Bengaluru Rains: ಸಿಲಿಕಾನ್ ಸಿಟಿಯ ಹಲವೆಡೆ ಅಬ್ಬರಿಸಿದ ವರುಣ; ನಾಳೆ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?
Weather News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ಬಳಿ ಶನಿವಾರ ಸಂಜೆ ಮಳೆ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣ ರಸ್ತೆಯ ಕಡೆಗೆ ನಿಧಾನಗತಿಯ ಸಂಚಾರವಿದೆ. -

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಶನಿವಾರ ಸಂಜೆಯೂ ನಗರದ ವಿವಿಧೆಡೆ ಬಿರುಸಿನ ಮಳೆಯಾಗಿದ್ದು, ಇದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ನಾಗವಾರ, ಜೆ.ಪಿ. ನಗರ, ಆರ್.ಆರ್.ನಗರ, ಮಡಿವಾಳ, ಮೈಸೂರು ರೋಡ್ ಸೇರಿ ವಿವಿಧೆಡೆ ಭಾರಿ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿತ್ತು.
ನಾಗವಾರ ಜಂಕ್ಷನ್ ಕಡೆಯಿಂದ ವೀರಣ್ಣಪಾಳ್ಯ ಸರ್ವೀಸ್ ರಸ್ತೆ ಕಡೆಗೆ, ಕ್ವೀನ್ಸ್ ರಸ್ತೆ ಕಡೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್ ಕಡೆಗೆ, ಹುಣಸೆಮರ ಜಂಕ್ಷನ್ ಕಡೆಯಿಂದ ಬಿನ್ನಿಮಿಲ್ ರೈಲ್ವೇ ಅಂಡರ್ ಪಾಸ್ ಕಡೆಗೆ, HSBC ಜಂಕ್ಷನ್. ಕಡೆಯಿಂದ ಬಿಳೇಕಹಳ್ಳಿ ಕಡೆಗೆ, ಸಾರಕ್ಕಿ ಸಿಗ್ನಲ್ ಕಡೆಯಿಂದ ಸಿಂಧೂರ ಕಡೆಗೆ, 35 ನೇ ಜೆ.ಪಿ. ನಗರ ಕಡೆಯಿಂದ ಸಾರಕ್ಕಿ ಸಿಗ್ನಲ್ ಕಡೆಗೆ, ಸಾಗರ್ ಜಂಕ್ಷನ್. ಕಡೆಯಿಂದ ಡೈರಿ ವೃತ್ತದ ಕಡೆಗೆ ಮಳೆನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿತ್ತು.
ಇನ್ನು ಇಬ್ಬಲೂರು ಕಡೆಯಿಂದ ಅಗರದ ಕಡೆಗೆ, ಆಸ್ರಾ ಆಸ್ಪತ್ರೆ ಬನ್ನೇರುಘಟ್ಟ ರಸ್ತೆ ಕಡೆಯಿಂದ ಸಾಗರ ಜಂಕ್ಷನ್ ಕಡೆಗೆ, ಮಡಿವಾಳ ಪೊಲೀಸ್ ಠಾಣೆ ಕಡೆಯಿಂದ ಸಿಲ್ಕ್ ಬೋರ್ಡ್ ಕಡೆಗೆ, ಹೆಬ್ಬಾಳ ಮುಖ್ಯ ರಸ್ತೆ ಮತ್ತು ಸರ್ವಿಸ್ ರೋಡ್ ಕಡೆಯಿಂದ ವಿಮಾನ ನಿಲ್ದಾಣದ ಕಡೆಗೆ, ರೂಪೇನ ಅಗ್ರಹಾರ ಜಂಕ್ಷನ್ ಕಡೆಯಿಂದ ಬೊಮ್ಮನಹಳ್ಳಿ ಕಡೆಗೆ, ಸಾರಕ್ಕಿ ಸಿಗ್ನಲ್ ಕಡೆಯಿಂದ ಜರಗನಹಳ್ಳಿ ಕಡೆಗೆ, ಮೈಸೂರು ರೋಡ್ ಟೋಲ್ ಗೇಟ್ ಕಡೆಯಿಂದ ಹಳೆ ಗುಡ್ಡದಹಳ್ಳಿ, ಬೊಮ್ಮನಹಳ್ಳಿ ಜಂಕ್ಷನ್ ಕಡೆಯಿಂದ ರೂಪೇನ ಅಗ್ರಹಾರ ಜಂಕ್ಷನ್ ಕಡೆಗೆ, ಹೆಬ್ಬಾಳ ಪೊಲೀಸ್ ಠಾಣೆ ಬಳಿ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣ ರಸ್ತೆಯ ಕಡೆಗೆ ನಿಧಾನಗತಿಯ ಸಂಚಾರವಿತ್ತು.
ಸೆ.7ರಂದು ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?
ಸೆ.7ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.
ಇನ್ನು ಸೆ.8ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಸೆ.9ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಸೆ.10 ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಮಳೆಗಾಲದಲ್ಲಿ ಚರ್ಮದ ಸಮಸ್ಯೆ: ನಿಭಾಯಿಸುವುದು ಹೇಗೆ?
ಸೆ.11 ಮತ್ತು 12ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.