹರಿಸಬೇಕು ಎನ್ನುವ ಆದೇಶದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ, ಸ್ಥಿತಿಗತಿ ಅವಲೋಕಿಸಿದ್ದಾರೆ.

ಈ ಹಂತದಲ್ಲಿ ಯಾವುದೇ ಕಾರಣಕ್ಕೂ ನೀರು ಹರಿಸುವುದಿಲ್ಲ ಎನ್ನುವ ಮಾತುಗಳನ್ನು ಸರಕಾರ ಹೇಳುತ್ತಿದ್ದರೂ, ಮಂಡಳಿ ಹಾಗೂ ಸುಪ್ರೀಂ ಕೋರ್ಟ್ ಅಂಗಣಕ್ಕೆ ಹೋದರೆ ಏನು ಮಾಡಲಿದೆ ಎನ್ನುವ ಪ್ರಶ್ನೆ ಹಲವರಲ್ಲಿದೆ. ಈ ನಡುವೆ ಗುರುವಾರ ಬೆಳಗ್ಗೆ ಕಾವೇರಿ ನೀರು ನಿಯಂತ್ರಣ ಮಂಡಳಿಯ ತುರ್ತು ಸಭೆ ಕರೆಯಲಾಗಿದ್ದು, ತಮಿಳುನಾಡು ಸರಕಾರದ ಪ್ರತಿನಿಧಿಗಳು ವಿಡಿಯೋ ಕಾನರೆನ್ಸ್ ಮೂಲಕ ಭಾಗವಹಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Cauvery Water Dispute: ಕಾವೇರಿ ಭಾಗದ ಪರಿಸ್ಥಿತಿ ವೀಕ್ಷಿಸಲು ತಮಿಳುನಾಡು ಸಿಎಂ ವಿಜಯ್‌ಗೆ ಮನವಿ ಮಾಡಿದ್ದೇವೆ: ಡಿ.ಕೆ. ಶಿವಕುಮಾರ್

ಇನ್ನು ದೆಹಲಿಯಲ್ಲಿಯೇ ಇರುವ ಡಿ.ಕೆ.ಶಿವಕುಮಾರ್ ಗುರುವಾರದ ಸಭೆಯಲ್ಲಿ ನೀಡಿರುವ ತೀರ್ಮಾನ ನೋಡಿಕೊಂಡು, ಮುಂದಿನ ತೀರ್ಮಾನ ಕೈಗೊಳ್ಳಲು ಹಾಗೂ ಪ್ರತಿಪಕ್ಷ ನಾಯಕ ರೊಂದಿಗೆ ಚರ್ಚಿಸಿ ಮುಂದಿನ ಹೆಜ್ಜೆ ಇಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಅಧಿಕಾರಿ ಗಳೊಂದಿಗೆ ಸಭೆ ನಡೆಸಿದ ಬಳಿಕ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದಲ್ಲಿ ಬರಗಾಲವಿದೆ.

ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳಲ್ಲಿ ಕಳೆದ 30 ವರ್ಷಗಳಲ್ಲಿ 65.86ರಷ್ಟು ನೀರಿನ ಒಳಹರಿವು ಕಡಿಮೆಯಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 10 ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಕುಡಿಯುವ ನೀರಿನ ಅಭಾವ ತಲೆದೂರಿದೆ. ಸದ್ಯ ಡೆಡ್ ಸ್ಟೋರೇಜ್ ಹೊರತು ಪಡಿಸಿದರೆ 46 ಟಿಎಂಸಿ ನೀರಿದೆ.

ಪ್ರತಿ ತಿಂಗಳು ಕುಡಿಯುವ ನೀರಿಗಾಗಿ 3.5 ಟಿಎಂಸಿ ಅಗತ್ಯವಿದೆ. ಅಲ್ಲದೇ ನದಿಪಾತ್ರದಲ್ಲಿ ನೀರು ಬಿಡಬೇಕಾಗುತ್ತದೆ. ಹೀಗಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಪಾಲನೆ ಮಾಡುವುದು ಕಷ್ಟವಾಗಲಿದೆ. ಈ ನಿಟ್ಟಿನಲ್ಲಿ ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸದ್ಯ ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ 36 ಹಾಗೂ ಭವಾನಿ ಜಲಾಶಯದಲ್ಲಿ ಐದು ಟಿಎಂಸಿ ಸೇರಿದಂತೆ ಒಟ್ಟು 41 ಟಿಎಂಸಿ ನೀರಿದೆ. ಒಂದು ಟಿಎಂಸಿ ನೀರು 40 ದಿನಗಳವರೆಗೆ ಪೂರೈಸ ಬಹುದಾಗಿದೆ. ಅಲ್ಲದೇ ತಮಿಳುನಾಡಿಗೆ ಈಶಾನ್ಯ ಮುಂಗಾರಿನಿಂದ ಮಳೆಯಾಗಲಿದೆ. ಆದರೆ, ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆಯಾಗುವುದಿಲ್ಲ. ಹೀಗಾಗಿ ಸಮಿತಿ ಆದೇಶವು ಅಪಕ್ವ ವಾಗಿದೆ. ಈ ಅಂಶಗಳ ಹಿನ್ನೆಲೆಯಲ್ಲಿ ತಾಂತ್ರಿಕ ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು

