ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಇಂದಾದರೂ ಆಗುತ್ತಾ ಖಾತೆ ಹಂಚಿಕೆ; ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು?

ರಾಜ್ಯ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಮುಗಿದಿದ್ದರೂ ಸಚಿವರಿಗೆ ಖಾತೆ ಹಂಚಿಕೆ ಮಾತ್ರ ಇನ್ನೂ ಅಂತಿಮವಾಗಿಲ್ಲ. ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಇನ್ನೆರಡು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ, ಅಧಿವೇಶನದೊಳಗೆ ಖಾತೆ ಹಂಚಿಕೆ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ಇಂದಾದರೂ ಆಗುತ್ತಾ ಖಾತೆ ಹಂಚಿಕೆ; ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 11, 2026 9:45 AM

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಮುಗಿದಿದ್ದರೂ ಸಚಿವರಿಗೆ ಖಾತೆ ಹಂಚಿಕೆ ಮಾತ್ರ ಇನ್ನೂ ಅಂತಿಮವಾಗಿಲ್ಲ. ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಇನ್ನೆರಡು ದಿನ ಬಾಕಿ ಇರುವ *(CM DK Shivakumar) ಹಿನ್ನೆಲೆಯಲ್ಲಿ, ಅಧಿವೇಶನದೊಳಗೆ ಖಾತೆ ಹಂಚಿಕೆ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಮಾಡಿದ 19 ಶಾಸಕರುಗಳು ತಮಗೆ ಇಂತಹದ್ದೇ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದರಿಂದ ಖಾತೆ ಭಾಗ್ಯ ಇದುವರೆಗೂ ಸಿಗಲಿಲ್ಲ.

ಇತ್ತೀಚೆಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಡಿ.ಕೆ. ಶಿವಕುಮಾರ್ ನಡೆಸಿದ ಸರಣಿ ಮಾತುಕತೆ ಬಳಿಕ ಖಾತೆ ಹಂಚಿಕೆ ಪಟ್ಟಿ ಬಹುತೇಕ ಅಂತಿಮಗೊಂಡಿದೆ ಎನ್ನಲಾಗುತ್ತಿದೆ. ಆದರೆ ಕೇವಲ ಖಾತೆಗಳನ್ನು ಹಂಚಿಕೆ ಮಾಡಲಾಗುತ್ತದೆಯೇ ಅಥವಾ ಕೆಲವು ಸಚಿವರ ಖಾತೆಗಳನ್ನು ಅದಲುಬದಲು ಮಾಡಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಸಮಾಧಾನ ಮುಂದುವರಿದಿದ್ದು, ಕೆಲ ಸಚಿವರ ಬದಲಾವಣೆ, ಹೊಸಬರಿಗೆ ಅವಕಾಶ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಸೇರಿದಂತೆ ಹಲವು ವಿಚಾರಗಳು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿವೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ಭಾನುವಾರ ಸಂಜೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಸಂದರ್ಭದಲ್ಲಿ ಖಾತೆ ಪಟ್ಟಿಗೆ ಯಾವುದೇ ರೀತಿಯಲ್ಲಿಯೂ ಅಂತಿಮವಾಗಿಲ್ಲ ಎಂದು ಹೇಳಲಾಗುತ್ತಿದ್ದರೂ, ಮುಖ್ಯಮಂತ್ರಿ ಅವರು ಇಂದು ಸಂಜೆ ಅಥವಾ ನಾಳೆಯೊಳಗೆ ಖಾತೆ ವಿತರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಳ್ಮೆ ಇರಲಿ, ಎಲ್ಲರಿಗೂ ಅವಕಾಶ ಸಿಗಲಿದೆ: 133 ಶಾಸಕರೂ ಸಚಿವರಾಗಲೂ ಅರ್ಹರು: ಸಿಎಂ ಡಿಕೆ ಶಿವಕುಮಾರ್

ಶುಕ್ರವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ನಾಳೆ (ಆಗಸ್ಟ್ 12) ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಬಳಿಕವೇ ಪೂರ್ಣ ಪ್ರಮಾಣದ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿದೆ.