ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cm Siddaramaiah: ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ತಲೆ ಬಾಗಲೇ ಬೇಕು; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?

Mallikharjun Kharge: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಭಾರೀ ಕಸರತ್ತು ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಖರ್ಗೆ ನಿವಾಸದಲ್ಲಿ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಭಾರೀ ಕಸರತ್ತು ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕೀಯದ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಖರ್ಗೆ ನಿವಾಸದಿಂದ ಹೊರಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ನಿರ್ಧಾರವನ್ನು ನಾನೂ ಒಪ್ಪಬೇಕು ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

ಡಿಕೆ ಆಪ್ತರ ನಡೆಗೆ ಸಿಎಂ ಅಸಮಧಾನ

ಇದು ಕೇವಲ ಸೌಹಾರ್ದಯುತ ಭೇಟಿ ಅಷ್ಟೇ ನಾಯಕತ್ವ ಬದಲಾವಣೆ ಬರೀ ಊಹಾಪೋಹ. ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷ ಸಂಘಟನೆ ಬಗ್ಗೆ ಮಾತಾಡಿದೆ. ಮುಂದಿನ ಚುನಾವಣೆ ತಯಾರಿ ಬಗ್ಗೆ ಚರ್ಚೆಯೂ ನಡೆಯಿತು ಎಂದು ಸಿಎಂ ಹೇಳಿದ್ದಾರೆ. ಖರ್ಗೆ ಅವರ ಬಳಿ ಡಿ.ಕೆ. ಶಿ ಅವರ ಬೆಂಬಲಿತ ಶಾಸಕರು ನಾಯಕತ್ವ ಬದಲಾವಣೆ ವಿಚಾರವನ್ನು ಬಹಿರಂಗವಾಗಿ ಚರ್ಚಿಸುತ್ತಿರುವುದು ಹಾಗೂ ದೆಹಲಿಗೆ ತೆರಳುತ್ತಿರುವುದನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

DK Shivakumar: ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ: ಡಿಕೆ ಶಿವಕುಮಾರ್‌

ರಾಜ್ಯ ಸರ್ಕಾರ ಈಗಾಗಲೇ ಎರಡು ವರೆ ವರ್ಷ ಪೂರ್ಣಗೊಳಿಸಿದ್ದು, ಸಂಪುಟ ಪುನರ್‌ ರಚನೆಗೆ ಸಿಎಂ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಿರಿಯ ಶಾಸಕರು, ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರು ಸೇರಿದಂತೆ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕು ಎಂದು ಸಿಎಂ ಹೇಳಿದ್ದಾರೆ. ಸದ್ಯ ವಿದೇಶ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಭಾರತಕ್ಕೆ ಮರಳಿದ ಬಳಿಕ ಸಿಎಂ ಹಾಗೂ ಡಿಸಿಎಂ ಜೊತೆ ಪ್ರತ್ಯೇಕ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಖರ್ಗೆ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌ "ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರ ಸಲಹೆ, ಮಾರ್ಗದರ್ಶನ ಅವಶ್ಯಕತೆ ಇದೆಯೋ ಆಗ ನಾನು ಭೇಟಿ ಮಾಡುವೆ. ಅವರು ನಮ್ಮ ನಾಯಕರು, ನಮ್ಮ ಪಕ್ಷದ ಅಧ್ಯಕ್ಷರು. ಅವರು ಬಂದಾಗ ಅವರನ್ನು ಭೇಟಿ ಮಾಡುವುದು, ನಮ್ಮ ಕರ್ತವ್ಯ. ಶಿಷ್ಟಾಚಾರದ ಬಗ್ಗೆ ನನಗೆ ಬೇರೆಯವರಿಗಿಂತ ಹೆಚ್ಚಿನ ಅರಿವಿದೆ. ಅವರು ನಮ್ಮ ರಾಜ್ಯದವರೇ ಆದರೂ ಅವರ ಹಿರಿತನ ಹಾಗೂ ಹುದ್ದೆಗೆ ನಾವು ಗೌರವ ನೀಡಬೇಕು ಎಂದು ಹೇಳಿದರು.