ನೀರು ಬಿಡದಂತೆ ಒತ್ತಾಯಿಸಿ ಪ್ರತಿಭಟನೆ ಕಾವೇರಿ ನೀರು ಬಿಡುಗಡೆ ನಿರ್ಧಾರವನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಬೀದಿಗಿಳಿದಿದ್ದು, ಮಂಡ್ಯ, ಮೈಸೂರಿನ ಕಾವೇರಿ ಕೊಳ್ಳದ ಪ್ರದೇಶಗಳು ಸೇರಿದಂತೆ ರಾಜ್ಯದೆಡೆ ಪ್ರತಿಭಟನೆ ಕಾವು ಪಡೆದುಕೊಂಡಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿ ಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಹಾಗೂ ಸರಕಾರದ ವಿರುದ್ಧ ಘೋಷಣೆ ಕೂಗಿದ್ದು, ನೀರು ಬಿಟ್ಟರೆ ರಾಜ್ಯಾದ್ಯಂತ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

31ಕ್ಕೆ ಬಿಜೆಪಿ ಪ್ರತಿಭಟನೆ

ಈ ನಡುವೆ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಜುಲೈ 31 ರಂದು ಮಂಡ್ಯದಲ್ಲಿ ಬಿಜೆಪಿ ವತಿ ಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕಾವೇರಿ ಕೊಳ್ಳದ ರೈತರ ಹಿತ ಕಾಪಾಡಲು ರಾಜ್ಯ ಬಿಜೆಪಿಯು ಪ್ರತಿಭಟನೆಯನ್ನು ನಡೆಸಲಿದ್ದು, ಇದಕ್ಕೆ ರೈತರ ಬೆಂಬಲ ಬೇಕು ಎಂದಿದ್ದಾರೆ.

image

ದೇಶದ ಬಗ್ಗೆ ಸಭೆ ಮಾಡಿದ್ದೇವೆ. ಈ ಬಾರಿ ವರುಣ ಕೃಪೆ ತೋರಿಲ್ಲ. ಈ ಹಿಂದೆ ಸಮಿತಿಯು ಕಾವೇರಿ ನೀರು ಹರಿಸಬೇಕು ಎಂಬ ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು. ಈ ಬಾರಿ ನೀರು ಹರಿಸಲು ಸೂಚಿಸಿದೆ. ಪ್ರತಿಪಕ್ಷದ ನಾಯಕರ ಜತೆಯೂ ಈ ಬಗ್ಗೆ ಚರ್ಚಿಸಿ ತೀರ್ಮಾನಿಸು ತ್ತೇವೆ.

-ಡಿ.ಕೆ.ಶಿವಕುಮಾರ್, ಸಿಎಂ
image

ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳಲ್ಲಿ ಕಳೆದ 30 ವರ್ಷಗಳಲ್ಲಿ 65.86 ರಷ್ಟು ನೀರಿನ ಒಳಹರಿವು ಕಡಿಮೆ ಯಾಗಿದೆ. ಆದ್ದರಿಂದ ಆದೇಶ ಪಾಲನೆ ಮಾಡುವುದು ಕಷ್ಟ. ಈ ಬಗ್ಗೆ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾ ಗುವುದು. ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದರೂ ಬಿಜೆಪಿ ಪ್ರತಿಭಟನೆ ಮಾಡುವುದೇಕೆ? ಈ ಹೋರಾಟದಲ್ಲಿ ಅರ್ಥವಿಲ್ಲ.

-ರಾಮಲಿಂಗಾರೆಡ್ಡಿ, ಜಲಸಂಪನ್ಮೂಲ ಸಚಿವ