ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಆಗುತ್ತಾ? ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಗೆ (Traffic Congestion) ಬ್ರೇಕ್ ಹಾಕಲು ರಾಜ್ಯ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ನಗರದಾದ್ಯಂತ ಶಾಲಾ-ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳಾಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗಂಭೀರ ಚಿಂತನೆ ನಡೆಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಗೆ (Traffic Congestion) ಬ್ರೇಕ್ ಹಾಕಲು ರಾಜ್ಯ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ನಗರದಾದ್ಯಂತ ಶಾಲಾ-ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳಾಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗಂಭೀರ ಚಿಂತನೆ ನಡೆಸಿದೆ.

ಪ್ರಸ್ತುತ ಕಚೇರಿಗಳಿಗೆ ತೆರಳುವ ಸಾರ್ವಜನಿಕರ ವಾಹನಗಳು ಮತ್ತು ಶಾಲಾ ವಾಹನಗಳು ಒಂದೇ ಸಮಯದಲ್ಲಿ ರಸ್ತೆಗಿಳಿಯುವುದರಿಂದ ಪೀಕ್ ಅವರ್‌ಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದನ್ನು ನಿಯಂತ್ರಿಸಲು ಮತ್ತು ಶಾಲಾ ಮಕ್ಕಳ ಸುರಕ್ಷಿತ ಸಂಚಾರಕ್ಕಾಗಿ ಶಾಲಾ ಅವಧಿಯನ್ನು 30 ನಿಮಿಷದಿಂದ 1 ಗಂಟೆಯಷ್ಟು ಮುಂಚಿತವಾಗಿ ಅಥವಾ ತಡವಾಗಿ ಆರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ.

ಬೆಂಗಳೂರಿನಲ್ಲಿ ಪ್ರಸ್ತುತ ಬಹುತೇಕ ಖಾಸಗಿ ಶಾಲೆಗಳು ಬೆಳಗ್ಗೆ 8:45 ರಿಂದ ಮಧ್ಯಾಹ್ನ 3:45 ರ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಟ್ರಾಫಿಕ್ ದಟ್ಟಣೆಯಿಂದಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಗಳ ನಿರ್ವಹಣೆಗೆ ಹೆಚ್ಚಿನ ಸಮಯ ವ್ಯಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಾಲಾ ಅವಧಿಯನ್ನು ಬೆಳಗ್ಗೆ 8:30 ರಿಂದ ಮಧ್ಯಾಹ್ನ 3:30 ಕ್ಕೆ ಮರುಹೊಂದಿಸುವುದು ಸೂಕ್ತ ಎಂದು ಸರ್ಕಾರಿ ಶಾಲಾ ಶಿಕ್ಷಕರ ಸಂಘ ಹಾಗೂ ಖಾಸಗಿ ಶಾಲೆಗಳ ಒಕ್ಕೂಟ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿವೆ.

ಸರ್ಕಾರಿ ಶಾಲೆಗಳನ್ನು ನಗರದ ಖಾಸಗಿ ಶಾಲೆಗಳು ದತ್ತು ಪಡೆಯಬೇಕು, ಇಲ್ಲದಿದ್ದರೆ ಆ ಶಾಲೆಗಳ ಶುಲ್ಕಕ್ಕೆ ಮಿತಿ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಖಾಸಗಿ ಶಾಲೆಗಳ ವಾಹನ ಮಾಲೀಕರು, ಪೋಷಕರು, ಶಿಕ್ಷಕರ ಜೊತೆ ಸಭೆ ನಡೆಸಿದ ಬಳಿಕ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಸಮಯ ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Vishakha Bhat Heggar

View all posts by this author