ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka CM Row: ಆ ರೀತಿಯ ಮಾತುಕತೆಯೇ ನಡೆದಿಲ್ಲ; ಸಿಎಂ ಬದಲಾವಣೆ ಚರ್ಚೆಗೆ ಟ್ವಿಸ್ಟ್‌ ನೀಡಿದ ರಣದೀಪ್‌ ಸುರ್ಜೆವಾಲಾ!

Karnataka CM Row: ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ವೇಳೆ ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಆದರೆ, ಇದನ್ನು ಅಲ್ಲಗಳೆದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್‌ ಸುರ್ಜೆವಾಲಾ ಅವರು, ಸದ್ಯಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಸಿಎಂ ಬದಲಾವಣೆ ಚರ್ಚೆಗೆ ಟ್ವಿಸ್ಟ್‌ ನೀಡಿದ ರಣದೀಪ್‌ ಸುರ್ಜೆವಾಲಾ!

ಡಿಸಿಎಂ ಡಿ.ಕೆ.ಶಿವಕುಮಾರ್‌ ಜತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೆವಾಲಾ. -

Prabhakara R
Prabhakara R May 27, 2026 6:31 PM

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ (Karnataka CM Row) ಚರ್ಚೆ ನಡೆಯುತ್ತಿರುವ ನಡುವೆ ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೆವಾಲಾ ಅವರು (Randeep Surjewala) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದರಿಂದ ಈಗ ನಡೆಯುತ್ತಿರುವ ಅಧಿಕಾರ ಹಂಚಿಕೆ ಚರ್ಚೆಗೆ ಮಹತ್ವದ ಟ್ವಿಸ್ಟ್‌ ಸಿಕ್ಕಿದೆ. ಯಾವುದೇ ಊಹಾಪೋಹದ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿರುವ ಅವರು, ಸದ್ಯಕ್ಕೆ ನಾವು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ, ಇನ್ನಾವುದೇ ಪ್ರಮುಖ ನಿರ್ಧಾರಗಳನ್ನೂ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ದೆಹಲಿ ಸಭೆಯಲ್ಲಿ ರಾಜ್ಯ ಸಭೆ ಹಾಗೂ ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸೇರಿ ವಿವಿಧ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ. ಆದರೆ, ಸಭೆ ಬಳಿಕ ಹಲವು ವದಂತಿಗಳು ಹರಡುತ್ತಿವೆ. ಆದರೆ, ಈ ಬಗ್ಗೆ ನೆನ್ನೆಯೇ ಕೆ.ಸಿ.ವೇಣುಗೋಪಾಲ್‌ ಅವರು ಸ್ಪಷ್ಟನೆ ನೀಡಿದ್ದರು.

ಸದ್ಯಕ್ಕೆ ನಾವು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ. ಯಾವುದೇ ನಿರ್ಧಾರಗಳನ್ನೂ ಕೈಗೊಂಡಿಲ್ಲ. ಹಾಗೇನಾದರೂ ಇದ್ದರೆ ನಾವು ಮಾಹಿತಿ ನೀಡುತ್ತೇವೆ. ಆದರೆ, ಮುಂದಿನ 20 ದಿನ, ಒಂದು ತಿಂಗಳ ನಂತರ ಏನಾಗಲಿದೆ ಎಂಬುವುದನ್ನು ನಾವು ಹೇಳಲು ಸಾಧ್ಯವಿಲ್ಲ. ಹೀಗಾಗಿ ಯಾವುದೇ ಊಹಾಪೋಹಾಗಳಿಗೆ ಆಸ್ಪದ ನೀಡಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ದೆಹಲಿಯಿಂದ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌; ಹೈಕಮಾಂಡ್‌ ಸಭೆ ಬಗ್ಗೆ ಹೇಳಿದ್ದೇನು?

ನಮ್ಮ ಪಕ್ಷದ ಕರ್ನಾಟಕದ ಜನರಿಗೆ ಮಾತು ನೀಡುತ್ತದೆ, ನಾವು ತೆಗೆದುಕೊಳ್ಳುವ ಪ್ರತೀ ನಿರ್ಧಾರವೂ ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡುತ್ತದೆ. ಬಿಜೆಪಿಯು ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳನ್ನು ವಿರೋಧ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರವು ಪ್ರತಿ ದಿನ ಅಗತ್ಯವಸ್ತುಗಳು, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮೂಲಕ ಜನರ ಮೇಲೆ ಹೊರೆ ಹೇರುತ್ತಿದೆ. ಈ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.