ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Priyank Kharge: ಆರ್‌ಎಸ್ಎಸ್ ಸಿದ್ಧಾಂತ ಪರಿಣಾಮದಿಂದ ಸಿಜೆಐ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿ: ಪ್ರಿಯಾಂಕ್‌ ಖರ್ಗೆ

Ban on RSS activities: ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರು, ಅ.12: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿರುವುದಕ್ಕೆ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿ (Priyank Kharge), ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ಧಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.

ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.

ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್‌ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್‌ಎಸ್ಎಸ್‌ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.



ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ಏನಿದೆ?

ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ. ಸಮುದಾಯದ ಮನಸ್ಸಿನಲ್ಲಿ ಭಾರತ ಐಕ್ಯತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ.

ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸಿದರೆ ಎಳೆ ಮಕ್ಕಳು ಹಾಗೂ ಯುವ ಜನರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಅವರು ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ | DK Shivakumar: ಡಿಕೆಶಿ ಎದುರು ಮುನಿರತ್ನ ಹೈಡ್ರಾಮಾ; ಮೈಕ್​ಗಾಗಿ ವೇದಿಕೆ ಮೇಲೆ ಜಟಾಪಟಿ, ಜೆಪಿ ಪಾರ್ಕ್‌ನಲ್ಲಿ ಗೊಂದಲದ ವಾತಾವರಣ

ಪ್ರಿಯಾಂಕ್ ಖರ್ಗೆ ಅವರ ಪತ್ರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತಾಗಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.