Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್ ಅಲರ್ಟ್!
Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ನಾಳೆ (ಮೇ 24) ವರುಣ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಗದಗ, ಕೊಪ್ಪಳ ಜಿಲ್ಲೆಗೆ ಹವಾಮಾನ ಇಲಾಖೆಯು (Karnataka Weather) ಆರೆಂಜ್ ಅಲರ್ಟ್ ನೀಡಿದೆ. ಅದೇ ರೀತಿ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಭಾನುವಾರದಂದು ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳು, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಹವಾಮಾನ ವರದಿ:
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 22° C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಪಮಾನ ಪರಿಸ್ಥಿತಿ:
ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ.
ಮೀನುಗಾರರಿಗೆ ಎಚ್ಚರಿಕೆ:
ಮೇ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಮತ್ತು ಹೊರಗೆ ಗಂಟೆಗೆ 40-50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೇ 27ರವರೆಗೆ ಗುಡುಗು ಸಹಿತ ಮಳೆ
ಮೇ 25ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಆಲಿಕಲ್ಲು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಗದಗ, ವಿಜಯಪುರ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮೇ 26ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Ebola outbreak: ಎಬೋಲಾ ವೈರಸ್ ಆತಂಕ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್; ಮಾರ್ಗಸೂಚಿ ಪ್ರಕಟ
ಮೇ 27ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ. ಚಿತ್ರದುರ್ಗ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.