ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA Vinay Kulkarni: ಜೈಲುಪಾಲಾದ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು; ಮುಂದಿರುವ ಆಯ್ಕೆಗಳೇನು?

Yogesh Gowda murder case: ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಜೀವಾವಧಿ ಜೈಲು ಶಿಕ್ಷೆ ನೀಡಲಾಗಿದ್ದು, ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಶಾಸಕನ ಮುಂದಿರುವ ಆಯ್ಕೆಗಳೇನು ಎಂಬ ಮಾಹಿತಿ ಇಲ್ಲಿದೆ.

ಶಾಸಕ ವಿನಯ್‌ ಕುಲಕರ್ಣಿ.

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ (Yogesh Gowda Murder Case) ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಶಿಕ್ಷೆ ಪ್ರಕಟಿಸಿದೆ. ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಶಿಕ್ಷೆ ನೀಡಲಾಗಿದ್ದು, ಇದರಿಂದ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವುದು ಫಿಕ್ಸ್‌ ಆಗಿದೆ.

ಶಾಸಕ ಸ್ಥಾನದಿಂದ ಅನರ್ಹ

ಸದ್ಯ ವಿನಯ್ ಕುಲಕರ್ಣಿ ಪ್ರಕರಣ ಸಂಬಂಧ ಐಪಿಸಿ 302, 120ಬಿ, 201, 148, 149, ಸೆಕ್ಷನ್ ಅಡಿಯಲ್ಲಿ ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತು ಹಿನ್ನೆಲೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹರಾಗಲಿದ್ದಾರೆ. ಕೋರ್ಟ್ ತೀರ್ಪಿನ ಪ್ರತಿ ಸ್ಪೀಕರ್‌ಗೆ ತಲುಪಿದ ಬಳಿಕ ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗುತ್ತದೆ.

‘ಜನಪ್ರತಿನಿಧಿ ಕಾಯ್ದೆ 1951’ರ ಸೆಕ್ಷನ್ 8(3) ರ ಪ್ರಕಾರ, ಯಾವುದೇ ಶಾಸಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ.

ಇನ್ನು ಜೈಲು ಶಿಕ್ಷೆಯ ಅವಧಿಯನ್ನು ಪೂರೈಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶವಿರುವುದಿಲ್ಲ. ಇನ್ನು ಶಾಸಕತ್ವ ಅಧಿಕೃತವಾಗಿ ಅನರ್ಹಗೊಂಡ ತಕ್ಷಣ ಕ್ಷೇತ್ರ ಖಾಲಿಯಾಗಲಿದೆ. ವಿಧಾನಸಭಾ ಸಚಿವಾಲಯದಿಂದ ಕ್ಷೇತ್ರ ‘ಖಾಲಿ’ ಇದೆ ಎಂದು ಘೋಷಣೆಯಾಗಲಿದ್ದು, ಬಳಿಕ ಚುನಾವಣಾ ಆಯೋಗ 6 ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸುವ ಸಾಧ್ಯತೆ ಇದೆ.

ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆ ಏನು?

ಸದ್ಯ ವಿನಯ್ ಕುಲಕರ್ಣಿ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು ಎನ್ನುವುದನ್ನು ನೋಡುವುದಾರೆ, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಕೋರಬಹುದು. ಇಲ್ಲ ದೋಷಿಯನ್ನಾಗಿಸಿದ ತೀರ್ಪಿಗೂ ತಡೆಯಾಜ್ಞೆ ಕೋರಬಹುದು. ತಡೆಯಾಜ್ಞೆ ಸಿಕ್ಕರೆ ಮಾತ್ರ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಉಳಿಯಲಿದೆ. ಅಲ್ಲಿ ಒಂದು ವೇಳೆ ಅವರ ವಿರುದ್ಧ ತೀರ್ಪು ಬಂದರೆ ಜೈಲು ಸೇರಬೇಕು ಮಾತ್ರವಲ್ಲ ಅವರ ಶಾಸಕ ಸ್ಥಾನ ಕೂಡ ವಜಾಗೊಳ್ಳಲಿದೆ.

ಕ್ಷೇತ್ರಕ್ಕೆ ಕಾಲಿಡದೇ ಜಯಭೇರಿ ಬಾರಿಸಿದ್ದ ಶಾಸಕ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವಿನಯ್ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಧಾರವಾಡ ಕ್ಷೇತ್ರಕ್ಕೆ ಪ್ರವೇಶ ಇಲ್ಲದಿದ್ದರೂ ಸಹ ವಿನಯ್ ಕುಲಕರ್ಣಿ 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಕ್ಷೇತ್ರದಿಂದ ಹೊರಗಿದ್ದುಕೊಂಡೇ ಅಂದು ಹಾಲಿ ಬಿಜೆಪಿ ಶಾಸಕರಾಗಿದ್ದ ಅಮೃತ್ ದೇಸಾಯಿ ಅವರನ್ನು ಸೋಲಿಸಿ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು.

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

2016ರಲ್ಲಿ ಧಾರವಾಡದ ಜಿಮ್​​ನಲ್ಲಿ ಯೋಗೇಶ್ ಗೌಡ ಕೊಲೆ ನಡೆದಿತ್ತು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈ ಪ್ರೊಫೈಲ್‌ ಕೇಸ್ ಆಗಿತ್ತು. ಈ ಕೊಲೆಯಲ್ಲಿ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು. ಬಳಿಕ ಈ ಕೊಲೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ವಿನಯ್ ಕುಲಕರ್ಣಿ ಅವರನ್ನು 15ನೇ ಆರೋಪಿಯನ್ನಾಗಿ ಉಲ್ಲೇಖಿಸಿತ್ತು.