ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಯಾವಾಗ? ಯಾರೆಲ್ಲ ಭಾಗಿ?

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಬೆಳಗ್ಗೆ ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಿದೆ. ಇದೀಗ ನೂತನ ಮುಖ್ಯಮಂತ್ರಿಯನ್ನಾಗಿ ಡಿಕೆ ಶಿವಕುಮಾರ್‌ ಅವರನ್ನು ಹೈಕಮಾಂಡ್‌ ಘೋಷಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಬೆಳಗ್ಗೆ ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಿದೆ. ಇದೀಗ ನೂತನ ಮುಖ್ಯಮಂತ್ರಿಯನ್ನಾಗಿ ಡಿಕೆ ಶಿವಕುಮಾರ್‌ (DK Shivakumar) ಅವರನ್ನು ಹೈಕಮಾಂಡ್‌ ಘೋಷಿಸಿದ್ದು, ಕರ್ನಾಟಕದ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಸದ್ಯ ದೆಹಲಿಯಲ್ಲಿದ್ದು, ನೂತನ ಮುಖ್ಯಮಂತ್ರಿಯ ಪ್ರಮಾಣವಚನ, ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ. ಡಿಕೆ ಶಿವಕುಮಾರ್ ಮತ್ತು ನೂತನ ಸಚಿವ ಸಂಪುಟದ ಪ್ರಮಾಣವಚನ ಯಾವಾಗ ಎಂಬುದು ಅಧಿಕೃತವಾಗಿ ಇನ್ನೂ ಘೋಷಣೆಯಾಗಿಲ್ಲ. ಸೋಮವಾರವೇ ಸಂಜೆ ಗೋಧೂಳಿ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಪ್ರತಿಜ್ಞಾವಿಧಿ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ ಕಾಂಗ್ರೆಸ್ನ ಪ್ರಮುಖ ರಾಜ್ಯ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆ ಇದೆ. ಪ್ರಮಾಣ ವಚನದ ಸ್ಥಳ ಹಾಗೂ ಸಮಯ ಇನ್ನೂ ನಿಗದಿಯಾಗಿಲ್ಲ. ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ ಮೇಲೆ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸೋ ಸಾಧ್ಯತೆಗಳಿವೆ. ದೊಡ್ಡ ಪ್ರಮಾಣದಲ್ಲಿ ಜನರನ್ನ ಸೇರಿಸಿ ಪದಗ್ರಹಣ ನಡೆಸಲು ಸಿದ್ಧತೆ ನಡೆಸಲಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ರಾಮಕೃಷ್ಣ ಹೆಗಡೆ ಮತ್ತು ಎಸ್.ಎಂ. ಕೃಷ್ಣ ಅವರ ಪರಂಪರೆಯನ್ನು ಅನುಸರಿಸಲು ಡಿ.ಕೆ. ಶಿವಕುಮಾರ್ ಬಯಸುತ್ತಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಕೆಲವು ಖಾಲಿ ಹುದ್ದೆಗಳನ್ನು ಉಳಿಸಿಕೊಂಡು ಜೂನ್ 18 ರ ರಾಜ್ಯಸಭಾ ಚುನಾವಣೆಯ ನಂತರ ಉಳಿದ ಸಚಿವರನ್ನು ಭರ್ತಿ ಮಾಡುವ ಸಾಧ್ಯತೆಯಿದೆ.

CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ, ಸಚಿವ ಸಂಪುಟವೂ ವಿಸರ್ಜನೆ

ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾದರೆ, ಅದು ಭಿನ್ನಮತಕ್ಕೆ ಕಾರಣವಾಗಬಹುದು. ಸಂಪುಟ ಸ್ಥಾನ ಕಳೆದುಕೊಳ್ಳುವ ಅತೃಪ್ತ ಶಾಸಕರನ್ನು ಓಲೈಸಿ ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ವಿರೋಧ ಪಕ್ಷಗಳು ಲಾಭ ಪಡೆಯಬಹುದು. ಆದ್ದರಿಂದ ಈ ಆಯ್ಕೆಯನ್ನು ಅವರು ಕೈಗೆತ್ತಿಕೊಳ್ಳಬಹುದು ಎನ್ನಲಾಗುತ್ತಿದೆ.

Vishakha Bhat Heggar

View all posts by this author