ಸಾರ್ವಜನಿಕರೇ ಗಮನಿಸಿ; ಮಳೆ ಸಂಬಂಧಿತ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭಿಸಿದ ಬೆಸ್ಕಾಂ
BESCOM: ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಭಾರಿ ಗಾಳಿ-ಮಳೆಗೆ 461 ವಿದ್ಯುತ್ ಕಂಬಗಳು, 77 ಟ್ರಾನ್ಸ್ ಫಾರ್ಮರ್‌ಗಳು, ಸುಮಾರು 1.8 ಕಿ.ಮೀ. ಉದ್ದದ ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು, ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು ಹಾನಿ 87.32 ಲಕ್ಷ ರೂ. ಎಂದು ಅಂದಾಜಿಲಾಗಿದೆ.
ಬೆಂಗಳೂರಿನಲ್ಲಿ ಧರೆಗುರುಳಿದ ಮರ. -
ಬೆಂಗಳೂರು, ಏ. 30: ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ (BESCOM) ವ್ಯಾಪ್ತಿಯಲ್ಲಿ ಬುಧವಾರ (ಏಪ್ರಿಲ್ 29) ಸಂಜೆ ಸುರಿದ ಭಾರಿ ಗಾಳಿ-ಮಳೆಗೆ 461 ವಿದ್ಯುತ್ ಕಂಬಗಳು, 77 ಟ್ರಾನ್ಸ್ ಫಾರ್ಮರ್, ಸುಮಾರು 1.8 ಕಿ.ಮೀ.ನಷ್ಟು ಉದ್ದದ ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು, ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು ಹಾನಿ 87.32 ಲಕ್ಷ ರುಪಾಯಿ ಎಂದು ಅಂದಾಜಿಲಾಗಿದೆ. ಆಲಿಕಲ್ಲು ಸಹಿತ ಸುರಿದ ಗಾಳಿ-ಮಳೆಗೆ ಬೆಸ್ಕಾಂನ ವಿದ್ಯುತ್ ತಂತಿಗಳು ಹಾಗೂ ಟ್ರಾನ್ಸ್ ಫಾರ್ಮರ್‌ಗಳ ಮೇಲೆ ಮರ ಹಾಗೂ ಮರದ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ಹಾಗೂ ಕಂಬಗಳು ಮುರಿದು, ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಪೂರೈಕೆಯನ್ನು ಪುನರ್ ಸ್ಥಾಪಿಸುವ ಕಾರ್ಯ ಭರದಿಂದ ಸಾಗಿದೆ.
ವಿದ್ಯುತ್ ಪೂರೈಕೆ ಪುನರ್ ಸ್ಥಾಪಿಸುವ ಕೆಲಸಕ್ಕೆ ಆದ್ಯತೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಹಾನಿಗೊಳಗಾದ ವಿದ್ಯುತ್ ಮೂಲ ಸೌಕರ್ಯಗಳನ್ನು ಸರಿಪಡಿಸಿ, ತಕ್ಷಣವೇ ವಿದ್ಯುತ್ ಪೂರೈಕೆಯನ್ನು ಮರು ಸ್ಥಾಪಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಹಾನಿಗೊಳಗಾದ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ ಫಾರ್ಮರ್‌ಗಳ ಪೈಕಿ ಬೆಸ್ಕಾಂನ ಜಿಬಿಎ ವ್ಯಾಪ್ತಿಯಲ್ಲಿ 186 ವಿದ್ಯುತ್ ಕಂಬಗಳು, 38 ಟ್ರಾನ್ಸ್ ಫಾರ್ಮರ್‌ಗಳು ಹಾಗೂ 0.9 ಕಿ.ಮೀ. ನಷ್ಟು ಉದ್ದದ ವಿದ್ಯುತ್ ತಂತಿಗಳು ಹಾನಿಗಳಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 50.52 ಲಕ್ಷ ರೂ. ಮೌಲ್ಯದ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.
