ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gautam Adani: ಉದ್ಯಮಿ ಅದಾನಿ ಭೇಟಿ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಉದ್ಯಮಿ ಗೌತಮ್ ಅದಾನಿ ಅವರು‌ ಬೆಂಗಳೂರಿನ 'ಆರ್ಟ್ ಆಫ್ ಲಿವಿಂಗ್'ಗೆ ಭಾನುವಾರ ಭೇಟಿ ನೀಡಿದ್ದರು. ಅಲ್ಲಿಂದ ವಾಪಸ್‌ ತೆರಳುವಾಗ ಸಿಎಂ ಡಿ.ಕೆ. ಶಿವಕುಮಾ‌ರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಸಿಎಂ ಡಿ.ಕೆ ಶಿವಕುಮಾ‌ರ್ ಜತೆ ಅದಾನಿ ಸುಮಾರು 20 ನಿಮಿಷ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ಆರ್ಟ್‌ ಆಫ್‌ ಲಿವಿಂಗ್‌ಗೆ ಭೇಟಿ ನೀಡಿದ್ದ ಗೌತಮ್‌ ಅದಾನಿ (Gautam Adani) ಅವರು, ಅಲ್ಲಿಂದ ಏರ್‌ಪೋರ್ಟ್‌ಗೆ ವಾಪಸ್‌ ತೆರಳುವ ವೇಳೆ ಸಿಎಂ ಡಿಕೆಶಿ ಅವರನ್ನು ಭೇಟಿಯಾಗಿದ್ದರು.

ಇಂದು ಉದ್ಯಮಿ ಗೌತಮ್ ಅದಾನಿಯವರು ಭೇಟಿಯಾದ ಬಗ್ಗೆ ಮಾಧ್ಯದವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮುಖ್ಯಮಂತ್ರಿಯಾದ ನಂತರ ಉದ್ಯಮಿ ಗೌತಮ್ ಅದಾನಿಯವರು ಸೌಜನ್ಯದ ಭೇಟಿ ನೀಡಿ ಮಾತುಕತೆ ನಡೆಸಿದರು ಎಂದು ಸ್ಪಷ್ಟಪಡಿಸಿದ್ದಾರೆ.



ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಎದುರಿಸಲು ಶಕ್ತಿಯಿಲ್ಲ: ಸಿಎಂ

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಭಾನುವಾರ ಮಾತನಾಡಿದರು.

ಸಚಿವ ನಾಗೇಂದ್ರ ಅವರ ರಾಜೀನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ. ಒಂದು ನೋಟೀಸ್ ಕೂಡ ಕೊಡದೇ ಅಧಿವೇಶನದ ಕಾರ್ಯಕಲಾಪಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಧರಣಿ ಮಾಡುವುದು ತಪ್ಪಲ್ಲ. ಆದರೆ ನೋಟೀಸು ನೀಡಿ ಚರ್ಚೆ ನಡೆಸಲಿ. ಸಚಿವರ ರಾಜಿನಾಮೆ ಏಕೆ ನೀಡಬೇಕು ಎಂಬುದನ್ನು ಚರ್ಚೆ ಮಾಡಲು ಪ್ರತಿಪಕ್ಷಗಳಿಗೆ ತಾಳ್ಮೆ ಇಲ್ಲ” ಎಂದರು.

ದೇಶದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ತಿಳಿಸಲಿ

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ”.” ಮಾಧ್ಯಮದವರು ದೇಶದ ಯಾವ ಸಚಿವರ ಹಾಗೂ ಯಾವ ಮುಖ್ಯಮಂತ್ರಿಗಳ ಮೇಲೆ ಎಷ್ಟು ಮೊಕದ್ದಮೆಗಳಿವೆ ಎಂಬ ದಾಖಲಾತಿಗಳೊಂದಿಗೆ ಪ್ರಶ್ನಿಸಬೇಕು. ಪ್ರತಿಪಕ್ಷಗಳು ಅಂತಹ ಎಷ್ಟು ಸಚಿವರ ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಯನ್ನು ಕೇಳುತ್ತಿದ್ದಾರೆ ಎಂಬುದನ್ನು ಮಾಧ್ಯಮಗಳೂ ಪರಿಶೀಲಿಸಬೇಕು. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 15 ಪರಿಶಿಷ್ಟ ವರ್ಗದ ಶಾಸಕರು ಆಯ್ಕೆಯಾಗಿದ್ದು , ಈ ಬಗ್ಗೆ ಅವರಿಗೆ ಮತ್ಸರವಿದೆ. ಅವರ ಪಕ್ಷದಲ್ಲಿ ಯಾವುದೇ ಪರಿಶಿಷ್ಟ ವರ್ಗದ ನಾಯಕರು ಹೊರಹೊಮ್ಮಲಿಲ್ಲ ಎಂಬ ಅಸಮಾಧಾನವಿರುವ ಕಾರಣ, ಈ ರೀತಿಯ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದರು.