ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Guarantee schemes: ಮತ್ತೆ ಅರ್ಜಿ ಸಲ್ಲಿಸಲು ಹೇಳಿದ್ದೇವೆಯೇ ಹೊರತು ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಸ್ಪಷ್ಟನೆ

DK Shivakumar: ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗೆ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕಿದೆ.

ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು, ಜೂ. 14: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಕೆ ಆರಂಭ

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಹತ್ವದ ಸೂಚನೆ ನೀಡಿದ್ದರು. ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ, ಆದರೆ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ಉದ್ದೇಶದಿಂದ ಫಲಾನುಭವಿಗಳು ಮರು ಅರ್ಜಿ ಸಲ್ಲಿಸುವುದು ಕಡ್ಡಾಯ ಎಂದು ಅವರು ಸ್ಪಷ್ಟನೆ ನೀಡಿದ್ದರು.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳೊಂದಿಗೆ 7 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಶನಿವಾರ ಮಾಹಿತಿ ನೀಡಿದ್ದರು

“ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಪ್ರಕ್ರಿಯೆ ಆರಂಭವಾಗಿದೆ. ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದು, ಅವರ ಹೆಸರಲ್ಲಿ ಬೇರೆಯವರು 100 ಕೋಟಿಗೂ ಹೆಚ್ಚು ಹಣ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಎಲ್ಲಾ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ. ನಾವು ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಸರಿಯಾದ ಮಾಹಿತಿ ನೀಡುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ತಿಳಿಸಿದ್ದರು.

BJP Ghar Vaapsi: ಈಶ್ವರಪ್ಪ, ಯತ್ನಾಳ್, ಹೆಬ್ಬಾರ್, ಎಸ್‌ಟಿಎಸ್ ಮರಳಿ ಬಿಜೆಪಿಗೆ ?

ಗೃಹಜ್ಯೋತಿ ಯೋಜನೆಯಲ್ಲೂ 1.64 ಲಕ್ಷ ಫಲಾನುಭವಿಗಳಿದ್ದು, ಅವರು ಮತ್ತೆ ಅರ್ಜಿ ಹಾಕಬೇಕಿದೆ. ಒಬ್ಬರ ಹೆಸರಿನಲ್ಲಿ ಐದಾರು ಮೀಟರ್ ಗಳಿದ್ದು, ಆ ಮನೆಯಲ್ಲಿ ಅವರೇ ವಾಸವಿದ್ದಾರಾ? ಬೇರೆಯವರು ಇದ್ದಾರ? ಈ ಯೋಜನೆ ನಮ್ಮ ರಾಜ್ಯದವರಿಗೆ ಸಿಗುತ್ತಿದೆಯೇ, ಬೇರೆ ರಾಜ್ಯದವರಿಗೆ ಸಿಗುತ್ತಿದೆಯೇ ಎಂದು ಪರಿಶೀಲನೆ ಮಾಡಬೇಕಿದೆ. ಫಲಾನುಭವಿಗಳಿಗೆ ನಾವು ಗುರುತಿನ ಚೀಟಿ ನೀಡಬೇಕಾಗಿದೆ. ಕೆಲವೇ ದಿನಗಳಲ್ಲಿ ಅರ್ಜಿ ನೀಡಲಾಗುವುದು” ಎಂದು ಮಾಹಿತಿ ನೀಡಿದ್ದರು.