ಗಾಳಿ-ಮಳೆಗೆ ವಿದ್ಯುತ್ ವ್ಯತ್ಯಯದ ಕುರಿತು ಬುಧವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಬೆಸ್ಕಾಂ ಸಹಾಯವಾಣಿ (1912) ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದಂತೆ 12,311 ದೂರುಗಳನ್ನು ಸ್ವೀಕರಿಸಿದ್ದು, ಈ ಪೈಕಿ 11,859 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ವಿದ್ಯುತ್ ಸಂಬಂಧಿತ ದೂರುಗಳಿಗೆ ಗ್ರಾಹಕರು ಈ ಕೆಳಕಂಡ ವಾಟ್ಸ್‌ಆ್ಯಪ್ ಸಂಖ್ಯೆಗಳಿಗೆ ಸಂದೇಶಗಳ ಹಾಗೂ ಫೋಟೊ ಸಹಿತ ದೂರು ದಾಖಲಿಸಲು ಬೆಸ್ಕಾಂ ವಿನಂತಿ ಮಾಡಿದೆ.
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.
ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ: 8277884017, ರಾಮನಗರ ಜಿಲ್ಲೆ: 8277884018, ತುಮಕೂರು ಜಿಲ್ಲೆ: 8277884019, ಚಿತ್ರದರ್ಗ ಜಿಲ್ಲೆ: 8277884020, ಮತ್ತು ದಾವಣಗೆರೆ ಜಿಲ್ಲೆ: 8277884021.
ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಸೂಚನೆ ಇರುವುದರಿಂದ ಗ್ರಾಹಕರಿಗೆ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಅರಿವು ಮೂಡಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಸಂಜೆ ಬೆಸ್ಕಾಂ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಚಿವರು, ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಈಗಲೇ ಅಗತ್ಯ ಕ್ರಮ ವಹಿಸಬೇಕು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯುತ್ ಕಂಬಗಳು ವಾಲಿದ್ದರೆ ಅಥವಾ ಮರಗಳ ಕೊಂಬೆಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು ಕಂಡು ಬಂದಲ್ಲಿ ಅವುಗಳ ಸಮೀಪ ಹೋಗದೆ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಮಾಹಿತಿ ನೀಡಬೇಕು, ಬೆಸ್ಕಾಂ 1912 ಅಥವಾ ವಾಟ್ಸ್ ಆಪ್ ಸಹಾಯವಾಣಿಗೆ ದೂರು ನೀಡಲು ಬೆಸ್ಕಾಂ ವಿನಂತಿಸಿದೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಅವಘಡ: ಅಧಿಕಾರಿಯ ತಲೆದಂಡಕ್ಕೆ ಸಿದ್ದರಾಮಯ್ಯ ಖಡಕ್ ಆದೇಶ
ಗಾಳಿ-ಮಳೆಗೆ ವಿದ್ಯುತ್ ವ್ಯತ್ಯಯದ ಕುರಿತು ಬುಧವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಬೆಸ್ಕಾಂ ಸಹಾಯವಾಣಿ (1912) ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದಂತೆ 12,311 ದೂರುಗಳನ್ನು ಸ್ವೀಕರಿಸಿದ್ದು, ಈ ಪೈಕಿ 11859 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ವಿದ್ಯುತ್ ಸಂಬಂಧಿತ ದೂರುಗಳಿಗೆ ಗ್ರಾಹಕರು ಈ ಕೆಳಕಂಡ ವಾಟ್ಸ್‌ಆ್ಯಪ್ ಸಂಖ್ಯೆಗಳಿಗೆ ಸಂದೇಶಗಳ ಹಾಗೂ ಫೋಟೊ ಸಹಿತ ದೂರು ದಾಖಲಿಸಲು ಬೆಸ್ಕಾಂ ವಿನಂತಿ ಮಾಡಿದೆ.
![]()
ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಕುರಿತು ದಾಖಲಾಗುವ ಸಾರ್ವಜನಿಕರ ದೂರುಗಳನ್ನು ಬೆಸ್ಕಾಂ ಆಧಿಕಾರಿಗಳು ಶೀಘ್ರವಾಗಿ ಪರಿಹರಿಸಬೇಕು. ಮಳೆಗಾಲಕ್ಕೆ ಮುನ್ನ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಂಡು, ವಿದ್ಯುತ್ ವ್ಯತ್ಯಯ ಉಂಟಾಗದಂತೆ ಖಾತರಿಪಡಿಸಿಕೊಳ್ಳಬೇಕು.
-ಕೆ.ಜೆ. ಜಾರ್ಜ್, ಇಂಧನ ಸಚಿವ.